ಕಲಬುರಗಿ: ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ, ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಯಚೂರು ಜಿಲ್ಲಾ ಸಮಿತಿ ಆಗ್ರಹಿಸುತ್ತದೆ.
ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ, ಕೊಲೆಗಳು ದಿನೇ ದಿನೇ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ,ರಕ್ಷಣೆ ಇಲ್ಲದೆ ಇರುವುದು ಈ ಘಟನೆಗಳಿಗೆ ಕಾರಣವಾಗಿವೆ. ಹುಬ್ಬಳ್ಳಿ ವಿದ್ಯಾನಗರದ ಕೆಎಲ್ಇಯ ಅಡ್ಡಿಯಲ್ಲಿ ಬರುವ ಕರ್ನಾಟಕ ಲಿಂಗಾಯತ ಶಿಕ್ಷಣ ತಾಂತ್ರಿಕ ವಿಶ್ವವಿದ್ಯಾನಿಲಯ (ಬಿವಿಬಿ) ಆವರಣದಲ್ಲಿ ಗುರುವಾರ ರಂದು ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (24) ಎಂಬ ವಿದ್ಯಾರ್ಥಿನಿಯನ್ನು ಹಡಹಾಗಲೆ ಚಾಕುವಿನಿಂದ ಕೊಲೆಮಾಡಿ ಹತ್ಯೆಗೈದಿರುವುದು ಅತ್ಯಂತ ಖಂಡನೀಯ. ಸೂಕ್ತ ತನಿಖೆ ನಡೆಸಿ, ಕೊಲೆಗಾರನಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು.
ಈ ರೀತಿಯ ಪ್ರಕರಣಗಳು ರಾಜ್ಯಾದ್ಯಂತ ನಿರಂತರವಾಗಿ ಮರುಕಳಿಸುತ್ತಿದ್ದು, ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದೇ ನಿರ್ಲಕ್ಷ್ಯ ವಹಿಸುತ್ತಿರುವುದು ಕಾರಣವಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಆದರೆ ಇದನ್ನು ರಾಜ್ಯ ಸರ್ಕಾರ ಜಾರಿ ಮಾಡಿಲ್ಲ.ತಕ್ಷಣ ಇದನ್ನು ರಚನೆ ಮಾಡಬೇಕು.
ಇಂತಹ ಆರೋಪಿಗಳಿಗೆ ಕಾನೂನು ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಶಾಲಾ-ಕಾಲೇಜ್ ಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಬೇಕು, ಮಹಿಳೆಯರು ರಕ್ಷಣೆ ಹಾಗೂ ಭದ್ರತೆಗಾಗಿ ಮಹಿಳಾ ಕಾನೂನುಗಳನ್ನು ಸಮರ್ಪಕವಾಗಿ ಜಾರಿಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಯಚೂರು ಜಿಲ್ಲಾ ಸಮಿತಿಯು ಈ ಮೂಲಕ ಆಗ್ರಹಿಸಿದೆ.