ಕಲಬುರಗಿ: ಪಿಎಸೈ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜೊತೆಗೆ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಆ ಕುರಿತು ಸ್ವತಃ ಅವರೇ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸಲ್ಲಿಸಿದೆ.
ಕೆಪಿಸಿಸಿ ಕಾನೂನು ವಿಭಾಗದ ಉಪಾಧ್ಯಕ್ಷ ಎನ್ ದಿವಾಕರ್, ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಯೋಗ ಬೆಂಗಳೂರಿನ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ.
ಪಿಎಸ್ವೈ ನೇಮಕಾತಿ ಹಗರಣದ ಆರೋಪಿ ದಿವ್ಯಾಹಾಗರಗಿ ವಿರುದ್ದ ತನಿಖೆ ನಡೆಯುತ್ತಿದ್ದು ಹಲವಾರು ಷರತ್ತುಗಳನ್ನು ಮೇಲೆ ಜಾಮೀನು ಪಡೆದು ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಹೀಗಿರುವಾಗ ಬಿಜೆಪಿ ಅಭ್ಯರ್ಥಿ ಆರೋಪಿಯನ್ನು ಭೇಟಿಯಾಗಿ ಅವರೊಂದಿನ ಫೋಟೋಗಳನ್ನು ಹಂಚಿಕೊಂಡಿದ್ದು ನ್ಯಾಯಾಲಯದ ಷರತ್ತುಗಳ ಉಲ್ಲಂಘನೆ ಮಾಡಿರುವುದರ ಜೊತೆಗೆ ಪ್ರಭಾವ ಬಳಸಿಕೊಂಡು ತನಿಖೆಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸುವ ಬಗ್ಗೆ ಕಾಂಗ್ರೆಸ್ ಗೆ ಶಂಕೆ ವ್ಯಕ್ತವಾಗಿದೆ.
ಆರೋಪಿಯನ್ನು ಭೇಟಿ ಮಾಡಿ ಬೆಂಬಲ ಕೇಳುವ ಲಜ್ಜಗೆಟ್ಟ ನಡುವಳಿಕೆಗಳು ಕಾನೂನಿನ ಪಾವಿತ್ರ್ಯತೆ ಹಾಳುಮಾಡುವುದು ಮಾತ್ರವಲ್ಲ ಜೊತೆಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಹಾಳುಮಾಡುತ್ತದೆ.
ಹೀಗಾಗಿ, ಚುನಾವಣಾ ಆಯೋಗ ಕೂಡಲೇ ಮಧ್ಯೆ ಪ್ರವೇಶಿಸಿ ಕಾನೂನು ವ್ಯವಸ್ಥೆಯ ಪಾವಿತ್ರ್ಯತೆ ಮತ್ತು ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…