ಬಿಸಿ ಬಿಸಿ ಸುದ್ದಿ

ನಲವತ್ತು ವರ್ಷದಿಂದ ಸಾರ್ವಜನಿಕ‌ ಸೇವೆಯಲ್ಲಿದ್ದೇನೆ, ಸಂಸದನನ್ನಾಗಿ ಆಯ್ಕೆ ಮಾಡಿ: ರಾಧಾಕೃಷ್ಣ ಮನವಿ

ಕಲಬುರಗಿ: ತಮ್ಮನ್ನು ಕಲಬುರಗಿ ಸಂಸದರನ್ನಾಗಿ ಆಯ್ಕೆ ಮಾಡಿ ಕಳಿಸಿದರೆ ನಗರ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಸಕಲ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ರಾಧಾ ಕೃಷ್ಣ ದೊಡ್ಡಮನಿ ಹೇಳಿದರು.

ಮಾರವಾಡಿ ಹಾಗೂ ಜೈನ್ ಸಮಾಜದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಕಳೆದ‌ ನಲವತ್ತು ವರ್ಷದಿಂದ ತಾವು ಸಾರ್ವಜನಿಕರೊಂದಿಗೆ ಕೆಲಸ ಮಾಡಿಕೊಂಡು ಬರುತ್ತಿದ್ದು ಸಾರ್ವಜನಿಕರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದೇನೆ. ತಮಗೆ ಸಂವಿಧಾನ ಬದ್ಧ ಅವಕಾಶ ದೊರಕಿದರೆ ಮತ್ತಷ್ಟು ಸೇವೆ ಮಾಡುವುದಾಗಿ ಅವರು ವಾಗ್ಧಾನ ಮಾಡಿದರು.

ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರ್ಟಿಕಲ್‌371( ಜೆ ) ಜಾರಿಗೊಳಿಸುವ ಮೂಲಕ ಈ ಭಾಗದ ಜನರಿಗೆ ನ್ಯಾಯ ಕೊಡಿಸಿದ್ದಾರೆ.‌ಇದನ್ನು ಪ್ರತಿಯೊಬ್ಬರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಕೆಕೆಆರ್ ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಮಾತ‌ನಾಡಿ‌ ದಿವಂಗತ ಧರಂ ಸಿಂಗ್ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ‌ ಖರ್ಗೆ ಅವರ 50 ವರ್ಷಗಳ ಸಾರ್ವಜನಿಕರ ಸೇವೆ ನೆನಪಿಸಿಕೊಂಡರು.

ಉಮೇಶ್ ಜಾಧವ ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಕೆಲಸದಲ್ಲಿ 0.1 % ಕೆಲಸ ಮಾಡಿಲ್ಲ. ಅವರ ಸೋಲು ಅಭಿವೃದ್ದಿ ಮೇಲೆ ಹೊಡೆತ ಬಿದ್ದಿದೆ. ಈ ಸಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ ಈ ಸಲದ ಚುನಾವಣೆಯಲ್ಲಿ ಭಾವನಾತ್ಮಕವಾಗಿ ಯೋಚನೆ ಮಾಡದೇ ವಾಸ್ತವದ ಸಂಗತಿ ಹಾಗೂ ಅಭಿವೃದ್ದಿ ಆಧಾರದ ಮೇಲೆ ಯೋಚಿಸಿ ಮತದಾನ ಮಾಡಿ ಎಂದರು.

ಕಲಬುರಗಿ ಅಭಿವೃದ್ದಿಗೆ ನೀಲಿ ನಕ್ಷೆ ಹಾಕಲಾಗಿದೆ. ಸಮಾಜದ ಎಲ್ಲ ವರ್ಗದ ಬೆಂಬಲ ಬೇಕಿದೆ. ಕೃಷಿ ಮಾರುಕಟ್ಟೆ ಹಬ್ ನಿರ್ಮಾಣ ಸೇರಿದಂತೆ ಹಲವಾರು ಹೊಸ ಯೋಜನೆಗಳನ್ನು ಜಾರಿಗೊಳಿಸಲು ಯೋಚಿಸಲಾಗಿದ್ದು ಅವುಗಳು ಅನುಷ್ಠಾನ‌ಗೊಳಿಸಲು ನಿಮ್ಮೆಲ್ಲರ ಆಶೀರ್ವಾದ ಬೇಕಿದೆ.

ಮಾರವಾಡಿ ಹಾಗೂ ಜೈನ್ ಸಮಾಜಕ್ಕೆ ರಾಜಕೀಯ ಸ್ಥಾನಮಾನ ಹಾಗೂ ಪದ್ಮಾವತಿ ದೇವಾಲಯ ನಿರ್ಮಾಣ‌, ದಿಗಂಬರ್ ಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಜತೆಗೆ ಜೈನ್ ಭವನ್ ನಿರ್ಮಾಣ ಕುರಿತಂತೆ ಪ್ರಸ್ತಾಪ ಸರ್ಕಾರದ‌ ಮುಂದಿದ್ದು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮಂತ್ರಿಯಾಗುವ ಎಲ್ಲ ಅವಕಾಶಗಳಿವೆ. ಹೀಗಾಗಿ ಮತದಾರರು ಈ ಸಲ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳಿಸಬೇಕು ಎಂದು ಹರ್ಯಾಣದ ಅಂಬಾಲ ಮೂಲದ ಅಶೋಕ ಜೈನ್ ಮನವಿ ಮಾಡಿದರು.

ವೇದಿಕೆಯ ‌ಮೇಲೆ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತೀಮಾ, ಜಿಡಿಎ ಅಧ್ಯಕ್ಷ ಮಜರ್ ಖಾನ್, ಮಾರವಾಡಿ ಸಮಾಜದ ಅಧ್ಯಕ್ಷ ಲಕ್ಷ್ಮೀ ರಮಣ್ ಸೇರಿದಂತೆ ಹಲವರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

24 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

24 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

24 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago