ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಬಿ.ಎಸ್.ಯಡಿಯೂರಪ್ಪ

ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಈ ಭಾಗದ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಭಾಗದ ಜನರ ಭಾವನೆಗೆ ಬೆಲೆಕೊಟ್ಟು ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಉದ್ಘೋಷಣೆ ಮಾಡಲು ಸಂತಸದಿಂದಬಂದಿದ್ದೇನೆ. ಪ್ರದೇಶ ಮರುನಾಮಕರಣ ಮಾಡಿದ್ದಕ್ಕೆ ಮಾತ್ರ ಅಭಿವೃದ್ಧಿ ಆಗುವುದಿಲ್ಲ. ಬದಲಾಗಿ ಇಲ್ಲಿನ ಜನರ ಅಶೋತ್ತರಗಳನ್ನು ಈಡೇರಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ಆ ಮುಖೇನ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು.  ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಹಣಕಾಸಿನ ತೊಂದರೆ ಆಗಬಹುದು, ಆದರೆ ಮುಂದಿನ ವರ್ಷ ಆಯವ್ಯಯದಲ್ಲಿ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಕೇವಲ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಮುಂದಿನ ದಿನದಲ್ಲಿ ಈ ಭಾಗದವರನ್ನು ಸಚಿವ ಸಂಪುಟಕ್ಕೆ ಪರಿಗಣಿಸಲಾಗುವುದು ಎಂದು ಸ್ಪಷ್ಠನೆ ನೀಡಿದರು. ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಬಿ. ಶರತ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸಂಸದ ಡಾ.ಉಮೇಶ ಜಾಧವ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭೆ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೆಲ್ಕೂರ, ಎಂ.ವೈ.ಪಾಟೀಲ, ಸುಭಾಷ ಗುತ್ತೇದಾರ, ಡಾ. ಅವಿನಾಶ ಜಾಧವ, ಸುರಪುರ ಶಾಸಕ ರಾಜುಗೌಡ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ರವಿ ಕುಮಾರ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಾಬುರಾವ ಚಿಂಚನಸೂರು, ಮಾಜಿ ಎಂ.ಎಲ್.ಸಿ. ಶಶೀಲ ಜಿ. ನಮೋಶಿ, ಅಮರನಾಥ ಪಾಟೀಲ, ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago