ನೇಹಾ ಹಿರೇಮಠ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

0
54

ಶಹಾಬಾದ: ಹುಬ್ಬಳ್ಳಿಯ ಬಿವಿಬಿ ಕಾಲೆಜಿನ ಎಂ.ಸಿ.ಎ.ವಿಧ್ಯಾರ್ಥಿನಿ ನೇಹಾ ಹಿರೇಮಠ ಲವ ಜಿಹಾದಿಯ ಕಾರಣಕ್ಕಾಗಿ ಫಯಾಜ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ರವಿವಾರ ನಾಗರಿಕ ಹಿತರಕ್ಷಣಾ ವೇದಿಕೆ ಬ್ರಹತ್ ಪ್ರತಿಭಟನೆ ನಡೆಸಿದರು.

ಅರುಣಕುಮಾರ ಪಟ್ಟಣಕರ ಮಾತನಾಡಿ, ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಫಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ ಇದು ಖಂಡನೀಯ.

Contact Your\'s Advertisement; 9902492681

ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ, ಕಾಲೇಜು ಕ್ಯಾಂಪಸ್‍ಗಳು ಸುರಕ್ಷತೆಯ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಪೆÇಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು, ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಸಿಬಿಐ ಗೆ ಹಸ್ತಾಂತರ ಮಾಡಬೇಕೆಂದು ಒತ್ತಾಯಿಸಿದರು.

ಚಂದ್ರಕಾಂತ ಗೊಬ್ಬೂರಕರ ಮಾತನಾಡಿ, ನೇಹಾ ಹಿರೇಮಠಗೆ ಬರ್ಬವಾಗಿ ಕೊಲೆ ಮಾಡಿರುವುದು ನಾಗರಿÀಕ ಸಮಾಜ ತಲೆ ತಗ್ಗಿಸುವಂತ ಕೃತ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ. ಹಾಗೂ ಗೃಹ ಸಚಿವರು ನೀಡುತ್ತಿರುವ ಹೇಳಿಕೆಗಳನ್ನು ಗಮನಿದರೆ ಇದರಲ್ಲಿ ದಾರಿ ತಪ್ಪಿಸುವ ಸಂಶಯ ವ್ಯಕ್ತವಾಗುತ್ತಿದೆ. ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಸೂಕ್ತ ತನಿಖೆ ಕೈಗೊಂಡು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಶ್ಯಾಸ್ರ್ರಿ ಚೌಕದಿಂದ ನೆಹರು ಚೌಕವರೆಗೆ ಮೆರವಣಿಗೆ ಮುಖಾಂತರ ತೆರಳಿ ಘನತೆವೆತ್ತ ಗೌರವಾನ್ವಿತ ರಾಜ್ಯ ರಾಜ್ಯಪಾಲರಿಗೆ, ನಗರದ ಆರಕ್ಷಕ ನಿರೀಕ್ಷಕರ ಮುಖಾಂತರ ಮನವಿಪತ್ರ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here