ಆಳಂದ: ೧೨ನೇ ಶತಮಾನದಲ್ಲಿ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ಮೂಲಕ ಕಲ್ಯಾಣ ರಾಜ್ಯದ ಕಂಡ ಕನಸು ನನಸಾಗಿಸಲು ಸಾಮೂಹಿಕ ಪ್ರಯತ್ನ ಅಗತ್ಯವಾಗಿದೆ ಎಂದು ತಹಸೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ಅವರು ಇಂದಿಲ್ಲಿ ಹೇಳಿದರು.
ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಮಂಗಳವಾರ ತಾಲೂಕು ಆಡಳಿತ ಹಮ್ಮಿಕೊಂಡ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೈ.ಕ.ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಅಳಸಿಹಾಕಿ ಕಲ್ಯಾಣ ಕರ್ನಾಟಕ ಎಂಬ ನಾಮಕರಣ ಆಗಿರುವುದು ಈ ಭಾಗದಲ್ಲಿ ಶರಣರು ಕೈಗೊಂಡ ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ರಾಂತಿಗೆ ಸಂದಗೌರವ. ಅವರ ಆಶಯಗಳನ್ನು ಈಡೇರಿಸುವ ಕಾರ್ಯ ನಡೆಯಬೇಕು. ನಾವೂ ಕೂಡ ಇಂದು ಎಲ್ಲಾ ರಂಗದಲ್ಲಿ ಪ್ರಗತಿ ಪಥದತ್ತ ಸಾಗಿ ಕಲ್ಯಾಣದ ಅರ್ಥವನ್ನು ಸಾರ್ಥಕ ಪಡಿಸಲು ಛಲತೊಡಬೇಕಾಗಿದೆ ಎಂದು ಸಲಹೆ ನೀಡಿದರು.
ಉಪನ್ಯಾಸಕ ಸಂಜಯ ಪಾಟೀಲ ಕಲ್ಯಾಣ ಕರ್ನಾಟಕ ಕುರಿತು ಉಪನ್ಯಾಸ ನೀಡಿದರು. ಗ್ರೇಡ್-೨ ತಹಸೀಲ್ದಾರ ಬಿ.ಜಿ. ಕುದರಿ, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಸಂಜಯ ರೆಡ್ಡಿ, ಜಿಪಂ ಎಇಇ ಮಲ್ಲಿಕಾರ್ಜುನ ಕಾರಬಾರಿ, ಸಿಡಿಪಿಒ ಶ್ರೀಕಾಂತ ಮೇಂಗಜಿ, ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ ಫುಲಾರ ಉಪಸ್ಥಿತರಿದ್ದರು. ಪುರಸಭೆ ಸದಸ್ಯ ಶಿವುಪುತ್ರ ನಡಗೇರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಕಾಶ ಮಾನೆ, ಮುಖಂಡ ದಯಾನಂದ ಶೇರಿಕಾರ, ದತ್ತಪ್ಪ ಹೊನ್ನಳಿ, ಅರಣ್ಯ ಇಲಾಖೆಯ ರಾಘವೇಂದ್ರ, ಅರವಿಂದ ಜಾಪಳ, ನ್ಯಾಯವಾದಿ ಸಂಜಯ ನಾಯಕ, ವಿ.ಎ ರಮೇಶ ಮಾಳಿ ಅನೇಕರು ಭಾಗವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡರಂಗಪ್ಪ ಸ್ವಾಗತಿಸಿದರು. ಶಿಕ್ಷಕ ಕಲ್ಯಾಣಪ್ಪ ಬಿಜ್ಜರಗಿ ನಿರೂಪಿಸಿದರು. ಶಿರಸ್ತೆದಾರ ರಾಕೇಶ ಶೀಲವಂತ ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…