ಲೋಕಸಭೆಗೆ ಆರಿಸಲು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮತದಾರರಿಗೆ ಮನವಿ

ಕಲಬುರಗಿ: ಇದು ಅತ್ಯಂತ ಮಹತ್ವದ ಚುನಾವಣೆ. ಇದು ಕೇವಲ ನನ್ನ ಚುನಾವಣೆಯಲ್ಲ.‌ ದೇಶ ಹಾಗೂ ಕಲಬುರಗಿ ಜಿಲ್ಲೆಯ ಅಭಿವೃದ್ದಿಗಾಗಿ ನಡೆಯುತ್ತಿರುವ ಚುನಾವಣೆ. ಹಾಗಾಗಿ ಈ ಸಲ ತಮ್ಮನ್ನು ಆಯ್ಕೆ ಮಾಡಿ ಅಭಿವೃದ್ದಿಗೆ ಸಹಕರಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮನವಿ ಮಾಡಿದರು.

ಕಲಬುರಗಿ ಉತ್ತರ ವಿಧಾನಸಭೆ ಕ್ಷೇತ್ರದ ಕಪನೂರು ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಮತಯಾಚಿಸಿ ಅವರು ಮಾತನಾಡುತ್ತಿದ್ದರು.

ಕಳೆದ ಐದು ವರ್ಷದ ಅವಧಿಯಲ್ಲಿ ಅಭಿವೃದ್ದಿ ಕೆಲಸಗಳು ನಿಂತು ಹೋಗಿದ್ದು, ತಮಗೆ ಒಂದು ಅವಕಾಶ ನೀಡಿ ಸಂಸದರನ್ನಾಗಿ ಆಯ್ಕೆ ಮಾಡಿ ಕಳಿಸಿದರೇ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಎಂದು ಅವರು ಹೇಳಿದರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ ಸಂಸದರಾಗಿ ಆಯ್ಕೆಯಾಗಿ ಹೋದ ಮೇಲೆ ಉಮೇಶ ಜಾಧವ್ ಐದು ವರ್ಷದಲ್ಲಿ ಏನು ಕೆಲಸ‌ ಮಾಡಿದ್ದೀರಿ ಅದರ ಲೆಕ್ಕ ಕೊಡಿ ಎಂದು ಜನರು ಆಗ್ರಹಿಸುತ್ತಿದ್ದಾರೆ. ಆದರೆ ಜನರಿಗೆ ಉತ್ತರ ನೀಡಲು ಅವರಿಂದ ಆಗುತ್ತಿಲ್ಲ ಹಾಗಾಗಿ ಹೋದಲೆಲ್ಲ ಅವರಿಗೆ ಗೋ ಬ್ಯಾಕ್ ಎಂದು ಅವರ ಪಕ್ಷದ ಕಾರ್ಯಕರ್ತರೇ ಕೂಗುತ್ತಿದ್ದಾರೆ ಎಂದರು.

ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗಿಳಿಸಿದೆ. ಅಗತ್ಯದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಸರಬರಾಜು ಮಾಡಲಿಲ್ಲ. ಆದರೂ ಕೂಡಾ ರಾಜ್ಯ ಸರ್ಕಾರ ಪ್ರತಿಯೊಬ್ಬರು ಅಕ್ಕಿ ಖರೀದಿ ಮಾಡಲು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕಿದೆ. ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿ‌ಗೆ ಉಚಿತ ಬಸ್ ಪ್ರಯಾಣಕ್ಕೆ ಅನುಕೂಲ‌ ಮಾಡಿಕೊಡಲಾಗಿದೆ. ಮಹಿಳೆಯರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇದರಿಂದ ದೇವಾಲಯಗಳ ಹುಂಡಿ, ಅರ್ಚಕರ ಆರತಿ ತಟ್ಟೆ ಎರಡೂ ತುಂಬುತ್ತಿವೆ ಎಂದರು.

ಮೋದಿ ಪರಿವಾರ ಎಂದು ಜಾಹೀರಾತು ನೀಡಿದ್ದನ್ನು ಪ್ರಸ್ತಾಪಿಸಿದ ಖರ್ಗೆ ಸ್ವಂತ ಪರಿವಾರವನ್ನೆ ನೋಡಿಕೊಳ್ಳಲು ಆಗದ ಮೋದಿ ದೇಶದ ಜನರನ್ನು ತಮ್ಮ ಪರಿವಾರ ಎಂದು ಕರೆದಿದ್ದಾರೆ ಎಂದು ಸಚಿವರು ವ್ಯಂಗ್ಯವಾಡಿದರು.

ಜಾಧವ್ ವಂದೇ ಭಾರತ ಟ್ರೇನ್ ಬಿಡಿಸಿದ್ದೆ ದೊಡ್ಡ ಸಾಧನೆ ಎಂಬಂತೆ ಬಿಂಬಿಸುತ್ತಿದ್ದಾರೆ. ‘ವಂದೇ ಭಾರತ ನಡೆದಿದ್ದು ಕೇವಲ ಒಂದೇ ವಾರ’ ಎಂದು ಟೀಕಿಸಿದರು. ಕಾಂಗ್ರೆಸ್ ಏನು ಮಾಡಿದೆ ಎಂದು ಜಾಧವ್ ಕೇಳುತ್ತಿದ್ದಾರೆ, ಅವರು ಓದಿದ್ದು ಕಾಂಗ್ರೆಸ್ ಕಟ್ಟಿದ ಕಾಲೇಜಿನಲ್ಲಿ. ನಂತರ ಕೆಲಸ ದೊರಕಿದ್ದು ಕೂಡಾ ಕಾಂಗ್ರೆಸ್ ಸ್ಥಾಪಿಸಿದ ಆಸ್ಪತ್ರೆಗೆ ಯಲ್ಲಿ. ಆಮೇಲೆ ರಾಜಕೀಯ ಪ್ರವೇಶ ಮಾಡಿದ್ದು ಕಾಂಗ್ರೆಸ್ ನಲ್ಲಿ ತದನಂತರ ಕೆಲಸಕ್ಕೆ ರಾಜೀನಾಮೆ ನೀಡಿ ಸೇರಿದ್ದು ಕೂಡಾ ಕಾಂಗ್ರೆಸ್ ನಲ್ಲೇ ಹಾಗೂ ಶಾಸಕ ಆಗಿದ್ದು ಕೂಡಾ ಕಾಂಗ್ರೆಸ್ ನಿಂದಲೇ. ಜಾಧವ ಅವರೇ ಕಾಂಗ್ರೆಸ್ ಮತ್ತೇನು ಮಾಡಬೇಕು ? ಎಂದರು.

ರಾಧಾಕೃಷ್ಣ ದೊಡ್ಡಮನಿ ಅವರಿಗೆ ಒಂದು ಅವಕಾಶ ಕೊಟ್ಟು ನೋಡಿ, ಜಿಲ್ಲೆಗೆ ತ್ರಿಬಲ್ ಗ್ಯಾರಂಟಿ‌ ನಾನು ಕೊಡುತ್ತೇನೆ ಎಂದು ಪ್ರಿಯಾಂಕ್ ಆಶ್ವಾಸನೆ ನೀಡಿದರು.

ಸಚಿವ ರಹೀಂ ಖಾನ್ ಮಾತನಾಡಿ, ಖರ್ಗೆ ಕುಟುಂಬ ಇಡೀ ಕಲ್ಯಾಣ ಕರ್ನಾಟಕ ನಾಡಿನ ಜನರ ಸೇವೆ ಮಾಡುತ್ತಿದೆ. ಈಗ ಮತ್ತೊಮ್ಮೆ ನಿಮ್ಮ ಬಳಿಗೆ ಮತಯಾಚನೆಗೆ ಬಂದಿದ್ದೇವೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ ಲಿಂಗಾಯತರಿಗೆ ಬಿಜೆಪಿ ಅನ್ಯಾಯ ಮಾಡಿದೆ. ಗಟ್ಟಿಮುಟ್ಟಾಗಿದ್ದ ಯಡಿಯೂರಪ್ಪ ಅವರನ್ನ ಅಧಿಕಾರದಿಂದ ಇಳಿಸಿದರು. ಆದರೆ, ಕಾಂಗ್ರೆಸ್ ನಿಜಲಿಂಗಪ್ಪ, ವಿರೇಂದ್ರ ಪಾಟೀಲ, ಬಿ.ಡಿ. ಜತ್ತಿ ಸೇರಿದಂತೆ ಹಲವರನ್ನು ಉನ್ನತ ಹುದ್ದೆಗಳಿಗೆ ಆಯ್ಕೆ ಮಾಡಿತ್ತು ಎಂದರು.

ಶಾಸಕಿ ಕನೀಜ್ ಫಾತೀಮಾ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಗೆಲ್ಲಿಸಿ ಕಳಿಸಿ ಎಂದು ಮನವಿ ಮಾಡಿದರು. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ದೇಶದ ಜನರ ಒಳಿತಿಗಾಗಿ ಹಾಗೂ ಸಂವಿಧಾನದ ರಕ್ಷಣೆಗಾಗಿ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ‌. ಬಿಜೆಪಿ ಕೇವಲ ಅಲ್ಪಸಂಖ್ಯಾತರ ವಿರೋಧಿ ಯಲ್ಲ ಅದು ಎಲ್ಲರ ವಿರೋಧಿಯಾಗಿದೆ ಎಂದರು.

ಇದೆ ಸಂದರ್ಭದಲ್ಲಿ ಬಿಜೆಪಿಯಿಂದ ಹಲವಾರು ಕಾರ್ತಕರ್ತರು ಕಾಂಗ್ರೆಸ್ ಸೇರಿದರು.

ವೇದಿಕೆಯ ಮೇಲೆ ಎಂ ಎಲ್ ಸಿ ಅರವಿಂದ ಅರಳಿ, ಡಿಸಿಸಿ ಅದ್ಯಕ್ಷ ಜಗದೇವ ಗುತ್ತೇದಾರ, ರೇಣುಕಪ್ಪ ಪೊಲೀಸ್ ಪಾಟೀಲ್, ದೇವೇಂದ್ರಪ್ಪ ಮರತೂರು, ರಾಜು ಕಪನೂರು, ದೇವೆಂದ್ರಪ್ಪ ಕಪನೂರು, ರಾಜಗೋಪಾಲರೆಡ್ಡಿ, ಲಚ್ಚಪ್ಪ ಜಮಾದಾರ, ರಮೇಶ ಬಿರಾದಾರ ಸೇರಿದಂತೆ ಹಲವರಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

3 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

4 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

6 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

17 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

19 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420