ಕೋಲಿ ಕಬ್ಬಲಿಗ ಸಮಾಜ‌ ಎಸ್ ಟಿಗೆ ಸೇರ್ಪಡೆ ವಿಚಾರ: ಕೇಂದ್ರಕ್ಕೆ ಮತ್ತೊಮ್ಮೆ ಪ್ರಸ್ತಾವನೆ‌ ಸಲ್ಲಿಕೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೋಲಿ ಕಬ್ಬಲಿಗ ಸಮಾಜವನ್ನು ಎಸ್ ಟಿ ಗೆ ಸೇರಿಸುವ ರಾಜ್ಯದ ಪ್ರಸ್ತಾವನೆಯನ್ನು ಕೇಂದ್ರ ತಿರಸ್ಕರಿಸಿದೆ. ಆದರೆ ಸಮಾಜದ ಮುಖಂಡರೊಂದಿಗೆ ಚರ್ಚಿಸಿ ಮತ್ತೊಮ್ಮೆ ಪ್ರಸ್ತಾವನೆಯನ್ನು ಖುದ್ದಾಗಿ ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಶ್ರೀ ಶರಣಬಸವೇಶ್ವರ ಇಂಪಿರಿಯಲ್ (ಅಪ್ಪಾ ಪಬ್ಲಿಕ್ ಶಾಲೆ) ಹಾಲನಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಕೋಲಿ ಕಬ್ಬಲಿಗ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜವನ್ನು ಎಸ್ ಟಿ ಗೆ ಸೇರಿಸುವುದಾಗಿ ಭರವಸೆ ನೀಡಿ ನಿಮ್ಮಿಂದ ಮತ ಪಡೆದವರು ಈಗ ಎಲ್ಲಿದ್ದಾರೆ?
ಎಂದು ಪ್ರಶ್ನಿಸಿದ ಸಚಿವರು, ಸಮಾಜವನ್ನು ದಾರಿ ತಪ್ಪಿಸಿ ಮತ ಪಡೆದ ಸಂಸದ ಉಮೇಶ್ ಜಾಧವ ಯಾವುದೇ ಕ್ರಮ ಕೈಗೊಂಡಿಲ್ಲ. ಅವರು ಕೇವಲ ಮನವಿ ಪತ್ರ ( MP ) ಸಲ್ಲಿಸಿ ಫೋಟೋ ತೆಗೆಸಿಕೊಳ್ಳುವುದರಲ್ಲೇ ನಿಸ್ಸಿಮರು ಎಂದು ತಿವಿದರು.

ಕಾಂಗ್ರೆಸ್ ಪಕ್ಷ ಕೋಲಿ ಕಬ್ಬಲಿಗ ಸಮಾಜ ಸೇರಿದಂತೆ ಹಿಂದುಳಿದ ವರ್ಗದ ಸಾಮಾಜಿಕ‌ ಹಾಗೂ ಆರ್ಥಿಕ‌ ಸುಭದ್ರತೆಗೆ ಕ್ರಮ ಕೈಗೊಂಡಿದೆ.” ನೀವು ಅಂಬಿಗರು ನಂಬಿಕಸ್ಥರು. ನಿಮ್ಮನ್ನು ನಂಬಿ ನಿಮ್ಮ ದೋಣೆಯಲ್ಲೇ ಕುಳಿತಿದ್ದೇವೆ. ನಮ್ಮನ್ನು ದಂಡೆಗೆ ಮುಟ್ಟಿಸಿ ” ಎಂದು ಮಾರ್ಮಿಕವಾಗಿ ಹೇಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.

ನಿಜ ಶರಣ ಅಂಬಿಗರ ಚೌಡಯ್ಯನವರ ಪ್ರತಿಮೆಯನ್ನು ಬೆಂಗಳೂರು ಹಾಗೂ ಕಲಬುರಗಿ ಯಲ್ಲಿ ಸ್ಥಾಪಿಸುವುದಾಗಿ ಭರವಸೆ ನೀಡಿದ ಸಚಿವರು, ಕೇವಲ ಪ್ರತಿಮೆ ಮಾತ್ರ ಸ್ಥಾಪನೆ ಮಾಡಿದರೆ ಸಾಲದು ಚೌಡಯ್ಯನವರ ವಚನಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.

ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ ಪಾಟೀಲ, ಮಾತನಾಡಿ, ಸಮಾಜದ ನ್ಯಾಯಯುತ ಬೇಡಿಕೆ‌ ಈಡೇರಿಕೆಗೆ ಕಾಂಗ್ರೆಸ್ ಅವಧಿಯಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೆಲ ಕಾನೂನು ತೊಡಕುಗಳಿಂದಾಗಿ ಪ್ರಸ್ತಾಪವನೆ ವಾಪಸ್ ಬಂದಿದೆ. ಹಾಗಾಗಿ ಇದು ಭಾವನಾತ್ಮಕ ವಿಷಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ನಿರ್ಣಯ ಮಾಡಬೇಕಾಗಿದೆ. ಈ‌ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಸಮಾಜದೊಂದಿಗೆ ಇದೆ ಎಂದರು.

ಕೋಲಿ ಸಮಾಜವನ್ನು ಎಸ್ ಟಿ ಪಟ್ಟಿಗೆ ಸೇರಿಸದೆ ಇರುವುದಕ್ಕೆ ಬಿಜೆಪಿ ಸರ್ಕಾರದ ಧೋರಣೆಯೇ ಕಾರಣ ಎಂದ ಆರೋಪಿಸಿದ ಅವರು ಹಿಂದುಳಿದ ವರ್ಗಗಳ ಅಭಿವೃದ್ದಿ ಬಿಜೆಪಿ ಗೆ ಬೇಕಿಲ್ಲ ಅದು ಯಾವೊತ್ತು ಸಾಮಾಜಿಕ ನ್ಯಾಯ ಕೊಟ್ಟಿಲ್ಲ. ಈ ಸಮಾಜಕ್ಕೆ‌ ನ್ಯಾಯ ಕೊಡುವ ಕೆಲಸ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ಡಾ. ಶರಣಪ್ರಕಾಶ ಅಭಿಪ್ರಾಯಪಟ್ಟು ನಮ್ಮ ಸರ್ಕಾರ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದರೆ ಇದು ಸಾಧ್ಯವಾಗಲಿದೆ ಎಂದರು.

ಮೀಸಲಾತಿ ತೆಗೆಯುವುದು‌ ಬಿಜೆಪಿಯ ಏಕೈಕ ಅಜೆಂಡಾ ಎಂದ ಸಚಿವರು, ಈ ಸಲ ನಾಲ್ಕು ನೂರು ಸೀಟು ಬಂದರೆ‌ ಸಂವಿಧಾನ‌ ಬದಲಾಯಿಸಲಾಗುವುದು ಎಂದು ಸಂಸದ ಅನಂತಕುಮಾರ್ ಹೇಳಿದ್ದಾರೆ. ಆದರೆ, ಅಂಬೇಡ್ಕರ್ ಬಂದರೂ‌ ಸಂವಿಧಾನ ಬದಲಾವಣೆ ಅಸಾಧ್ಯ ಎಂದು ಮೋದಿ ಹೇಳುತ್ತಾರೆ. ಒಟ್ಟಾರೆ ಸಂವಿಧಾನ ಬದಲಾವಣೆ ಅವರ ಏಕೈಕ ಉದ್ದೇಶವಾಗಿದೆ ಎಂದರು.

ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಮಾತನಾಡಿ, ಕೋಲಿ ಸಮಾಜವನ್ನು ಎಸ್ ಟಿ ಗೆ ಸೇರಿಸಿದ ನಂತರವಷ್ಟೇ ತಾವು ನಿರ್ಗಮಿಸುವುದಾಗಿ ಘೋಷಿಸಿದರು.

ಕೋಲಿ ಸಮಾಜವನ್ನು ಎಸ್ ಟಿ ಗೆ ಸೇರಿಸುವ ಹೋರಾಟಕ್ಕೆ ವಿಠಲ್ ಹೇರೂರು ನಾಂದಿ ಹಾಡಿ ಅದೇ ಹೋರಾಟದಲ್ಲೇ ನಮ್ಮನ್ನಗಲಿದರು. ಈಗ ಮತ್ತೆ ಅದೇ ರೀತಿಯಲ್ಲಿ ಹೋರಾಟ ಮುಂದುವರೆಸಬೇಕಿದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ನಮ್ಮ ಸಮಾಜ‌ ಈ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಎಲ್ಲರೂ ಒಗ್ಗೂಡಿ ಮತ ಹಾಕಲಿದ್ದಾರೆ ಎಂದರು.

ಈ ಚುನಾವಣೆಯಲ್ಲಿ ಗುರುಮಠಕಲನಲ್ಲಿ ಬಾಬುರಾವ ಚಿಂಚನಸೂರ ನೇತೃತ್ವದಲ್ಲಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಬರುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಚಿವ ಸಂಪುಟದಲ್ಲಿ
ಎಸ್ಟಿಗೆ ಸೇರಿಸುವ ಪ್ರಸ್ತಾವನೆ ಸಿಎಂ ಸಲ್ಲಿಸುವ ಕುರಿತು ಮತ್ತು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗುವ ಭರವಸೆ ಸಚಿವ ಪ್ರಿಯಾಂಕ ಖರ್ಗೆ ಅವರು ನೀಡಬೇಕು.
ಕೋಲಿ ಸಮುದಾಯದ ರಾಜ್ಯಮಟ್ಟದ ಸಮಾವೇಶವನ್ನು ಇದೇ ತಿಂಗಳು 25 ರಿಂದ 27 ರವೆಗಿನ ಯಾವುದಾದರೂ ದಿನಾಂಕವನ್ನು ನಿಗದಿಪಡಿಸಿ ನಡೆಸಲಾಗುವುದು ಎಂದರು.

ಕೋಲಿ ಸಮಾಜದ ಮುಖಂಡ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ ರೆಡ್ಡಿ ಪ್ರಾಸ್ತಾವಿಕ ಮಾತನಾಡಿ, ಜಾತಿ ಜಾತಿಗಳಲ್ಲಿ ಜಗಳ, ಬೆಲೆ ಏರಿಕೆ ಹಚ್ಚಳವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಈ ಸರ್ಕಾರ ಕೋಲಿ ಸಮಾಜಕ್ಕೆ ಸಹಾಯ ಮಾಡಲು ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಂದಾಗಿದೆ. ಆದರೆ ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಅದಕ್ಕೆ ಅವಕಾಶ ನೀಡುತ್ತಿಲ್ಲ ಹಾಗಾಗಿ ಕೇಂದ್ರದಲ್ಲಿ ಇಂಡಿಯಾ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಎಸ್ಟಿಗೆ ಸೇರಿಸಲು ಸಾಧ್ಯವಾಗಲಿದೆ. ಆದ್ದರಿಂದ ನಮ್ಮ ಸಮಾಜದ ಎಲ್ಲ ಮುಖಂಡರು ಭಿನ್ನಾಭಿಪ್ರಾಯ ಬದಿಗಿಟ್ಟು ಕಲಬುರಗಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಹೆಚ್ಚಿನ ಮತ ನೀಡಿ ಆರಿಸಿ ಕಳುಹಿಸಬೇಕೆಂದು ಮನವಿ ಮಾಡಿದರು.

ಗುರುಮಠಕಲನ ಮುಖಂಡ ವಿಜಯಕುಮಾರ್ ನಿರೇಟಿ ಮಾತನಾಡಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಸಮಾಜದ ಮುಖಂಡರನ್ನು ಬೆಳಸಿದ್ದಾರೆ. ತಿಪ್ಪಣ್ಣಪ್ಪ ಕಮಕನೂರ, ಬಾಬುರಾವ ಚಿಂಚನಸೂರ, ಭೀಮಣ್ಣ ಸಾಲಿ, ಶರಣಪ್ಪ ಮಾನೇಗಾರ ಎಲ್ಲರೂ ಒಂದಾಗಿದ್ದು, ಇವರ ನೇತೃತ್ವದಲ್ಲಿ ನಾವೆಲ್ಲ ಸೇರಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಸಾಯಿಬಣ್ಣ ನೀಲಪ್ಪಗೋಲ ಮಾತನಾಡಿ, ನಮ್ಮ ಸಮಾಜದ ಒಂದೇ ಬೇಡಿಕೆಯೆಂದರೆ ಅದು ಎಸ್ಟಿ ಸೇರಿಸಬೇಕಾಗಿದೆ ಎಂದರು.

ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸುವುದಾಗಿ ಬಿಜೆಪಿ ನಾಯಕರು ರಕ್ತದಲ್ಲಿ ಬರೆದುಕೊಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದಾರೆ. ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದರು.

ಸಂತೋಷ ಬೆಣ್ಣೂರ ಮಾತನಾಡಿ, ಕಲಬುರಗಿಯಲ್ಲಿ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಮೂರ್ತಿ ಸ್ಥಾಪನೆ ಮಾಡಲು ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಮನವಿ ಮಾಡಿದರು.

ಶರಣಪ್ಪ ಮಾನೇಗಾರ ಮಾತನಾಡಿ, ನಮ್ಮ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಮೀಸಲಾತಿ ವಿರೋಧಿ ಬಿಜೆಪಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗುವ ಯೋಗ ಬರಲಿದೆ. ಖರ್ಗೆ ಅವರಿಂದಲೇ ನಮ್ಮ ಸಮಾಜ ಎಸ್ಟಿಗೆ ಸೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಸವರಾಜ ಬೂದಿಹಾಳ ಮಾತನಾಡಿ, ಎಸ್ಟಿ ವಿಷಯ ಕುರಿತು ರಾಜಕೀಯ ಮಾಡಲಾಗುತ್ತಿದೆ. ಸಮಾಜ ಹೆಸರಿನಲ್ಲಿ ರಾಜಕೀಯ ಮಾಡಬೇಡಿ, ಸಮಾಜಕ್ಕಾಗಿ ಹೋರಾಡೋಣ ಎಂದರು.

ಭೀಮಣ್ಣ ಸಾಲಿ ಮಾತನಾಡಿ, ಬಾಬುರಾವ ಚಿಂಚನಸೂರ ಮತ್ತು ತಿಪ್ಪಣ್ಣಪ್ಪ ಕಮಕನೂರ ಅವರು ಹಾವು ಮುಂಗಲಿಯಾಗಿದ್ದರು. ಪ್ರಿಯಾಂಕ ಖರ್ಗೆ ನೇತೃತ್ವದಲ್ಲಿ ಒಂದಾಗಿರುವುದರಿಂದ ಸಮಾಜಕ್ಕೆ ಮತ್ತು ಪಕ್ಷ ಶಕ್ತಿ ಬಂದಿದೆ. ವೈಯಕ್ತಿಕ ವೈಮನಸ್ಸು ಬಿಟ್ಟು ಎಲ್ಲ ಮುಖಂಡರು ಕಾಂಗ್ರೆಸ್ ಗೆ ಮತ ನೀಡಬೇಕು ಎಂದರು.

ಸಭೆಯಲ್ಲಿ ದತ್ತಾತ್ರೆಯ ರೆಡ್ಡಿ, ಲಚ್ಚಪ್ಪ ಜಮಾದಾರ, ರಮೇಶ ನಾಟೇಕಾರ್, ಬಸವರಾಜ ಹರವಾಳ, ಸಾಯಿಬಣ್ಣ ನೀಲಪ್ಪಗೋಳ, ವಾಣಿಶ್ರಿ ಸಗರಕರ್, ಹುಲಿಗೆಪ್ಪ ಕಲಕಗಿರಿ ಮತ್ತು ಎಲ್ಲಾ ತಾಲ್ಲೂಕು ಅಧ್ಯಕ್ಷರು ಹಾಗೂ ಮುಖಂಡರು ಇದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420