ನೇಹಾ ಹತ್ಯೆ ಪ್ರಕರಣ ಬಿಜೆಪಿ ದುರುಪಯೋಗ

0
35

ವಾಡಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು, ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಬೇಕು ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‍ಯುಸಿಐ) ಕಮ್ಯುನಿಸ್ಟ್ ಪಕ್ಷ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪಾ ಆರ್.ಕೆ, ನೇಹಾ ಹತ್ಯೆ ಘಟನೆಯನ್ನು ಖಂಡಿಸಿದ್ದಾರೆ. ಯುವತಿ ಪ್ರೀತಿ ನಿರಾಕರಣೆ ಮಾಡಿದ್ದಾಳೆ ಎಂಬ ಕಾರಣಕ್ಕೆ ಕೊಲೆ ಮಾಡುವ ಹಂತಕ್ಕೆ ಯುವಕನ ಮನಸ್ಥಿತಿ ತಲುಪಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಘಟನೆಗೆ ಕಾರಣನಾದ ಆರೋಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.

Contact Your\'s Advertisement; 9902492681

ನೇಹಾ ಹತ್ಯೆ ಪ್ರಕರಣವನ್ನು ಬಿಜೆಪಿ ಪಕ್ಷ ಕೋಮು ಮತ್ತು ಚುನಾವಣಾ ರಾಜಕೀಯದ ಬಣ್ಣ ನೀಡುತ್ತಿದೆ. ರಾಜ್ಯದಲ್ಲಿ ಭಿನ್ನಮತ ಮತ್ತು ನಾಯಕತ್ವದ ಬಿಕ್ಕಟ್ಟಿನಲ್ಲಿರುವ ಬಿಜೆಪಿ ಪಕ್ಷಕ್ಕೆ ಜನರ ಮುಂದೆ ಪರಿಣಾಮಕಾರಿಯಾಗಿ ಹೇಳಿಕೊಳ್ಳುವ ವಿಷಯವೇನೂ ಇಲ್ಲದೆ ಸಪ್ಪಗಾಗಿತ್ತು. ಇಂತಹ ಸಂದರ್ಭದಲ್ಲಿ ನಡೆದ ಈ ದುರ್ಘಟನೆಯನ್ನು ಬಿಜೆಪಿಯು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಚುನಾವಣಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಬೇಕು.

ಈ ವಿವಾದ ಕೋಮು ದಳ್ಳುರಿಗೆ ದಾರಿ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಸಮಾಜದಲ್ಲಿ ಒಟ್ಟಾರೆಯಾಗಿ ಪ್ರಧಾನವಾಗಿರುವ ಸ್ವಕೇಂದ್ರಿತ ಮನಸ್ಸು, ಹಿಂಸೆಯ ವೈಭವೀಕರಣ, ಪುರುμÁಧಿಕಾರದ ಅಹಂ, ನೈತಿಕ ಅಧಃಪತನಗಳಿಂದ ಇಂತಹ ದುರಂತಗಳು ಸಂಭವಿಸುತ್ತಿದ್ದು, ಘಟನೆ ನಡೆದಾಗ ಪ್ರತಿಕ್ರೀಯಿಸುವುದು ಮಾತ್ರವಲ್ಲದೆ ಇವುಗಳ ನಿಯಂತ್ರಣಕ್ಕೆ ಆಳುವ ಸರ್ಕಾರಗಳು ಮತ್ತು ಸಮಾಜ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here