ಕಲಬುರಗಿ ಲೋಕಸಭಾ ಚುನಾವಣಾ ಕಣದಲ್ಲಿ 14 ಅಭ್ಯರ್ಥಿಗಳು

0
65

ಕಲಬುರಗಿ: ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ನಿಗದಿಯಾಗಿದ್ದ ಸೋಮವಾರದಂದು ನಾಲ್ಕು ಜನ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದು, ಅಂತಿಮವಾಗಿ ಒಟ್ಟು 14 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಸ್ವತಂತ್ರ ಅಭ್ಯರ್ಥಿಗಳಾದ ವಿಲಾಸ ಎಂ. ಕಣಮಸ್ಕರ್, ಕಾಶಿನಾಥ ಸಾಯಬಣ್ಣ ಪಾಪಿ, ಶರಣಬಸಪ್ಪ ಪೀರಪ್ಪ ಹಾಗೂ ವೆಂಕಟೇಶ್ವರರಾವ್ ಅಮೃತರಾವ್ ಅವರು ನಾಮಪತ್ರ ಹಿಂಪಡೆದ ಅಭ್ಯರ್ಥಿಗಳಾಗಿದ್ದಾರೆ.

Contact Your\'s Advertisement; 9902492681

ಅಂತಿಮ ಕಣದಲ್ಲಿ ಉಳಿದ ಅಭ್ಯರ್ಥಿಗಳ ವಿವರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಉಮೇಶ ಗೋಪಾಲದೇವ, ಭಾರತೀಯ ಜನ ಸಾಮ್ರಾಟ್ ಪಾರ್ಟಿ ಅಭ್ಯರ್ಥಿ ತಾರಾಬಾಯಿ ವಿಶ್ವೇಶ್ವರಯ್ಯ ಬೋವಿ, ಸೋಷಾಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಅಭ್ಯರ್ಥಿ ಶರಣಬಸಪ್ಪ ಮಲ್ಲಿಕಾಜಪ್ಪ, ಪ್ರಹಾರ್ ಜನಶಕ್ತಿ ಪಾರ್ಟಿ ಅಭ್ಯರ್ಥಿ ವಿಜಯಕುಮಾರ ಭೀಮಶಾ, ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ನಾಗೇಂದ್ರ ಎಚ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ವಿಜಯ ಗೋವಿಂದ ಜಾಧವ, ಭಾರತೀಯ ಬಹುಜನ ಕ್ರಾಂತಿ ದಳ ಅಭ್ಯರ್ಥಿ ರಾಜಕುಮಾರ ಗೋಪಿನಾಥ, ಬಹುಜನ್ ಸಮಾಜ ಪಾರ್ಟಿ ಅಭ್ಯರ್ಥಿ ಹುಚ್ಚಪ್ಪ ಬಸಪ್ಪ, ಸ್ವತಂತ್ರ ಅಭ್ಯರ್ಥಿಗಳಾದ ರಮೇಶ ಭೀಮಸಿಂಗ್, ಆನಂದ ಸಿದ್ದಣ್ಣ, ಶರಣಪ್ಪ ಮರಲಿಂಗಪ್ಪ, ಜ್ಯೋತಿ ರಮೇಶ ಹಾಗೂ ಸುಂದರ ಮೇಘು ಅವರು ಅಂತಿಮ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here