ಒಂದು ತಿಂಗಳಿನಲ್ಲಿ ಕಲಬುರಗಿ ವಿಮಾನಯಾನ ಸೇವೆ ಪ್ರಾರಂಭ: ಬಿ.ಎಸ್.ಯಡಿಯೂರಪ್ಪ

0
300

ಕಲಬುರಗಿ: ರಾಜ್ಯ ಸರ್ಕಾರವೇ ೧೭೫.೫೭ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಲಬುರಗಿ ವಿಮಾನ ನಿಲ್ದಾಣವು ವಾಣಿಜ್ಯ ಹಾರಾಟಕ್ಕೆ ಸಜ್ಜಾಗಿದ್ದು, ಇದರ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಅವರು ಮಂಗಳವಾರ ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಉದ್ಘೋಷಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಿಮಾನದಲ್ಲಿ ಹಾರಾಡಬೇಕೆಂಬ ಇಲ್ಲಿನ ಜನರ ದಶಕದ ಕನಸು ಈಡೇರಲಿದೆ. ವಿಮಾನಯಾನ ಸೇವೆ ಆರಂಭದಿಂದ ಕೈಗಾರಿಕೋದ್ಯಮಿಗಳು ಇಲ್ಲಿ ಹೂಡಿಕೆ ಮಾಡಲಿದ್ದು, ದುಡಿಯುವ ಕೈಗಳಿಗೆ ಕೆಲಸ ಸಿಗಲಿದೆ. ಆ ಮೂಲಕ ಇಲ್ಲಿ ನಿರುದ್ಯೋಗ ನಿವಾರಣೆಯಾಗಿ ಜನರ ಕಲ್ಯಾಣವಾಗಲಿದೆ ಎಂದರು.

Contact Your\'s Advertisement; 9902492681

ಮುಂದಿನ ಅಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ಈ ಭಾಗದ ಜಿಲ್ಲೆಗಳನ್ನು ರಾಜ್ಯದ ಮಾದರಿ ಜಿಲ್ಲೆಯನ್ನಾಗಿ ಮಾಡಲಾಗುವುದು. ಇದಲ್ಲದೇ ಹೈ.ಕ. ವಿಶೇಷ ಕೋಶದ ಪ್ರಾದೇಶಿಕ ಕಚೇರಿ ಕಲಬುರಗಿಯಲ್ಲಿ ಸ್ಥಾಪಿಸುವುದಲ್ಲದೇ ಈ ಭಾಗದ ಸರ್ವಾಂಗೀಣ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸಹ ಸ್ಥಾಪಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹಿಂದುಳಿದ ಹಣೆಪಟ್ಟಿಯನ್ನು ಹೋಗಲಾಡಿಸಲು ಸಂಪುಟದ ಸಹೋದ್ಯೋಗಿಗಳಿಗೆ ಆದೇಶ ನೀಡಿದ್ದೇನೆ ಎಂದರು.

ಭಕ್ತಿ, ಸಾಹಿತ್ಯ, ಹಾಗೂ ಸಾಮಾಜಿಕ ಕಲ್ಯಾಣವನ್ನು ಜತೆಯಾಗಿ ಬೆಸೆದ ಜಗತ್ತಿನ ಅತ್ಯಪೂರ್ವ ಚಳುವಳಿಯೊಂದು ರೂಪಗೊಂಡು ೧೨ನೇ ಶತಮಾನದಲ್ಲಿ ಯಶಸ್ವಿಯಾಗಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ನೆಲ ಇದು. ಹೀಗಾಗಿ ಇಲ್ಲಿನ ಜನರ ಭಾವನೆಯಂತೆ ಹೈದ್ರಾಬಾದ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲಾಗಿದೆ. ಈ ಭಾಗದ ಸಮಗ್ರ ಕಲ್ಯಾಣವೇ ನಮ್ಮ ಸರ್ಕಾರದ ಧ್ಯೇಯ ಮತ್ತು ಪ್ರಾದೇಶಿಕ ಅಸಮಾತೋಲನ ನಿವಾರಣೆಯೆ ನಮ್ಮ ಮುಂದಿನ ಗುರಿಯಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ನುಡಿದರು. ನಾಡಿನ ಆರೂವರೆ ಕೋಟಿ ಜನರ ಆಶೀರ್ವಾದಿಂದ ನಾನು ಮುಖ್ಯಮಂತ್ರಿಯಾಗಿ ಮಾಣ ವಚನ ಸ್ವೀಕರಿಸಿದ ದಿನವೇ ಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂz ಸರ್ಕಾರ ೬೦೦೦ ರೂ.ಗಳ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ೪,೦೦೦ ರೂ. ನೀಡಲು ಘೋ?ಣೆ ಮಾಡಿದ್ದೇನೆ ಎಂದರು.

ಕಲ್ಯಾಣ ಕರ್ನಾಟಕ ಭಾಗ ಭಾರತದ ಅತ್ಯಂತ ಒಣ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಲ್ಪಟ್ಟಿದೆ. ಸತತ ಬರಗಾಲಗಳ ಕಾರಣ ಇಲ್ಲಿ ಅಭಿವೃದ್ಧಿ ಮರೀಚಿಕೆಯಾಗಿತ್ತು. ಡಾ. ಡಿ. ಎಂ. ನಂಜುಂಡಪ್ಪ ವರದಿಯ ಪ್ರಕಾರ ರಾಜ್ಯದ ೩೯ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ೨೧ ತಾಲೂಕುಗಳು ಈ ಭಾಗಕ್ಕೆ ಸೇರಿವೆ. ೨೦೦೬ರಲ್ಲಿ ನಾನು ಉಪಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ನಡೆದ ಮೊದಲ ವಿಧಾನ ಮಂಡಲದ ಅಧಿವೇಶನದಲ್ಲಿ ಡಿ.ಎಂ.ನಂಜುಂಡಪ್ಪ ಸಮಿತಿ ವರದಿಯ ಶಿಫಾರಸಿನನ್ವಯ ವಿಶೇ? ಅಭಿವೃದ್ಧಿ ಯೋಜನೆ ಜಾರಿ ಮಾಡುವುದಾಗಿ ಘೋ?ಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಮುಂದುವರೆಸುವ ಅನಿವಾರ್ಯತೆ ಎದುರಾಗಿದೆ. ಈ ವಿಶೇ? ಅಭಿವೃದ್ಧಿ ಯೋಜನೆ ಹಿಂದುಳಿದ ತಾಲ್ಲೂಕುಗಳಲ್ಲಿ ಗಣನೀಯ ಬದಲಾವಣೆಯನ್ನು ತಂದಿದೆ. ೨೦೦೭-೦೮ ರಿಂದ ಈ ವರೆಗೆ ವಿಶೇ? ಅಭಿವೃದ್ಧಿ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಒಟ್ಟು ೭,೯೭೩.೭೮ ಕೋಟಿ ರೂ. ಬಿಡುಗಡೆಯಾಗಿದ್ದು, ೭,೪೮೩.೭೨ ಕೋಟಿ ರೂ. ವೆಚ್ಚವಾಗಿದೆ ಎಂದರು.

ಸಂವಿಧಾನದ ೩೭೧(ಜೆ) ಪರಿಚ್ಛೇದ ಜಾರಿಯಿಂದ ಉದ್ಯೋಗ ಮೀಸಲಾತಿಯಡಿ ಪ್ರಾದೇಶಿಕ ಸ್ಥಳೀಯ ವೃಂದ ಮತ್ತು ರಾಜ್ಯ ಮಟ್ಟದ ಸ್ಥಳೀಯ ವೃಂದದಲ್ಲಿ ಒಟ್ಟು ೩೨,೧೪೪ ಖಾಲಿ ಹುದ್ದೆಗಳನ್ನು ಗುರುತಿಸಲಾಗಿದೆ. ಇವುಗಳ ಪೈಕಿ ಜುಲೈ-೨೦೧೯ರ ಅಂತ್ಯಕ್ಕೆ ೧೩,೬೫೯ ಹುದ್ದೆಗಳನ್ನು ಸ್ಥಳೀಯ ಅಬ್ಯsರ್ಥಿಗಳಿಂದಲೆ ತುಂಬಲಾಗಿದೆ. ಇನ್ನೂ ೧೦,೭೪೮ ಹುದ್ದೆಗಳ ನೇಮಕಾತಿ ಕ್ರಿಯೆಯು ವಿವಿಧ ಹಂತದಲ್ಲಿದ್ದು, ಅವುಗಳನ್ನು ಸಹ ಶೀಘ್ರದಲ್ಲಿಯೆ ಭರ್ತಿ ಮಾಡುವ ಮೂಲಕ  ಸ್ಥಳೀಯರಿಗೆ ಉದ್ಯೋಗ ನೀಡಲಾಗುವುದು. ಇದಲ್ಲದೆ ತಿ ವ? ೭೦೦ಕ್ಕೂ ಹೆಚ್ಚು ವೈದ್ಯಕೀಯ ಮತ್ತು ಸಾವಿರಾರು ಸಂಖ್ಯೆಯಲ್ಲಿ ಇಂಜಿನೀಯರಿಂಗ್ ಸೇರಿದಂತೆ ವೃತ್ತಿಪರ ಉನ್ನತ ಕೋರ್ಸುಗಳಲ್ಲಿ ಅಧ್ಯಯನ ಮಾಡಲು ಈ ಭಾಗದ ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಿರುವುದು ಅವರ ಉಜ್ವಲ ಭವಿ?ಕ್ಕೆ ಬುನಾದಿಯಾಗಿದೆ ಎಂದರು.

ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಕಳೆದ ೨೦೧೩-೧೪ನೇ ಸಾಲಿನಿಂದ ೨೦೧೯-೨೦ನೇ ಸಾಲಿನ ವರೆಗೆ ಒಟ್ಟು ೬,೭೫೩.೫೦ ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಇದೂವರೆಗೆ ೪೦೦೫ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ೩,೫೬೬.೭೪ ಕೋಟಿ ರೂ. ಅನುದಾನ ವೆಚ್ಚವಾಗಿದೆ ಎಂದು ತಿಳಿಸಿದರು. ೩೮.೧೭ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ:- ಇದೇ ಸಂದರ್ಭದಲ್ಲಿ ೩೮.೧೭ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇದಲ್ಲದೆ ಬೆಣ್ಣೆತೋರಾ ನೀರಾವರಿ ಪ್ರದೇಶದಲ್ಲಿ ಭೂಮಿ ಕಳೆದಕೊಂಡ ರೈತರಿಗೆ ಹಕ್ಕು ಪತ್ರ ಮತ್ತು ಅಂತರ್ಜಾತಿ ವಿವಾಹವಾದ ಮೂರು ದಂಪತಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ ಈ ಭಾಗಕ್ಕೆ ಹೈದ್ರಾಬಾದ ಕರ್ನಾಟಕ ಎಂದು ಸಂಬೋಧನೆ ಮಾಡುವುದು ಒಂದು ರೀತಿಯಲ್ಲಿ ನಮಗೆ ಸ್ವಾಭಿಮಾನಕ್ಕೆ ಅಳಕು ಉಂಟು ಮಾಡಿತ್ತು. ಇದೀಗ ಅದನ್ನು ತೆಗೆದು ಹಾಕಿ ಶರಣ ಸಂಸ್ಕೃತಿಯ ಪರಂಪರೆ ಹೊಂದಿದ ನೆಲಕ್ಕೆ ಕಲ್ಯಾಣ ಕರ್ನಾಟಕ ವೆಂದು ವಿಶಾಲಾರ್ಥದಲ್ಲಿ ಮರುನಾಮಕರಣ ಮಾಡಿದ್ದು ಸಂತೋಷವಾಗಿದೆ. ಪ್ರದೇಶದ ಹೆಸರಿನಲ್ಲಿರುವಂತೆ ಈ ಭಾಗ ಕಲ್ಯಾಣವಾಗಲಿ ಎಂದು ಶುಭಹಾರೈಸುತ್ತಾ ಈ ಭಾಗದಲ್ಲಿ ಸಣ್ಣ ನೀರಾವರಿ ಯೋಜನೆಗಳ ಪುನಶ್ಚೇತನಕ್ಕೆ ಒತ್ತು ನೀಡಲಾಗುವುದು. ಅಂತರ್ಜಲ ಹೆಚ್ಚಿಸಲು ಕೆರೆಗೆ ನೀರು ತುಂಬಿಸಲು ಸಹ ಕ್ರಮ ಕೈಗೊಳ್ಳುವುದಾಗಿ ಸಣ್ಣ ನೀರಾವರಿ ಸಚಿವರು ಆಗಿರುವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು.

ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಪ್ರಾಸ್ತಾವಿಕವಾಗಿ ಮಾತನಾಡಿದರೆ, ಸಂಸದ ಡಾ.ಉಮೇಶ ಜಾಧವ ಅವರು ಆಶಯ ನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ವಿಧಾನಸಭೆ ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೆಲ್ಕೂರ, ಎಂ.ವೈ.ಪಾಟೀಲ, ಸುಭಾಷ ಗುತ್ತೇದಾರ, ಡಾ. ಅವಿನಾಶ ಜಾಧವ,  ಸುರಪುರ ಶಾಸಕ ರಾಜುಗೌಡ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ತಿಪ್ಪಣ್ಣ ಕಮಕನೂರ, ರವಿ ಕುಮಾರ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ,  ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಬಾಬುರಾವ ಚಿಂಚನಸೂರು, ಮಾಜಿ ಎಂ.ಎಲ್.ಸಿ. ಶಶೀಲ ಜಿ. ನಮೋಶಿ, ಅಮರನಾಥ ಪಾಟೀಲ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಬಿ. ಶರತ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್, ಈಶಾನ್ಯ ವಲಯ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬಿಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ಇದ್ದರು.

ಸ್ವಚ್ಛಮೇವ ಜಯತೇ ಕಲಾ ಜಾಥಾಕ್ಕೆ ಚಾಲನೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ವಚ್ಛಮೇವ ಜಯತೇ ಕಲಾ ಜಾಥಾಕ್ಕೆ ಚಾಲನೆ ನೀಡಿದರು.

*****

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here