ಬಸವ ಜಯಂತಿ ಆಚರಣೆ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಜಾಗತಿಕ ಲಿಂಗಾಯತ ಮಹಾಸಭಾ, ಬಸವಪರ ಸಂಘಟನೆಗಳು ಮತ್ತು ವಿವಿಧ ಕಾಯಕ ಶರಣರ ಒಕ್ಕೂಟದ ವತಿಯಿಂದ ಅತ್ಯಂತ ಸಡಗರ-ಸಂಭ್ರಮ ಹಾಗೂ ಅರ್ಥಪೂರ್ಣವಾಗಿ 891ನೇ ಬಸವ ಜಯಂತಿ ಆಚರಿಸಬೇಕು ಎಂಬ ಉದ್ದೇಶದಿಂದ ವಿವಿಧ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ನೀಡಲಾಗಿದೆ.

ನಗರದ ಬಸವ ಮಂಟಪದಲ್ಲಿ ಭಾನುವಾರ ಸಂಜೆ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ಜಯಂತಿ ಆಚರಣೆ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಗತಿಪರ ಚಿಂತಕ ಪ್ರೊ.ಆರ್.ಕೆ.ಹುಡಗಿ, ಅಧ್ಯಕ್ಷರಾಗಿ ಶರಣ ಚಿಂತಕ ಜಗನಾಥ ರಾಚೋಟಿ, ಕಾರ್ಯದರ್ಶಿಯಾಗಿ ನಿಂಗಪ್ಪ ಎಸ್.ವಿ., ಖಜಾಂಚಿಯಾಗಿ ಬಸವರಾಜ ಕೋಣಿನ ಮತ್ತು ಇನ್ನುಳಿದ ವಿವಿಧ ಸಮಿತಿಗಳನ್ನು ರಚಿಸಿ, ಅವರಿಗೆ ಗೌರವಿಸಿ, ಸಕ್ರಿಯವಾಗಿ ಭಾಗವಹಿಸಲು ಹಾಗೂ ಯಶಸ್ವಿಗೊಳಿಸಲು ಕೋರಲಾಯಿತು.

ನಂತರ ಮಾತನಾಡಿದ ಸಮಿತಿಯ ಗೌರವ ಅಧ್ಯಕ್ಷ ಪ್ರೊ.ಆರ್.ಕೆ.ಹುಡಗಿ, ಬಸವ ತತ್ವ ಪ್ರಜಾಪ್ರಭುತ್ವದ ತತ್ವ ಹೊಂದಿದೆ. ವಿಶ್ವಕ್ಕೆ ಸಮಾನತೆ, ಕಾಯಕ-ದಾಸೋಹ ಪರಿಕಲ್ಪನೆ ನೀಡಿದೆ. ಜಾಗತಿಕ ಮಟ್ಟದಲ್ಲಿ ಮೇರು ಸ್ಥರದಲ್ಲಿ ನಿಲ್ಲಬಲ್ಲ ವೈಜ್ಞಾನಿಕ, ವೈಚಾರಿಕತೆಯ ಲಿಂಗಾಯತ ಧರ್ಮವನ್ನು ಬಸವಣ್ಣನವರು ಸ್ಥಾಪಿಸಿದ್ದಾರೆ. ಬಸವ ಜಯಂತಿ ಕೇವಲ ಉತ್ಸವ-ಮೆರವಣಿಗೆಗೆ ಮಾತ್ರ ಸೀಮಿತವಾಗಬಾರದು. ಶರಣರ ಚಿಂತನ-ಮಂಥನ ಜರುಗಬೇಕು. ತನ್ಮೂಲಕ ಶರಣ ತತ್ವದ ಅಳವಡಿಕೆಗೆ ಪ್ರೇರಣೆಯಾಗಬೇಕು. ಬಸವ ತತ್ವದ ಅಳವಡಿಕೆಯಿಂದ ಜೀವನ ಸುಂದರ, ವಿಶ್ವ ಕಲ್ಯಾಣವಾಗಲು ಸಾಧ್ಯವಾಗುತ್ತದೆ. ಸರ್ವರು ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಮಹಾಸಭಾದ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ್, ಪ್ರಧಾನ ಕಾರ್ಯದರ್ಶಿ ಆರ್.ಜಿ.ಶೆಟಗಾರ, ಪ್ರಮುಖರಾದ ರವೀಂದ್ರ ಶಾಬಾದಿ, ಗುಪ್ತಲಿಂಗ ಪಾಟೀಲ, ಹಣಮಂತರಾವ ಪಾಟೀಲ ಕುಸನುರ, ಬಸವರಾಜ ಧೂಳಾಗುಂಡ್, ಶಿವಕುಮಾರ ಬಿದರಿ, ನಾಗಭೂಷಣ ಅಗಸ್ಥ್ಯತೀರ್ಥ, ಶಿವಶರಣಪ್ಪ ದೇಗಾಂವ, ಗುರುಬಸಪ್ಪ ಪಾಟೀಲ, ಸಿದ್ರಾಮಪ್ಪ ಲದ್ದೆ, ಎಚ್.ಬಿ.ಪಾಟೀಲ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

emedialine

Recent Posts

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

12 mins ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

15 mins ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

19 mins ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

2 hours ago

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

11 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420