Monday, July 15, 2024
ಮನೆಬಿಸಿ ಬಿಸಿ ಸುದ್ದಿಜಗದೇವಿ ಚೌಹಾಣ್ ಕಾಂಗ್ರೆಸ್ ತೊರೆದು ಡಾ. ಜಾಧವ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ

ಜಗದೇವಿ ಚೌಹಾಣ್ ಕಾಂಗ್ರೆಸ್ ತೊರೆದು ಡಾ. ಜಾಧವ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ

ಕಲಬುರಗಿ: ಕಾಂಗ್ರೆಸ್ಸಿನ ಹಿರಿಯ ನಾಯಕಿದ ಜಗದೇವಿ ಡಿ. ಚೌಹಾಣ್ ಅವರು ಸಂಸದ ಕಲಬುರಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಸಮ್ಮುಖದಲ್ಲಿ ಹಲವು ಮಹಿಳೆಯರೊಂದಿಗೆ ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರ

ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತೆಯಾಗಿ ದುಡಿದ ಜಗದೇವಿ ಡಿ ಚೌಹಾಣ್ ಅವರು ಕಾಂಗ್ರೆಸ್ ಪಕ್ಷದ ನಡವಳಿಕೆಯಿಂದ ಬೇಸತ್ತು ಹಾಗು ಇತ್ತೀಚೆಗಿನ ಹಲವು ಘಟನೆಗಳಿಂದ ನೊಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿ ಕಮಲ ಮುಡಿಯಲು ಸಿದ್ದರಾಗಿ ಮಂಗಳವಾರ ಉತ್ತರ ಮಂಡಲದ ಮಹಿಳಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇವರೊಂದಿಗೆ ಅನೇಕ ಬೆಂಬಲಿಗ ಮಹಿಳಾ ಕಾರ್ಯಕರ್ತರು ಕೂಡ ಪಕ್ಷಕ್ಕೆ ಸೇರ್ಪಡೆ ಹೊಂದಿದರು.

ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ಸಿನಲ್ಲಿದ್ದು ಪಕ್ಷವು ಕಾರ್ಯಕರ್ತರನ್ನು ನಡೆಸಿಕೊಳ್ಳುವ ರೀತಿಯ ಬಗ್ಗೆ ಬೇಸತ್ತು ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಮತ್ತು ಮಹಿಳೆಯರಿಗೆ ನೀಡುತ್ತಿರುವ ಸಮಾನ ಅವಕಾಶಗಳನ್ನು ಗಮನಿಸಿ ಜಗದೇವಿ ಡಿ. ಚೌಹಾಣ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವುದು ಸಂತಸದ ವಿಚಾರವಾಗಿದೆ. ಬಿಜೆಪಿಯು ಮಹಿಳೆಯರನ್ನು ಸಮಾನ ಗೌರವ ಮತ್ತು ಪ್ರೀತಿಯಿಂದ ನೋಡಿಕೊಂಡು ಸ್ಥಾನಮಾನಗಳನ್ನು ನೀಡುತ್ತದೆ ಎಂದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಹೇಳಿದರು.

ಬಿಜೆಪಿ ನಗರ ಅಧ್ಯಕ್ಷರಾದ ಚಂದು ಪಾಟೀಲ್ ಹಾಗೂ ಮಹಿಳಾ ಮೋರ್ಚಾದ ಅನೇಕ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular