ಪ್ರಧಾನಿ ಮೋದಿಯಿಂದ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ WPI ದೂರು

0
81

ಕಲಬುರಗಿ: ದೇಶದ ಪ್ರಧಾನ ಮಂತ್ರಿ ಹುದ್ದೆಯಲ್ಲಿದ್ದು, ನಿರ್ಧಿಷ್ಟ ಸಮುದಾಯೊಂದನ್ನು ಗುರಿಯಾಗಿ ದೇಶದ ಸೌಹಾರ್ದತೆ ಕದಡುವಂತೆ ಹೇಳಿಕೆ ನೀಡಿರುವ ನರೇಂದ್ರ ಮೋದಿ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ವೆಲ್ಫೇರ್ ಪಾರ್ಟಿ ಆಪ್ ಇಂಡಿಯಾ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪಕ್ಷದ ರಾಜ್ಯ ಕಾರ್ಯದರ್ಶಿ ಮುಬೀನ್ ಅಹಮದ್, ಮುನೀರ್ ಹಶ್ಮಿ ಹಾಗೂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಸಲೀಂ ಚಿತ್ತಾಪುರಿ ಅವರ ನಿಯೋಗ ಮಂಗಳವಾರ ಕಲಬುರಗಿ ಚುನಾವಣಾಧಿಕಾರಿಗಳಿಗೆ ಭೇಟಿ ನೀಡಿ ಮನವಿ ಸಲ್ಲಿಸಿದೆ.

Contact Your\'s Advertisement; 9902492681

ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋದನಕಾರಿ ಮತ್ತು ದ್ವೇಷಪೂರಿತ ಟೀಕೆಗಳನ್ನು ಮಾಡಿದ್ದು, ಇದು ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ನಮ್ಮ ದೇಶದ ನಾಗರಿಕರ ನಡುವೆ ದ್ವೇಷ ಭಾವನೆಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ. ಅವರ ಭಾಷಣವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾತ್ರವಲ್ಲದೆ ನಮ್ಮ ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆಯಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ದ್ವೇಷಪೂರಿತ ಭಾಷಣಕ್ಕಾಗಿ ಪಿಎಂ ಮೋದಿ ಮತ್ತು ಬಿಜೆಪಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ರಾಷ್ಟ್ರೀಯ ಚುನಾವಣಾ ಆಯೋಗಕ್ಕೆ ಒತ್ತಾಯಿಸಿ  ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಮತ್ತು ಚುನಾವಣಾ ಪ್ರಕ್ರಿಯೆಯು ನ್ಯಾಯಸಮ್ಮತವಾಗಿ ಮತ್ತು ಶಾಂತಿಯುತವಾಗಿ ನಡೆಯುವುದನ್ನು ECI ಖಚಿತಪಡಿಸಿಕೊಳ್ಳಬೇಕೆಂದು ಮನವಿ ಮೂಲಕ ಒತ್ತಾಯಿಸಿ ದೂರು ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here