ಬಿಸಿ ಬಿಸಿ ಸುದ್ದಿ

ಪ್ರಧಾನಿ ಮೋದಿಯಿಂದ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ WPI ದೂರು

ಕಲಬುರಗಿ: ದೇಶದ ಪ್ರಧಾನ ಮಂತ್ರಿ ಹುದ್ದೆಯಲ್ಲಿದ್ದು, ನಿರ್ಧಿಷ್ಟ ಸಮುದಾಯೊಂದನ್ನು ಗುರಿಯಾಗಿ ದೇಶದ ಸೌಹಾರ್ದತೆ ಕದಡುವಂತೆ ಹೇಳಿಕೆ ನೀಡಿರುವ ನರೇಂದ್ರ ಮೋದಿ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ವೆಲ್ಫೇರ್ ಪಾರ್ಟಿ ಆಪ್ ಇಂಡಿಯಾ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪಕ್ಷದ ರಾಜ್ಯ ಕಾರ್ಯದರ್ಶಿ ಮುಬೀನ್ ಅಹಮದ್, ಮುನೀರ್ ಹಶ್ಮಿ ಹಾಗೂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಸಲೀಂ ಚಿತ್ತಾಪುರಿ ಅವರ ನಿಯೋಗ ಮಂಗಳವಾರ ಕಲಬುರಗಿ ಚುನಾವಣಾಧಿಕಾರಿಗಳಿಗೆ ಭೇಟಿ ನೀಡಿ ಮನವಿ ಸಲ್ಲಿಸಿದೆ.

ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಪ್ರಚೋದನಕಾರಿ ಮತ್ತು ದ್ವೇಷಪೂರಿತ ಟೀಕೆಗಳನ್ನು ಮಾಡಿದ್ದು, ಇದು ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ನಮ್ಮ ದೇಶದ ನಾಗರಿಕರ ನಡುವೆ ದ್ವೇಷ ಭಾವನೆಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ. ಅವರ ಭಾಷಣವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾತ್ರವಲ್ಲದೆ ನಮ್ಮ ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆಯಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ದ್ವೇಷಪೂರಿತ ಭಾಷಣಕ್ಕಾಗಿ ಪಿಎಂ ಮೋದಿ ಮತ್ತು ಬಿಜೆಪಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ರಾಷ್ಟ್ರೀಯ ಚುನಾವಣಾ ಆಯೋಗಕ್ಕೆ ಒತ್ತಾಯಿಸಿ  ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಮತ್ತು ಚುನಾವಣಾ ಪ್ರಕ್ರಿಯೆಯು ನ್ಯಾಯಸಮ್ಮತವಾಗಿ ಮತ್ತು ಶಾಂತಿಯುತವಾಗಿ ನಡೆಯುವುದನ್ನು ECI ಖಚಿತಪಡಿಸಿಕೊಳ್ಳಬೇಕೆಂದು ಮನವಿ ಮೂಲಕ ಒತ್ತಾಯಿಸಿ ದೂರು ನೀಡಿದ್ದಾರೆ.

emedialine

Recent Posts

ಮಹಾತ್ಮರ ಬದುಕು, ಬರಹ ನಮ್ಮದಾಗಬೇಕು: ಸುರೇಶ ಬಡಿಗೇರ

ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯನ್ನು ಕೇವಲ ಮೆರವಣಿಗೆಗೆ ಸೀಮಿತಗೊಳಿಸದೆ, ಅವರ ಬದುಕು ಬೋಧನೆಯನ್ನು ಅನುಸರಿಸಬೇಕು ಎಂದು ಕನ್ನಡ ಅಭಿವೃದ್ಧಿ…

13 hours ago

ಸಿದ್ದಪ್ಪ ಹೊಸಮನಿಗೆ ಪಿಎಚ್.ಡಿ

ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿ ಸಿದ್ದಪ್ಪ ಹೊಸಮನಿ ಅವರು " ಡಾ. ಕೆ. ಆರ್.…

14 hours ago

ಕಲಬುರಗಿ; ಜಿಲ್ಲಾ ಮಾಸ್ಟರ್ ಟ್ರೇನರ್ಸ್ ಗಳಿಗೆ ತರಬೇತಿ

ಕಲಬುರಗಿ; ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕ್ಷೇತ್ರದ ವ್ಯಾಪ್ತಿಗೆ…

15 hours ago

ಸುರಪುರ:ವಾಸವಿ ಜಯಂತಿ ಆಚರಣೆ ಅದ್ಧೂರಿ ಮೆರವಣಿಗೆ

ಸುರಪುರ: ನಗರದಲ್ಲಿ ವಾಸವಿ ಜಯಂತಿ ಆಚರಣೆ ಅಂಗವಾಗಿ ಅದ್ಧೂರಿ ಮೆರವಣಿಗೆ ನಡೆಸಲಾಗಿದೆ.ಮೊದಲಿಗೆ ನಗರದ ಹಳೆ ಬಸ್ ನಿಲ್ದಾಣದ ಬಳಿಯಲ್ಲಿನ ಕನ್ನಿಕಾ…

15 hours ago

ಕೃಷಿ ಅಧಿಕಾರಿ ಬೀಜ ಗೊಬ್ಬರ ಮಾರಾಟ ಅಂಗಡಿಗೆ ಭೇಡಿ;ಬಿತ್ತನೆ ಬೀಜ ಪರಿಶೀಲನೆ

ಸುರಪುರ: ತಾಲೂಕಿನಲ್ಲಿ ಮುಂಗಾರು ಆರಂಭಗೊಂಡು ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದರಿಂದ ಕೃಷಿ ಬೀಜ ಗೊಬ್ಬರ ಮಾರಾಟ ಅಂಗಡಿಗಳಿಗೆ ತಾಲೂಕು ಸಹಾಯಕ ಕೃಷಿ…

15 hours ago

ಶ್ರೀ ವಾಸವಿ ಜಯಂತಿ ನಿಮಿತ್ತ ವಾಸವಿ ಮಾತೆಗೆ ತೊಟ್ಟಿಲ ಸೇವೆ

ಕಲಬುರಗಿ: ನಗರದ ಪುಟಾಣಿ ಗಲ್ಲಿಯಲ್ಲಿ ಶ್ರೀ ನಗರೇಶ್ವರ ದೇವ ಸ್ಥಾನದಲ್ಲಿ ಆರ್ಯ ವೈಶ್ಯ ಸಮಾಜ ವತಿಯಿಂದ ಶ್ರೀ ವಾಸವಿ ಜಯಂತಿ…

15 hours ago