ಮೋದಿ ನೀಡಿದ ಯಾವ ಭರವಸೆ ಈಡೇರಿಸಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಕಳೆದ ಹತ್ತು ವರ್ಷದಲ್ಲಿ ಮೋದಿ ತಾವು ನೀಡಿದ ಯಾವ ಭರವಸೆ ಈಡೇರಿಸಿಲ್ಲ, ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು ಉದ್ಯೋಗಗಳು ಎಲ್ಲಿ ಹೋದವು? ಹದಿನೈದು ಲಕ್ಷ ಹಣ ನೀಡುವುದಾಗಿ ಹೇಳಿದ್ದರು, ಹಣ ಎಲ್ಲಿ‌ಹೋಯಿತು ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಅವರು ಅಫಜಲಪುರ ತಾಲ್ಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆ ಜಾರಿಗೆ ತಂದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಮೋದಿ ಹೇಳಿದ್ದರು ನಮ್ಮ ಸರ್ಕಾರ ಅಧಿಕಾರಕ್ಕೆ‌ ಬಂದ ಮೇಲೆ ಜಾರಿಗೆ ತಂದಿದ್ದೇನೆ ನಮ್ಮ ಸರ್ಕಾರ ದಿವಾಳಿಯಾಗಿದೆಯಾ? ಮೋದಿ ಸುಳ್ಳು ಹೇಳುತ್ತಾರೆ. ಬಿಜೆಪಿ ಸುಳ್ಳಿನ ಕಾರ್ಖಾನೆಯಾಗಿದೆ. ಸುಳ್ಳು ಇವರ ಮನೆ ದೇವರು. ಲೋಕಸಭೆ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಬಿಜೆಪಿಯವರ ಸುಳ್ಳು ಹೇಳುತ್ತಿದ್ದಾರೆ. ಆದರೆ ನಾನು ಹೇಳುತ್ತೇನೆ ನಾವು ಬಸವಣ್ಣನವರ ಅನುಯಾಯಿಗಳು ಕೊಟ್ಟ ಮಾತನ್ನು ಮೀರುವುದಿಲ್ಲ ಎಂದು ಭರವಸೆ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ವಾರ್ಷಿಕ 52,000 ಕೋಟಿ ತೆಗೆದಿರಿಸಿದ್ದೇವೆ ಇದೂವರೆಗೆ 195 ಕೋಟಿ ಮಹಿಳೆಯರು ಶಕ್ತಿ ಯೋಜನೆ ಲಾಭ ಪಡೆದುಕೊಂಡಿದ್ದಾರೆ. ನಾನು ಸಿಎಂ ಇದ್ದಾಗ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೆ ಏಳು ಕೆಜಿ ಅಕ್ಕಿ ಫ್ರಿ ಕೊಡುತ್ತಿದ್ದೆ. ನಂತರ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಏಳು ಕೆಜಿಯಿಂದ ಐದು ಕೆಜಿಗೆ ಇಳಿಸಿದರು. ನಮ್ಮ ಸರ್ಕಾರ ಪುನಃ ಅಧಿಕಾರಕ್ಕೆ ಬಂದ ನಂತರ ಅಕ್ಕಿ‌ ಖರೀದಿಗೆ ಹಣ ನೀಡುತ್ತಿದ್ದೇವೆ. ಗೃಹ ಜ್ಯೋತಿ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುತ್ತಿದೆ. ನಮ್ಮ ಗ್ಯಾರಂಟಿಗಳನ್ನೇ ಮೋದಿ ಹೈಜಾಕ್ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು‌ ಟೀಕಿಸಿದರು.

ರಾಧಾಕೃಷ್ಣ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಸಂಸತ್ತಿನಲ್ಲಿ ರಾಜ್ಯ ಸರ್ಕಾರದ ಪರ ಧ್ವನಿ ಎತ್ತದ ಜಾಧವ್ ಯಾಕೆ ಗೆಲ್ಲಬೇಕು.? ಶಾ, ನಡ್ಡಾ, ನಿರ್ಮಲ ಸೀತಾರಾಮನ್ ಸೇರಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. 15 ನೆಯ ಹಣಕಾಸು ಆಯೋಗದ ರೂ 5495 ಕೋಟಿ‌ ಸೇರಿದಂತೆ ರಾಜ್ಯಕ್ಕೆ ಘೋಷಿತ 11495 ಕೋಟಿ ಅನುದಾನ ಬಿಡುಗಡೆ ಮಾಡಲಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲವಿದೆ. ಲಕ್ಷಾಂತರ ಹೆಕ್ಟೇರ್ ಪ್ರದೇಶ ಬೆಳೆ ಹಾನಿಯಾಗಿದೆ. ಬರ ಪರಿಹಾರವಾಗಿ ರೂ‌ 18171 ಕೋಟಿ ಬಿಡುಗಡೆ ಮಾಡಲು ಪರಿಪರಿಯಾಗಿ ಬೇಡಿಕೊಂಡರೂ ಕ್ಯಾರೆ ಅನ್ನಲಿಲ್ಲ‌. ಹಾಗಾಗಿ‌ ಅನಿವಾರ್ಯವಾಗಿ ಸುಪ್ರಿಂ ಕೋರ್ಟ್ ಗೆ ಹೋಗಬೇಕಾಯಿತು. ಆಗ ಅಟಾರ್ನಿ ಜನರಲ್ ಇತ್ಯರ್ಥಪಡಿಸುವುದಾಗಿ ಒಂದು ವಾರ ಸಮಯ ಕೇಳಿದ್ದಾರೆ. ನಾವು ಸುಪ್ರಿಂಗೆ ಹೋಗಿರದೇ ಇದ್ದರೆ, ನಮಗೆ ಈ ಭರವಸೆ ಸಿಗುತ್ತಿರಲಿಲ್ಲ.‌ ನಿರ್ಮಲಾ ಸೀತರಾಮನ್ ಅವರು ರಾಜ್ಯ ಸರ್ಕಾರ ಬರಪರಿಹಾರ ಕೇಳಿಲ್ಲ ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ‌. ನಿರ್ಮಲಾ ಅವರೇ ನಮಗೆ ಗ್ಯಾರಂಟಿಗಾಗಿ ಹಣ ಬೇಡ ನಮಗಿರುವ ಸಂಪನ್ಮೂಲ ಗಳಿಂದ ಅದನ್ನು ಭರಿಸುತ್ತೇವೆ ಎಂದು ತಿರುಗೇಟು ನೀಡಿದರು.

ಸಂವಿಧಾನ ಅಪಾಯದಲ್ಲಿದೆ. ಪ್ರಜಾ ಪ್ರಭುತ್ವ ಉಳಿಯಬೇಕಾದರೆ‌ ಕಾಂಗ್ರೆಸ್ ಅಧಿಕಾರಕ್ಕೆ ಬರಲೇಬೇಕು. ಅವಕಾಶದಿಂದ ವಂಚಿತರಾದವರಿಗೆ ನ್ಯಾಯ ಕೊಡಿಸಬೇಕಾದರೆ ನೀವೆಲ್ಲ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಕುರುಬ ಗೊಂಡ ಕುರುಬ ಕೋಲಿ ಸಮಾಜವನ್ನು ಎಸ್ ಟಿ‌ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವ ಕಳಿಸಲಾಗಿದೆ. ಜಾಧವ್ ಈ ಬಗ್ಗೆ ಧ್ವನಿ ಎತ್ತಿದ್ದಾರ? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ‌ ಸಮುದಾಯಗಳನ್ನು ಎಸ್ ಟಿ‌ ಸೇರಿಸುವುದಾಗಿ ಭರವಸೆ ನೀಡಿದರು.

ಕಳೆದ ಐವತ್ತು ವರ್ಷದಿಂದ ಖರ್ಗೆ ಈ ಭಾಗದ ಜನರ ಸೇವೆ ಮಾಡಿದ್ದಾರೆ, ರಾಧಾಕೃಷ್ಣ ಅವರಿಗೆ ಆಶೀರ್ವಾದ ಮಾಡಿ- ಸಿಎಂ ಸಿದ್ದರಾಮಯ್ಯ ಮನವಿ.

ಕಳೆದ ಐವತ್ತು ವರ್ಷದಿಂದ ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಗದ ಜನರ ಧ್ವನಿಯಾಗಿ ಲೋಕಸಭೆ ಹಾಗೂ ರಾಜ್ಯ ಸಭೆಯಲ್ಲಿ ಕೆಲಸ ಮಾಡಿದ್ದಾರೆ. ಈ ಸಲ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಆಶೀರ್ವಾದ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಖರ್ಗೆ ಹಾಗೂ ಧರಂ ಸಿಂಗ್ ಇಲ್ಲದೇ ಹೋಗಿದ್ದರೆ ಈ ಭಾಗಕ್ಕೆ ಆರ್ಟಿಕಲ್ 371 J ಜಾರಿಗೆ ಬರುತ್ತಲೇ ಇರಲಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಅಂದಿಗ ಗೃಹ ಸಚಿವರಾಗಿದ್ದ ಲಾಲಕೃಷ್ಣ ಅದ್ವಾನಿ‌ ಈ ಬೇಡಿಕೆಯನ್ನು ತಿರಸ್ಕರಿಸಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಖರ್ಗೆ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರ ಮೇಲೆ ಒತ್ತಡ ತಂದು ಜಾರಿಗೆ ತರಲು ಶ್ರಮಿಸಿದ್ದಾರೆ. ಈ ಭಾಗದ ಜನರು ಇದನ್ನು ಮರೆಯಬಾರದು. ಈ ಸಲ ಸುಮಾರು 5 ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಸಚಿವರಾದ ಪ್ರಿಯಾಂಕ್ ಖರ್ಗೆ, ಕೆಕೆ ಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ , ಡಿಸಿಸಿ ಜಗದೇವ ಗುತ್ತೇದಾರ್, ಶರಣಪ್ಪ ಮಟ್ಟೂರ, ಅರುಣಕುಮಾರ ಪಾಟೀಲ್, ರಿತೀಶ್ ಗುತ್ತೇದಾರ್,ಜೆ.ಎಂ.ಕೊರಬು, ಪಪ್ಪು ಪಟೇಲ್, ಸಿದ್ದು ಸಿರಸಗಿ,ಮತೀನ ಪಟೇಲ್, ರಾಜೇಂದ್ರ ಪಾಟೀಲ್ ರೇವೂರ, ಪ್ರಕಾಶ್ ಜಮಾದಾರ, ಸಿದ್ಧಾರ್ಥ್ ಬಸರಿಗಿಡ, ಭೀಮಾಶಂಕರ ಹೊನ್ನಕೇರಿ, ಚಂದಪ್ಪ ಕರಜಗಿ, ರಮೇಶ್ ಪೂಜಾರಿ, ಮಕ್ಬೂಲ್ ಪಟೇಲ್, ಶರಣು ಕುಂಬಾರ, ಅಸ್ಪಕ್ ಬಂದರವಾಡ, ಅಂಬರೀಷ್ ಬುರಲಿ, ಶಿವಾನಂದ ಗಾಡಿಸಾಹುಕಾರ, ರೇಣುಕಾ ಸಿಂಗೆ, ದಯಾನಂದ ದೊಡ್ಮನಿ, ಲಚ್ಚಪ್ಪ ಜಮಾದಾರ, ಅರವಿಂದ್ ಗುತ್ತೇದಾರ್ ಸೇರಿದಂತೆ ಮತ್ತಿತರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

22 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420