ಕಲಬುರಗಿ; ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಆಚರಣೆ ಮಾಡಲಾಯಿತು.
ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ಕೇಕ್ ಕತ್ತರಿಸಿ ಆಚರಣೆಗೆ ಚಾಲನೆ ನೀಡಿದರು. ನಂತರ ಪಂಚಾಯತ್ ದಿವಸ್ ಆಚರಣೆ ಮಹತ್ವ ಕುರಿತು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ವ್ಯವಸ್ಥೆ ಜಾರಿಗೊಳಿಸಿ ಗ್ರಾಮೀಣ ಜನರ ಅಶೋತ್ತರದಂತೆ ಪಂಚಾಯತಿಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಬ್ದುಲ್ ಅಜೀಮ್, ಯೋಜನಾ ನಿರ್ದೇಶಕ ಎಂ.ವಿ.ಚಲಕೇರಿ, ಮುಖ್ಯ ಲೆಕ್ಕಾಧಿಕಾರಿ ಸಂತೋಷ, ಅಧಿಕಾರಿಗಳಾದ ಮಧುಮತಿ, ವಿಜಯಲಕ್ಷ್ಮೀ ಹಾಗೂ ಮತ್ತಿತರರಿದ್ದರು.