ಶಿಕ್ಷಣದ ಜೊತೆಗೆ ಸಂಸ್ಕಾರ ಮುಖ್ಯ; ಕಸಾಪ ಉತ್ತರ ವಲಯದಿಂದ ವಿದ್ಯಾರ್ಥಿಗಳಿಗೆ ಸನ್ಮಾನ

ಕಲಬುರಗಿ: ವಿದ್ಯಾರ್ಥಿಗಳು ಕೇವಲ ಶಿಕ್ಷಣ ಕಲಿತರೆ ಸಾಲದು ಜೊತೆಗೆ ಸಂಸ್ಕಾರವನ್ನು ಕಲಿಯಬೇಕು, ಗುರು ಹಿರಿಯರಿಗೆ ಗೌರವವನ್ನು ಕೊಡುವುದು ಅತಿ ಅವಶ್ಯವಾಗಿದೆ ಎಂದು ದಿಶಾ ಪದವಿ ಪೂರ್ವ ಕಾಲೇಜು ಚೇರಮನ್ ಶಿವಾನಂದ ಖಜೂರ್ಗಿ ಹೇಳಿದರು.

ಅವರು ಇಂದಿಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉತ್ತರ ವಲಯ ಕಲಬುರಗಿ ವತಿಯಿಂದ 2023-24ನೇ ಸಾಲಿನ ವೈದ್ಯಕೀಯ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶÉ್ರೀಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದೆ ಬರಬೇಕಾದರೆ ಕಠಿಣ ಪರಿಶ್ರಮ ಅತಿ ಅವಶ್ಯವಾಗಿದೆ ಎಂದರು.

ಕೇವಲ ವಿದ್ಯೆಯನ್ನು ಕಲಿತರೆ ಸಾಲದು ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ಕೊಟ್ಟಾಗ ಮಾತ್ರ ಕಲಿತ ವಿದ್ಯೆ ಸಾರ್ಥಕವಾಗುತ್ತದೆ ಎಂದರು. ವಿದ್ಯಾರ್ಥಿಗಳು ಕೇವಲ ಇಂಜಿನಿಯರಿಂಗ್, ವೈದ್ಯಕೀಯ ಪದವಿಗಳಿಗೆ ಮಾತ್ರ ಗಮನ ಹರಿಸದೆ ಯುಪಿಎಸ್‍ಸಿ ಯಂತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ತಾವು ಮುಂದೆ ಬರುವುದರ ಜೊತೆಗೆ ಸಮಾಜ, ರಾಜ್ಯ,ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಸಮಾರಂಭದ ನೇತೃತ್ವ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಕಲಬುರಗಿ ಜಿಲ್ಲಾಧ್ಯಕ್ಷರಾದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ ನಾವು ಕೇವಲ ಇಂಗ್ಲೀಷಿನಲ್ಲಿಯೇ ದೊಡ್ಡ ಸಾಧನೆ ಮಾಡಲು ಸಾದ್ಯವೆಂದು ಕನ್ನಡ ಮಾದ್ಯಮ ವಿದ್ಯಾರ್ಥಿಗಳು ಹಿಂದೆ ಬೀಳದೆ ಕನ್ನಡ ಮಾಧ್ಯಮದಲ್ಲಿಯೇ ಕಲಿತು ಹೆಚ್ಚೆಚ್ಚು ಸಾಧನೆ ಮಾಢಬಹುದು ಎಂದರು. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಸಿಸಿದರೆ ಏನನ್ನಾದರೂ ಸಾಧಿಸಬಹುದು , ವಿದ್ಯೆ ನಿಂತ ನೀರಲ್ಲ ಅದು ನಿರಂತರತೆಯಿಂದ ಕೂಡಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಭುಲಿಂಗ ಮುಲಗೆ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತ ಉತ್ತರ ವಲಯ ವತಿಯಿಂದ ಪ್ರತಿವರ್ಷ ವಿದ್ಯಾರ್ಥಿಗಳಿಗೆ ಇಂತಹ ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಿಗೆ ಪ್ರೋತ್ಸಾಹಿಸುತ್ತಾ ಬಂದಿರುವುದನ್ನು ಸ್ಮರಿಸಿದರು. ವಿದ್ಯಾರ್ಥಿಗಳು ಇನ್ನು ಹೆಚ್ಚೆಚ್ಚು ಸಾಧನೆ ಮಾಡಲಿ ಎಂದು ಹಾರೈಸಿದರು.

ಗುರೂಜಿ ಡಿಗ್ರಿ ಕಾಲೇಜು ಅಧ್ಯಕ್ಷರಾದ ಕಲ್ಯಾಣಕುಮಾರ ಶೀಲವಂತ ಮಾತನಾಡಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಏನನ್ನಾದರೂ ಸಾಧಿಸಲು ಸಾಧ್ಯವಿದೆ ನಮ್ಮ ರಾಜ್ಯ, ದೇಶದ ಕೀರ್ತಿ ಮುಗಿಲೆತ್ತರಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳು ಶ್ರಮಿಸಬೆಕು ಎಂದರು.
ಜನಾಬ್ ಸೈಯದ್ ಶಾಹ ಮುರ್ತುಜಾ ಖಾದ್ರಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ವೇದಿಕೆ ಮೇಲೆ ಮೈರಾಡ್ ಜಿಲ್ಲಾ ಯೋಜನಾ ಅಧಿಕಾರಿ ಶಂಕರ ಉಜಳಂಬಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಜಾನಾಮೃತ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಕೇಂದ್ರದ ಅಧ್ಯಕ್ಷರಾದ ಕೆ. ಬಸವರಾಜ, ಚಂದ್ರಕಾಂತ ಬಿರಾದಾರ ಸೇರಿದಂತೆ ಅನೇಕರಿದ್ದರು.

ಇದೇ ಸಂದರ್ಭದಲ್ಲಿ ವೈದ್ಯಕೀಯ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 22 ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷರಾದ ಶಿವಯೋಗೆಪ್ಪಾ ಬಿರಾದಾರ, ಕಾರ್ಯದರ್ಶಿಗಳಾದ ಹಣಮಂತರಾಯ ದಿಂಡೂರೆ, ನಾಗೇಶ ತಿಮ್ಮಾಜಿ, ಕೋಶಾಧ್ಯಕ್ಷರಾದ ಶ್ರೀಕಾಂತಪಾಟೀಲ ದಿಕ್ಸಂಗಾ, ಸಂಚಾಲಕರಾದ ನವಾಬ್ ಖಾನ್, ಮಹಿಳಾ ಪ್ರತಿನಿಧಿಗಳಾದ ಶ್ರೀಮತಿ ಶಿವಕನ್ಯಾ ಬಿಸಿಬಿಸಿ, ಕವಿತಾ ದೇಗಾಂವ, ಮತ್ತು ಕೃಷ್ಣನಾಯಕ ಮತ್ತು ಹೇಮಂತ ಸರ್ದಾರ, ವಿಜಯಕುಮಾರ ಬಂಗಾರಿ, ಬಸವರಾಜ ಮಾಲಿ ರೇಣುಕಾಚಾರ್ಯ ಸ್ಥಾವರಮಠ, ಅನೀಲಕುಮಾರ ಧೋತ್ರಿ, ಭೀಮಾಶಂಕರ ಮುಲಗೆ ಸೇರಿದಂತೆ ಅನೇಕರು ಇದ್ದರು.

ಪ್ರಾರಂಭದಲ್ಲಿ ಶಿಕ್ಷಕರಾದ ಸಂಜೀವಕುಮಾರ ಪಾಟೀಲ ಪ್ರಾರ್ಥನಾ ಗೀತೆ ಹಾಡಿದರು. ಕಸಾಪ ಉತ್ತರ ವಲಯ ಸಂಚಾಲಕರಾದ ನವಾಬ್ ಖಾನ್ ಕಾರ್ಯಕ್ರಮದ ನಿರೂಪಣೆಯನ್ನು ನಡೆಸಿಕೊಟ್ಟರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

1 hour ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

4 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

8 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

9 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

11 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420