ಇಬ್ಬರು ಮಹಿಳೆಯರ ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಆಗ್ರಹ

ಕಲಬುರಗಿ: ನಗರದ ವಲಯದ ಹೊರ ಏಪ್ರಿಲ್ 07 ರಂದು ತಾವರಗೇರಾ ಕ್ರಾಸ್ ಹತ್ತಿರ ಕಾರ್ಮಿಕರಾಗಿರುವ ಕೂಲಿ ಇಬ್ಬರ ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ ಕೊಲೆ ಮಾಡಿ 17 ದಿನಗಳು ಕಳೆದರು ಕೂಡ ಇಲ್ಲಿಯವರೆಗೆ ಆರೋಪಿಗಳನ್ನು ಬಂದಿಸಿರುವುದಿಲ್ಲ. ಆದ್ದರಿಂದ ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣವಾದ ಕಾನೂನು ಕ್ರಮಕೈಗೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಲ್. ಕೆರಮಗಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಶರಣಮ್ಮ, ಗಂಡ ಅಣ್ಣಾರಾವ ವಯಸ್ಸು: 54 ಸಾ: ಕೆರಿಅಂಬಲಗಾ ಗ್ರಾಮ, ಮತ್ತು ಚಂದಮ್ಮ ಗಂಡ ಬಾಬುರಾವ ವಯಸ್ಸು: 55 ಸಾ: ತಾಜ ಸುಲ್ತಾನಪೂರ ಇವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಮತ್ತು ಆರ್ಥಿಕವಾಗಿ ಬಡ ಕುಟುಂಬದವರಾಗಿದ್ದು, ದಿನನಿತ್ಯ ತಮ್ಮ ಕುಟುಂಬ ನಿರ್ವಹಣೆಗಾಗಿ ಗುಲಬರ್ಗಾ ನಗರದ ಗಂಜ ಬಸ್ಟಾಂಡ್ ಮಿಂಚಗೋರಿ ನಾಕಾ ಹತ್ತಿರ ದಿನಾಲು ಕೂಲಿ ಕೆಲಸಕ್ಕಾಗಿ ಬರುತ್ತಿದ್ದರು. ಅಲ್ಲಿದ್ದ ಗುತ್ತಿಗೆದಾರರು ಕೆಲಸಕ್ಕೆ ಕರೆದುಕೊಂಡು ಹೊಗುವವರು ಬಂದು ಅವರು ಕೆಲಸ ಮಾಡಿ ದಿನನಿತ್ಯ ಮನೆಗೆ ಹೋಗುತ್ತಿದ್ದರು.

7 ರಂದು ಬೆಳಿಗ್ಗೆ: 8.30 ಕ್ಕೆ ಕೂಲಿ ಕೆಲಸಕ್ಕೆ ಎಂದು ಸದರಿ ನಾಕದಲ್ಲಿ ಬಂದು ದಿನನಿತ್ಯ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಆದರೆ ನಂತರ ಸುಮಾರು 10.00 ಗಂಟೆಗೆ ತಾವರಗೇರಾ ಕ್ರಾಸ್ ಹತ್ತಿರ ಜಮೀನೊಂದರಲ್ಲಿ ಇವರಿಬ್ಬರಿಗೆ ಯಾರೋ ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಹಾಡುಹಗಲೆ ದಿನನಿತ್ಯ ಕೊಲೆಗಳು ಆಗುತಿದ್ದರು. ಕೊಲೆಗಳು ಆಗಿ 17 ದಿನಗಳು ಕಳೆದರೂ ಕೂಡ ಸದರಿಜಿಲ್ಲಾಡಳಿತ ಮತ್ತು ಜಿಲ್ಲಾ ಪೆÇೀಲಿಸ್ ಇಲಾಖೆಯವರು ಸದರಿ ಆರೋಪಿಗಳನ್ನು ಪತ್ತೆ ಹಚ್ಚಿನ ಬಂದಿಸಲು ಸಂಪೂರ್ಣವಾಗಿ ವಿಫಲವಾಗಿರುತ್ತದೆ.

ಆದಕಾರಣ ತಾವುಗಳು ಕಲಬುರಗಿ ಜಿಲ್ಲೆಯ ಸಮಿಪದಲ್ಲಿರುವ ತಾವರಗೇರಾ ಕ್ರಾಸ್ ಹತ್ತಿರ ಇಬ್ಬರ ಮಹಿಳೆಯರನ್ನು ಬರ್ಬರವಾಗಿ ಹತ್ಯೆಯಾದ ಮಹಿಳೆಯರ ಕುಟುಂಬಕ್ಕೆ ಸರ್ಕಾರದಿಂದ ಪ್ರತಿಯೊಬ್ಬರಿಗೆ 20 ಲಕ್ಷ ಪರಿಹಾರ ಹಾಗೂ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಮತ್ತು 5 ಎಕರೆ ಜಮೀನು ಮಂಜೂರು ಮಾಡಿಕೋಡಬೇಕು ಮತ್ತು ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ 7 ದಿನಗಳ ಒಳಗಾಗಿ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಒಂದು ವೇಳೆ ಸದರಿ ವಿಷಯದ ಕುರಿತು ನಿರ್ಲಕ್ಷ್ಯ ವಹಿಸಿದಲ್ಲಿ ತಮ್ಮ ಕಛೇರಿ ಎದುರುಗಡೆ ಬ್ರಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಗುರಣ್ಣಾ ಐನಾಪುರ, ಯುವ ಘಟಕದ ರಾಜ್ಯಾಧ್ಯಕ್ಷ ಪ್ರಕಾಶ ಔರಾದಕರ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಶಿವಶಂಕರ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಲ್. ಕೆರಮಗಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ದೊಡ್ಡಮನಿ ಸೇರಿದಂತೆ ಇತರರು ಇದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420