ಸುರಪುರ: ಮೇ7 ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಕಳೆದ ಒಂದು ವಾರದಲ್ಲಿ 7 ಪ್ರಕರಣಗಳನ್ನು ದಾಖಲಿಸಲಾಗಿದೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸುರಪುರ ವಿ.ಸ ಉಪ ಚುನಾವಣೆ ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ ಅವರು,ಏಪ್ರಿಲ್ 15 ರಂದು ಒಂದು ಸಮುದಾಯದ ಪೂಜ್ಯರಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೊವಧೆ ಮಾಡಿರುವುದರ ಜೊತೆಗೆ ಚುನಾವಣಾ ಕಾಲದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗುವ ಕಾರಣಕ್ಕೆ ಕ್ಷಿಪ್ರ ಸಂಚಾರಿದಳ-10 ತಂಡವು ತನಿಖೆ ನಡೆಸಿ ನೀಡಿದ ವರದಿ ಆಧಾರದ ಮೇಲೆ ನಾಗರಾಜ ಎನ್ನುವವರ ವಿರುದ್ಧ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಏಪ್ರಿಲ್ 19 ರಂದು ಪರವಾನಿಗೆ ಪಡೆಯದೆ 4 ವಾಹನಗಳು ಕಾಂಗ್ರೆಸ್ ಪಕ್ಷದ ಧ್ವಜಗಳನ್ನು ಕಟ್ಟಿಕೊಂಡು ಹೋಗುತ್ತಿರುವ ಕುರಿತು ದೂರು ಬಂದ ಕಾರಣ ಕ್ಷೀಪ್ರ ಸಂಚಾರಿ ದಳ-3 ತಂಡವು ತನಿಖೆ ಕೈಗೊಂಡು ಎರಡು ಮೋಟರ್ ಸೈಕಲ್,ಎರಡು ಕ್ರೂಷರ್ ವಾಹನಗಳ ಮೇಲೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಏಪ್ರಿಲ್ 23 ರಂದು ಪರವಾನಿಗೆ ಪಡೆಯದೆ 2 ವಾಹನಗಳಲ್ಲಿ ಒಂದು ಮೋಟರ್ ಸೈಕಲ್ ಮತ್ತೊಂದು ಟ್ರ್ಯಾಕ್ಟರ್ ಗೆ ಬಿಜೆಪಿ ಪಕ್ಷದ ಧ್ವಜಗಳನ್ನು ಕಟ್ಟಿಕೊಂಡು ಹೋಗುತ್ತಿದ್ದ ಬಗ್ಗೆ ದೂರು ಬಂದ ಕಾರಣ,ದೂರಿನ ಕುರಿತು ಕ್ಷೀಪ್ರ ಸಂಚಾರಿ ದಳ-6 ತಂಡವು ತನಿಖೆ ನಡೆಸಿ ವರದಿ ನೀಡಿದ್ದು ಪರವಾನಿಗೆ ಪಡೆಯದೆ ಧ್ವಜಗಳನ್ನು ಕಟ್ಟಿಕೊಂಡು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದರ ವಿರುದ್ಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…