ಕಲಬುರಗಿ: ರಾಜ್ಯದಲ್ಲಿ ಈಗ ಶಿಕ್ಷಣ, ಯುವಕರಿಗೆ ನೌಕರಿ, ಸಾಮಾಜಿಕ ಸಮಾನತೆ, ಮಹಿಳೆಯರ ಸಬಲತೆಯ ಚರ್ಚೆ ನಡೆದಿದೆ. ಆದರೆ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗ ಹಜಾನ್, ಹಿಜಾಬ್, ಹಲಾಲ್ ಕಟ್, ಜಟ್ಕಾಕಟ್ ದಂತಹ ವಿಷಯಗಳೆ ಚರ್ಚೆಯಲ್ಲಿದ್ದವು. ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಿಮ್ಮ ಮುಂದೆ ಮತ ಕೇಳಲು ಬಂದಿದ್ದೇವೆ. ಹೋಲಿಕೆ ಮಾಡಿ ನೋಡಿ ಮತದಾನ ಮಾಡಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.
ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರ ಪರಯಾಚಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದಲ್ಲಿ 4.80 ಕೋಟಿ ಜನರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ.ಇದಕ್ಕೆ ನಿಮ್ಮ ಮತಗಳ ಆಶೀರ್ವಾದ ಕಾರಣವಾಗಿದೆ ಎಂದು ಹೇಳಿದ ಖರ್ಗೆ, ಬಿಜೆಪಿ ಎಂದಾದರೂ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗ ನೀಡುವ ಮಾತು ಆಡಿದೆಯಾ? ಎಂದು ಪ್ರಶ್ನಿಸಿದರು.
ಮೊದಲ ಹಂತದ ಚುನಾವಣೆಯ ನಂತರ ಮೋದಿಯ ಖುರ್ಚಿ ಅಲಗಾಡುತ್ತಿದೆ ಅವರು ನಿರೀಕ್ಷಿಸಿದಂತೆ ಮತ ಬಂದಿಲ್ಲ ಎಂದು ಅರಿವಿಗೆ ಬಂದ ಕೂಡಲೇ ಅವರ ಮಾತಿನ ಧಾಟಿ ಬದಲಾಗಿದೆ. ಛತ್ತೀಸ್ ಗಡ್, ಗೋವಾ ಹೀಗೆ ಹೋದಕಡೆಯೆಲ್ಲ ಸುಳ್ಳು ಹೇಳುತ್ತಲೇ ಹೋಗಿದ್ದಾರೆ. ಚಿಕ್ಕ ಮಕ್ಕಳು ಕೂಡಾ ಸುಳ್ಳು ಹೇಳಲು ಹಿಂದೆ ಮುಂದೆ ನೋಡುತ್ತಾರೆ. ಆದರೆ ಮೋದಿ ಸಲೀಸಾಗಿ ಸುಳ್ಳು ಹೇಳುತ್ತಾರೆ ಎಂದು ಟೀಕಿಸಿದರು.
ಬಿಜೆಪಿಯ ವಿರುದ್ದ ನಾವು ಹೋರಾಟ ನಡೆಸುತ್ತೇವೆ. ಕಾಂಗ್ರೆಸ್ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಬಿಜೆಪಿಗೆ 400 ಸೀಟು ಬರುವುದಕ್ಕೆ ಬಿಡುವುದಿಲ್ಲ ಎಂದು ಘೋಷಿಸಿದ ಖರ್ಗೆ . ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ಚಲಾಯಿಸುವಂತೆ ಮನವಿ ಮಾಡಿದ ಪ್ರಿಯಾಂಕ್ ಖರ್ಗೆ ಒಂದು ಅವಕಾಶ ನೀಡಿ ಅಭಿವೃದ್ದಿ ಮಾಡಲು ಆಶೀರ್ವಾದ ಮಾಡಿ ಎಂದರು.
ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾವಣೆ ಮಾಡುವ ಮೂಲಕ ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು
ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ್ ಮಾತನಾಡಿ ಜಾತ್ಯಾತೀತ ತತ್ವವನ್ನು ಕಾಂಗ್ರೆಸ್ ಅಳವಡಿಸಿಕೊಂಡಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲ ಧರ್ಮದ ಜನರು ಭಾಗವಹಿಸಿ ತಮ್ಮ ಕೊಡುಗೆ ನೀಡಿದ್ದಾರೆ. ಆದರೆ ಆ ಸಂದರ್ಭದಲ್ಲಿ ಬಿಜೆಪಿ ಇರಲಿಲ್ಲ. ಅದು ಬ್ರಿಟೀಷರೊಂದಿಗೆ ಕೈ ಜೋಡಿಸಿ ದೇಶಕ್ಕೆ ಅನ್ಯಾಯ ಮಾಡಿದೆ. ಕಾಂಗ್ರೆಸ್ ತನ್ನ ಅಧಿಕಾರವಧಿಯಲ್ಲಿ ಜಾರಿಗೆ ತಂದ ಬಡವರ ಪರವಾದ ಕಾರ್ಯಕ್ರಮಗಳನ್ನು ಬಿಜೆಪಿ ರದ್ದುಗೊಳಿಸಿದೆ ಎಂದು ಆರೋಪಿಸಿದರು.
ಖಾಜಾ ಬಂದೇನವಾಜ್ ದರ್ಗಾದ ಪೀಠಾಧಿಪತಿ ಡಾ ಮುಸ್ತಫಾ ಅಲ್ ಹುಸೇನ್, ಮಾತನಾಡಿ ದೇಶ ಉಳಿಯಬೇಕು ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.
ಶಾಸಕಿ ಕನೀಜ್ ಫಾತಿಮಾ ಮಾತನಾಡಿ ಪ್ರತಿಯೊಂದು ಮತಕ್ಕೂ ಮೌಲ್ಯವಿದೆ. ಯುವಕರು ಮಹಿಳೆಯರು ಸೇರಿದಂತೆ ಎಲ್ಲರೂ ತಪ್ಪದೇ ಮತದಾನ ಮಾಡಿ. ಇದು ಎಲ್ಲರ ಜವಾಬ್ದಾರಿ ಯಾಗಿದೆ. ಇದು ಕೇವಲ ರಾಧಾಕೃಷ್ಣ ಅವರ ಚುನಾವಣೆಯಲ್ಲ ಇದು ನಮ್ಮೆಲ್ಲರ ಚುನಾವಣೆಯಾಗಿದೆ. ಕನಿಷ್ಠ 85% ಮತದಾನ ಮಾಡಿ ಕಳೆದ ಸಲದಂತೆ ಈ ಸಲವೂ ಲೀಡ್ ಕೊಡಬೇಕು ಎಂದು ಮನವಿ ಮಾಡಿದರು.
ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಭಾನುಪ್ರತಾಪ್ ಸಿಂಗ್ ಸೇರಿದಂತೆ ಹಲವರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…