ಏಪ್ರಿಲ್ 25 ರಿಂದ ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಚಾಲನೆ: 1,545 ಜನ ಮನೆಯಿಂದಲೇ ಮತದಾನ

0
17

ಕಲಬುರಗಿ: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ಚಲಾಯಿಸುವ ಪ್ರಕ್ರಿಯೇ ಜಿಲ್ಲೆಯಾದ್ಯಂತ ಇದೇ ಏಪ್ರಿಲ್ 25 ರಿಂದ 26ರ ವರೆಗೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಗುಲಬರ್ಗಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷ ಮೇಲ್ಪಟ್ಟ 18,233 ಹಿರಿಯ ನಾಗರೀಕರು ಮತ್ತು 22,123 ವಿಶೇಷ ಚೇತನರಿದ್ದು, ಇದರಲ್ಲಿ ಕ್ರಮವಾಗಿ 1,149 ಹಿರಿಯ ನಾಗರೀಕರು ಹಾಗೂ 396 ವಿಶೇಷಚೇತನರು ಮನೆಯಿಂದ ಮತದಾನ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೆ 12ಡಿ ನಮೂನೆ ಸಹ ವಿತರಿಸಲಾಗಿದೆ ಎಂದರು.

Contact Your\'s Advertisement; 9902492681

ಇದಕ್ಕಾಗಿ ಜಿಲ್ಲೆಯಾದ್ಯಂತ ಸುಮಾರು 81 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡದೊಂದಿಗೆ ಪಿ.ಆರ್.ಓ, ಎ.ಪಿ‌.ಆರ್.ಓ, ಮೈಕ್ರೋ ವೀಕ್ಷಕರು, ಸೆಕ್ಟರ್ ಅಧಿಕಾರಿಗಳು ಇರಲಿದ್ದು, ಮನೆ‌ ಮನೆಗೆ ಪೋಸ್ಟಲ್ ಬಾಕ್ಸ್ ನೊಂದಿಗೆ ತೆರಳಿ ಮತದಾನ ಮಾಡಿಸಲಿದ್ದಾರೆ. ಈ ಕುರಿತು ಈಗಾಗಲೆ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಗಮನಕ್ಕೂ ತರಲಾಗಿದೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here