ಶಹಾಬಾದ:ಯಾದಗಿರಿಯಲ್ಲಿ ರಾಕೇಶ ಎಂಬ ಯುವಕನನ್ನು ಕೊಲೆ ಮಾಡಿರುವ ಫಯಾಜ್ ಹಾಗೂ ಅವನ ಸಂಗಡಿಗರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಹಾಗೂ ಮೃತಪಟ್ಟ ಕುಟುಂಬಕ್ಕೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಮಾದಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಕೇವಲ ರೊಟ್ಟಿ ಕೇಳಲು ಹೋದ ರಾಕೇಶ ಎಂಬ ಯುವಕನ ಮೇಲೆ ಫಯಾಜ್ ಹಾಗೂ ಇನ್ನೂ 7 ಜನ ಸಂಗಡಿಗರು ಕೂಡಿಕೊಂಡು ಕೊಲೆ ಮಾಡಿದ್ದಾರೆ.ಇದು ಅಮಾನವೀಯ ಘಟನೆ.ರಾಜ್ಯದಲ್ಲಿ ಇಂತಹ ಅನೇಕ ಘಟನೆಗಳು ಮುಸ್ಲಿಂ ಸಮುದಾಯದ ಯುವಕರಿಂದ ಇತರ ಸಮುದಾಯದ ಯುವಕರ ಮೇಲೆ ಹಲ್ಲೆ, ಕೊಲೆ ಮಾಡುವ ಘಟನೆಗಳು ನಡೆಯುತ್ತಿವೆ.ಈ ಬಗ್ಗೆ ರಾಜ್ಯ ಸರಕಾರ ಕ್ರಮಕೈಗೊಳ್ಳುವಲ್ಲಿ ಹಿಂದೇಟು ಹಾಕುತ್ತಿರುವುದರಿಂದ ಮತ್ತೆ ಇಂತಹ ಘಟನೆಗಳು ಮರುಕಳಿಸುತ್ತಿವೆ.ಕೂಡಲೇ ಕಠಿಣ ಕ್ರಮಕೈಗೊಳ್ಳಬೇಕು. ಸರಕಾರದಿಂದ ಮೃತ ಕುಟುಂಬಕ್ಕರ ಪರಿಹಾರ ಹಾಗೂ ಸೌಲಭ್ಯಗಳನ್ನು ಒದಗಿಸಿಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾದಿಗ ಸಮಾಜದ ತಾಲೂಕಾಧ್ಯಕ್ಷ ವಿಕ್ರಮ್ ಮೂಲಿಮನಿ,ಶರಣು ಪಗಲಾಪೂರ,ಶಿವರಾಜ ಕೋರೆ,ರವಿ ಬೆಳಮಗಿ,ಸ<ತೋಷ ಹುಲಿ, ಪರಶುರಾಮ ದೇವತಕಲ್,ಲಕ್ಷ್ಮಿಕಾಂತ ಬಳಿಚಕ್ರ, ಮಹೇಶಕುಮಾರ ಕಾಂಬಳೆ,ಶ್ರೀಧರ್ ಕೊಲ್ಲೂರ್,ಪ್ರಮೋದ ಮಲ್ಲಾರ್,ಶಿವನಾಗ ದುಪ್ಪಲ್ಲಿ, ಯಲ್ಲಾಲಿಂಗ ಹೈಯ್ಯಾಳಕರ್ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…