27ರಂದು ಅನುದಾನಿತ ಶಾಲಾ ಕಾಲೇಜು ನೌಕರರ ವಿಭಾಗ ಮಟ್ಟದ ಸಭೆ

0
160

ಕಲಬುರಗಿ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟದಿಂದ ಏ.27 ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಎನ್.ವಿ.ಪದವಿ ಪೂರ್ವ ಕಾಲೇಜಿನಲ್ಲಿ ಅನುದಾನಿತ ಶಾಲಾ-ಕಾಲೇಜು ನೌಕರರ ಪ್ರಮುಖ ಬೇಡಿಕೆಗಳ ಕುರಿತು ಗುಲ್ಬರ್ಗಾ ವಿಭಾಗ ಮಟ್ಟದ ಸಭೆ ನಡೆಯಲಿದೆ ಎಂದು ಒಕ್ಕೂಟದ ಕಾರ್ಯಾಧ್ಯಕ್ಷ ಬಿ.ಎಸ್.ಮಾಲಿಪಾಟೀಲ್ ತಿಳಿಸಿದ್ದಾರೆ.

೨೦೦೬ ಏಪ್ರಿಲ್ ೧ರ ಪೂರ್ವ ಹಾಗೂ ನಂತರ ಸೇವೆಗೆ ಸೇರಿ ನಂತರ ಅನುದಾನಕ್ಕೆ ಒಳಪಟ್ಟವರಿಗೆ ಹಳೆ ಪಿಂಚಣಿ ನೀಡುವುದು, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳ ಭರ್ತಿ, ಬಿ.ಇಡಿ ರಹಿತ ಸರಕಾರಿ-ಅನುದಾನಿತ ಉಪನ್ಯಾಸಕರಿಗೆ ಬಿಇಡಿ ವಿನಾಯಿತಿ, ಪದವಿ ಪೂರ್ವ ಕಾಲೇಜುಗಳ ಅಸ್ಥಿತ್ವ ಹಾಗೂ ಪರೀಕ್ಷಾ ಮಂಡಳಿ, ಗುಲ್ಬರ್ಗಾ ವಿಭಾಗ ಮಟ್ಟದ ಹೊಸ ಪದಾಧಿಕಾರಿಗಳ ಆಯ್ಕೆ, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾರ್ಯಭಾರದ ಸಮಸ್ಯೆ ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಸಭೆಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಪಿ.ಕರಬಸಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಗುರುವ, ಬಿ.ಸಿ.ರೇವಣ್ಣ ಅವರು ಭಾಗವಹಿಸಲಿದ್ದಾರೆ. ಜಿಲ್ಲಾ, ವಿಭಾಗೀಯ ಮಟ್ಟದ ಎಲ್ಲ ಪದಾಧಿಕಾರಿಗಳು, ಸಂಬAಧಿಸಿದ ಎಲ್ಲಾ ಅನುದಾನಿತ ಶಾಲಾ ಕಾಲೇಜುಗಳ ನೌಕರರು ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here