ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರು ಮತದಾನ ಮಾಡಿ

0
8

ಸುರಪುರ: ಪ್ರಜಾಪ್ರಭುತ್ವದ ಯಶಸ್ವಿಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ಸ್ನಾತಕೋತ್ತರ ಮಹಾವಿದ್ಯಾಲಯದ ಪ್ರಾಂಶುಪಾಲರು ಹಾಗೂ ರಾಯಚೂರು ವಿಶ್ವವಿದ್ಯಾಲಯದ ಪರಿಷತ್ತು ಸದಸ್ಯರಾದ ಡಾ.ಮಲ್ಲಿಕಾರ್ಜುನ ಕುಲಕರ್ಣಿ ಹೇಳಿದರು.

ನಗರದ ರಂಗಂಪೇಟಯ ಪ್ರಿಯದರ್ಶಿನಿ ಪದವಿ ಮಹಾವಿದ್ಯಾಲಯ ಹಾಗೂ ಮೈಲಾರಲಿಂಗೇಶ್ವರ ಸ್ನಾತಕೋತ್ತರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರಾಯಚೂರು ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಪ್ರತಿಯೊಬ್ಬರು ಮತದಾನ ಮಾಡಿ ಹಾಗೂ ಮತದಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮತದಾನದ ಮಹತ್ವದ ಕುರಿತು ಹೇಳಿದರು.

Contact Your\'s Advertisement; 9902492681

ಈ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಭೀಮಣ್ಣ ಬಿಲ್ಲವ್ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಗುರುರಾಜ್ ಬಿಲ್ಲವ್ ಅವರು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿಯದರ್ಶಿನಿ ಸ್ನಾತಕ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ನಿಂಗಣ್ಣ ಹೆಗ್ಗನದೊಡ್ಡಿ ಅವರು ವಹಿಸಿದರು.

ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಮೌನೇಶ್ ಹಾವಿನಾಳ ನಿರೂಪಿಸಿದರು. ರಂಗಂಪೇಟೆಯ ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಘೋಷ ವಾಕ್ಯಗಳನ್ನು ಕೂಗುತ್ತಾ ಮತದಾನದ ಜಾಗೃತಿ ಮೂಡಿಸಿದರು. ಉಪನ್ಯಾಸಕರಾದ ರಜಾಕ್ ಭಗವಾನ್, ಬಿ ಜಿ ನಾಯಕ, ಅಂಬ್ರೆಶ್ ನಾಯಕ, ಇರಗರಾಜ, ಭರತ್ ಉದ್ದಾರ್, ಹನುಮಂತ್ರಾಯ ಭಜಂತ್ರಿ, ಶರಣು ಪತ್ತೆಪುರ, ಪರಮಣ್ಣ, ರಮೇಶ, ಶ್ರೀದೇವಿ ನಾಯಕ, ಅಭಿಷೇಕ್ ಬಡಗಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here