ಹೈದರಾಬಾದ್ ಕರ್ನಾಟಕ

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗುವಂತೆ ಸಿ.ಇ.ಓ ಭಂವರ್ ಸಿಂಗ್ ಮೀನಾ ಕರೆ

ಕಲಬುರಗಿ: ಗುಲಬರ್ಗಾ ಲೋಕಸಭೆ ಚುನಾವಣೆಗೆ ಮೇ 7 ರಂದು ಚುನಾವಣೆ ನಡೆಯಲಿದ್ದು, ಮಹತ್ವದ ಈ ಪ್ರಜಾಪ್ರಭುತ್ವ ಹಬ್ಬದಲ್ಲಿ ಕಡ್ಡಾಯವಾಗಿ‌ ಮತದಾನ ಮಾಡುವ ಮೂಲಕ ಸಕ್ರಿಯವಾಗಿ ಎಲ್ಲರು ಭಾಗಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ ಕರೆ ನೀಡಿದರು.

ಶುಕ್ರವಾರ ಜಿಲ್ಲಾ ಸ್ವೀಪ್ ಸಮಿತಿಯಿಂದ ಚಿಂಚೋಳಿ ತಾಲೂಕಿನ ವೆಂಕಟಾಪುರ ಗ್ರಾಮದ ಸೇರಿಭಿಕನಳ್ಳಿ ತಾಂಡಾದಲ್ಲಿ ಮನೆ ಮನೆಗೆ ಭಿತ್ತಿಪತ್ರ ಹಿಡಿದುಕೊಂಡು ಹೋಗಿ ಕಡ್ಡಾಯ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿ ಮಾತನಾಡಿದರು.

ತಾಲ್ಲೂಕಿನ ಗಡಿ ಭಾಗವಾದ ವೆಂಕಟಪೂರ ಗ್ರಾಮಕ್ಕೆ ಸಾರಿಗೆ ಸಂಪರ್ಕ ಇಲ್ಲ ಎಂಬುದನ್ನು ಗ್ರಾಮಸ್ಥರಿಂದ ಅರಿತ ಭಂವರ್ ಸಿಂಗ್ ಮೀನಾ ಅವರು, ಮತದಾನ ದಿನದಂದು ಮತಗಟ್ಟೆಗೆ ತೆರಳಲು ತಾಂಡಾಗೆ ವಾಹನದ ವ್ಯವಸ್ಥೆ ಮಾಡಲಾಗುವುದು. ಪ್ರತಿಯೊಬ್ಬರು ಮತಗಟ್ಟೆಗೆ ಬಂದು ತಮ್ಮ ಪವಿತ್ರವಾದ ಮತದ ಹಕ್ಕು ಚಲಾಯಿಸಬೇಕು. ಇದಲ್ಲದೆ ತಾಂಡಾ ನಿವಾಸಿಗಳು ಉದ್ಯೋಗ ಅರಸಿ ನಗರಕ್ಕೆ ವಲಸೆ‌ ಹೋಗಿದಲ್ಲಿ ಅಂತವರನ್ನು ಸಹ ಕರೆಸಿ ಅವರ ಹಕ್ಕು ಚಲಾಯಿಸಲು ತಿಳಿಸಬೇಕು ಎಂದು ಗ್ರಾಮಸ್ಥರಿಗೆ ಭಂವರ್ ಸಿಂಗ್ ಮೀನಾ ಕರೆ ನೀಡಿದರು.

ಲೋಕಸಭಾ ಚುನಾವಣೆ ಇದು ದೇಶದ ಅತಿ ದೊಡ್ಡ ಜನತಂತ್ರದ ಹಬ್ಬವಾಗಿದ್ದು, ಪ್ರತಿಯೊಬ್ಬರು ಮತ ಚಲಾಯಿಸುವ ಮೂಲಕ ಸಂಭ್ರಮದಿಂದ ಆಚರಣೆ ಮಾಡಬೇಕು. ಮತದಾನಕ್ಕಿಂತ ಪವಿತ್ರ ಕಾರ್ಯ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಪ್ರತಿಜ್ಞೆ ವಿಧಿ ಎಲ್ಲರು ಸ್ವೀಕರಿಸಬೇಕು ಎಂದರು.

ಕಲಬುರಗಿ ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮೀಡಿಯಾ ಮಾನಿಟರ್ ಉಸ್ತುವಾರಿ ಅಧಿಕಾರಿ ಸುಮಿತಕುಮಾರ ಪಾಟೀಲ್, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಂಕರ ರಾಠೋಡ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹ್ಮದ್ ಮುನೀರ್, ಸಹಾಯಕ ನಿರ್ದೇಶಕ(ಗ್ರಾಉ) ಶಿವಶಂಕ್ರಯ್ಯ, ತಾಲ್ಲೂಕು ಯೋಜನಾಧಿಕಾರಿ ಮಲ್ಲಿಕಾರ್ಜುನ ಕಟ್ಟಿಮನಿ, ಪಿ.ಡಿ.ಓ ದಶರಥ ಪಾತ್ರೆ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago