ಬಿಸಿ ಬಿಸಿ ಸುದ್ದಿ

ರೋಡ್ ಶೋ ಉತ್ಸಾಹ ಮೇ 7ರಂದು ಮತಗಳಾಗಿ ಪರಿವರ್ತನೆ ಆಗಲಿ: ಡಾ. ಉಮೇಶ್ ಜಾಧವ್

ಕಲಬುರಗಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರು ಪಾಲ್ಗೊಂಡ ಜನಸ್ತೋಮದ ಉತ್ಸಾಹವು ಮೇ ಏಳರಂದು ನಡೆಯುವ ಮತದಾನದಲ್ಲಿ ಬಿಜೆಪಿಯ ಮತಗಳಾಗಿ ಪರಿವರ್ತನೆಗೊಳ್ಳಬೇಕು ಎಂದು ಡಾ. ಉಮೇಶ್ ಜಾಧವ್ ಹೇಳಿದರು.

ಗಣೇಶ ಮಂದಿರದಿಂದ ಸೂಪರ್ ಮಾರ್ಕೆಟ್ ವರೆಗೆ ನಡೆದ ನಡ್ಡಾ ಅವರ ಬೃಹತ್ ರೋಡ್ ಶೋ ಬಿಜೆಪಿ ಶಕ್ತಿ ಪ್ರದರ್ಶನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಇಂದಿನ ರೋಡ್ ಶೋ ದಲ್ಲಿ ಕಂಡ ಉತ್ಸಾಹ ಹಾಗೂ ಜನಸಾಗರ ನೋಡಿ ಅತ್ಯಂತ ಖುಷಿಯಾಗಿದೆ. ‘ಅಬ್ ಕಿ ಬಾರ್ ಚಾರ್ ಸೌ ಪಾರ್ ‘ಘೋಷಣೆಯು ಸಾಕಾರಗೊಳ್ಳುವುದು ಖಚಿತವಾಗಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲು ಕಲಬುರ್ಗಿಯಲ್ಲಿ ಮತದಾರರು ಮೇ ಏಳರಂದು ಮತಯಂತ್ರದಲ್ಲಿ ಒಂದನೇ ಸೀರಿಯಲ್ ಸಂಖ್ಯೆ ಮುಂದಿರುವ ಕಮಲದ ಗುರುತಿನ ಬಟನ್ ಒತ್ತಿ ಪ್ರಚಂಡ ಬಹುಮತದಿಂದ ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದು ಹೇಳಿದರು.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಿಜೆಪಿ ನಡ್ಡಾ ಇತ್ತೀಚೆಗೆ ಐದು ರಾಜ್ಯಗಳ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿ ಭರ್ಜರಿ ಜಯಸಾಧಿಸಿ ಗೆಲುವಿನ ಸರದಾರ ಎಂದು ಖ್ಯಾತಿ ಹೊಂದಿದ್ದಾರೆ .

ಇದೀಗ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನೇತೃತ್ವವನ್ನು ವಹಿಸಿ ಕಲಬುರ್ಗಿಯ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದಕ್ಕೆ ಕಲ್ಬುರ್ಗಿಯ ಮಹಾಜನತೆಯ ಪರವಾಗಿ ಅವರಿಗೆ ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ಈ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಬಿಜೆಪಿ ಗೆಲುವಿಗೆ ಕಾರಣಕರ್ತರಾಗಬೇಕು ಎಂದು ಮತದಾರರಲ್ಲಿ ವಿನಂತಿಸಿದರು.

ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರವರು ಮಾತನಾಡಿ ನಡ್ಡಾ ಅವರು ನಡೆಸಿದ ರೋಡ್ ಶೋ ಭಾರಿ ಯಶಸ್ವಿಯಾಗಿದ್ದು ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸಲು ಎಲ್ಲರೂ ಸಿದ್ಧರಾಗಿ ನಿಂತ ಈ ಹುಮ್ಮಸ್ಸು ನಿಜಕ್ಕೂ ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಪ್ರೇರಣೆ ನೀಡಿದೆ.

ಈ ಬಾರಿ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸುವುದಾಗಿ ಸಹಮತ ಸೂಚಿಸಲು ಎಲ್ಲರೂ ಮೊಬೈಲ್ ಟಾರ್ಚ್ ಆನ್ ಮಾಡಿ ಎಂದಾಗ ಸಾವಿರಾರು ಸಂಖ್ಯೆಯ ಮೊಬೈಲ್ ಗಳಲ್ಲಿ ಜನರು ಬೆಳಕಿನ ಚಿತ್ತಾರ ಮೂಡಿಸಿದರು. ಬಿಜೆಪಿ ನಗರ ಅಧ್ಯಕ್ಷರಾದ ಚಂದು ಪಾಟೀಲ್ ಅವರು ಸ್ವಾಗತ ಕೋರಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago