ಆಳಂದ: ಸರಕಾರದಿಂದ ಯಾವುದೇ ಅನುದಾನ ಇಲ್ಲದೇ ಕಾರ್ಯನಿರ್ವಹಿಸುತ್ತಿರುವ ಕಿರಿಯ, ಹಿರಿಯ, ಪ್ರೌಢ 111 ಅನುದಾನ ರಹಿತ ಖಾಸಗಿ ಶಾಲೆಗಳು ಅಧಿಕೃತವಾಗಿವೆ ಎಂದು ಕ್ಷೇತ್ರ ಶೀಕ್ಷಣಾಧಿಕಾರಿ ಹಣಮಂತರಾವ ರಾಠೋಡ ಅವರು ಮಾಹಿತಿ ನೀಡಿದ್ದಾರೆ.
ಈ ಕುರಿತು ಶುಕ್ರವಾರ ತಾಲೂಕು ಆಡಳಿತ ಸೌಧದಲ್ಲಿ ಇರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಾಧ್ಯಮದವರ ಮುಂದೆ ಪಟ್ಟಿ ಬಿಡುಗಡೆ ಮಾಡಿ 106 ಶಾಲೆಗಳು ದಾಖಲೆಗಳಲ್ಲಿ ಅಧಿಕೃತವಾಗಿದ್ದು, ಇನ್ನೂ 05 ಶಾಲೆಗಳು ಮರು ನೋಂದಣಿ ಮಾಡಿಕೊಳ್ಳದೇ ಇರುವುದರಿಂದ ಅವರಿಂದ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ. ಕನ್ನಡ ಮಾಧ್ಯಮದಲ್ಲಿ 79, ಆಂಗ್ಲ ಮಾಧ್ಯಮ 25, ಉರ್ದು ಮಾಧ್ಯಮದಲ್ಲಿ 07 ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಈ ಸಂಸ್ಥೆಗಳಿಗೆ ಖುದ್ದಾಗಿ ಭೇಟಿ ನೀಡಿ ಸರಕಾರದ ನಿಯಮದ ಪ್ರಕಾರ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಅಧಿಕೃತವಾಗಿ ಎಂದು ಹೇಳಿದರು.
ಬರುವ 2024-25 ಶೈಕ್ಷಣಿಕ ಸಾಲಿನಲ್ಲಿ ಇಲಾಖೆ ನೀಡುವ ನಿರ್ದೇಶನ ನಿಯಮದಂತೆ ಕೇಳುವ ಮಾಹಿತಿಗಳನ್ನು ಕಡ್ಡಾಯವಾಗಿ ಸಂಬಂಧ ಪಟ್ಟ ಸಿಆರ್‍ಸಿ ಅವರಿಗೆ ಸಲ್ಲಿಸತಕ್ಕದು ಇಲಾಖೆಯ ನಿಯಮ ಉಲ್ಲಂಘನೆ ಮಾಡಿದರೆ ಅಂತಹ ಸಂಸ್ಥೆ ವಿರುದ್ಧ ಮುಲ್ಲಾಜು ಇಲ್ಲದೇ ಸೂಕ್ತ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…