ಬಿಸಿ ಬಿಸಿ ಸುದ್ದಿ

ಎಲ್ಲಾ ಮತಗಟ್ಟೆಯಲ್ಲಿ ಏ.28 ರಂದು ಚುನಾವಣಾ ಧ್ವಜಾರೋಹಣ: ನಮ್ಮ‌ ನಡೆ-ಮತಗಟ್ಟೆ ಕಡೆ ಅಭಿಯಾನ

ಕಲವುರಗಿ: ಲೋಕಸಭಾ ಚುನಾವಣೆ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸಲು “ನಮ್ಮ ನಡೆ ಮತಗಟ್ಟೆಯ ಕಡೆ” ಅಭಿಯಾನದ ಅಂಗವಾಗಿ ಏ.28 ರಂದು ಕಲಬುರಗಿ ಜಿಲ್ಲೆಯ ಎಲ್ಲಾ 2,378 ಮತಗಟ್ಟೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಚುನಾವಣಾ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.

ರವಿವಾರ ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರದ ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಟ ಮೂಲಭೂತ ಸೌಲಭ್ಯಗಳು (Assured Minimum Facilities-AMF) ಇರುವ ಕುರಿತು ಖಚಿತಪಡಿಸಿಕೊಂಡು ಚುನಾವಣಾ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮ ಕೇವಲ ಧ್ವಜಾರೋಹಣಕ್ಕೆ ಸೀಮಿತಚಾಗದೆ ಮತದಾರರಿಗೆ ಮತಗಟ್ಟೆ ವಿಳಾಸ ತಿಳಿಸುವುದು ಮತ್ತು ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡುವುದಕ್ಕೆ ಪ್ರೇರೇಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಂದಿಲ್ಲಿ ಧ್ವಜಾರೋಹಣ ಮಾಡಲಾಗುವ ಧ್ವಜವು ಮತದಾನ ನಡೆಯೋ ವರೆಗೂ ಮತಟಗಟ್ಟೆಯಲ್ಲಿ ಹಾರಾಡಲಿದೆ. ಮತಗಟ್ಟೆಯ ಗುರುತಾಗಿ ಇದು ಬಿಂಬಿತವಾಗಲಿದೆ ಎಂದರು.

ಸೈಕಲ್ ರ‌್ಯಾಲಿ: ನಮ್ಮ‌ ನಡೆ‌-ಮತಗಟ್ಟೆ ಕಡೆ ಅಭಿಯಾನ ಅಂಗವಾಗಿ ಏ.28 ರಂದು ಬೆಳಿಗ್ಗೆ 7 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಸೈಕಲ್ ರ‌್ಯಾಲಿಗೆ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ನಗರ ಪೊಲೀಸ್ ಆಯುಕ್ತ ಆರ್.ಚೇತನ ಕುಮಾರ ಅವರು ಚಾಲನೆ ನೀಡಲಿದ್ದಾರೆ. ಸೈಕಲ್ ರ‌್ಯಾಲಿ ಜಗತ್ ವೃತ್ತದಿಂದ ಗಂಜ್ ಪ್ರದೇಶದ ನಗರೇಶ್ವರ ಶಾಲೆ ವರೆಗೆ ಜರುಗಲಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago