ಬಿಸಿ ಬಿಸಿ ಸುದ್ದಿ

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ 25 ಗ್ಯಾರಂಟಿ ಯೋಜನೆಗಳಿ ಜಾರಿಗೆ; ಪ್ರಿಯಾಂಕ್ ಖರ್ಗೆ

ಚಿತ್ತಾಪುರ; ಕಳೆದ ಐದು ವರ್ಷದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕುಂಠಿತಗೊಂಡಿದೆ. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸಗಳು ಆಗಿಲ್ಲ‌ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕೊಲ್ಲೂರು ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಅವರು ಮಾತನಾಡುತ್ತಿದ್ದರು.

ಕಲಬುರಗಿ ಲೋಕ ಸಭಾ ಕ್ಷೇತ್ರದ ಅಭಿವೃದ್ದಿ ಹೇಗೆ ಕುಂಠಿತಗೊಂಡಿದೆ ಎನ್ನುವುದಕ್ಕೆ ತಾಜಾ ಉದಾಹರಣೆ ಎಂದರೆ ವಾಡಿ ಬಳಿ ನಡೆಯುತ್ತಿರುವ ರೇಲ್ವೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ನಿಂತು ಹೋಗಿರುವುದು. ಖರ್ಗೆ ಸಾಹೇಬರ ಅವಧಿಯಲ್ಲಿ ಪ್ರಾರಂಭಗೊಂಡ ಈ ಯೋಜನೆ ಜಾಧವ್ ಅವಧಿ ಮುಗಿಯುತ್ತ ಬಂದರೂ ಹಾಗೆ ಉಳಿದಿದೆ. ಈ ಬಗ್ಗೆ ಜಾಧವ್ ಬಾಯಿ ಬಿಡುವುದಿಲ್ಲ‌. ಆದರೆ ನನ್ನನ್ನು ಟೀಕಿಸಲು ಬಾಯಿ ತೆಗೆಯುತ್ತಾರೆ ಎಂದರು.

ದಿನಬಳಕೆ ವಸ್ತುಗಳ ಬೆಲೆ‌ಇಳಿಸಿ ಅಚ್ಚೇ ದಿನ್ ತರುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ಮತ್ತಷ್ಟು ಬೆಲೆ ಏರಿಸಿದರು. ಎಲ್ಲಿದೆ ಅಚ್ಚೇದಿನ್? ಎಂದು ಪ್ರಶ್ನಿಸಿದ ಸಚಿವರು, ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಆರ್ಟಿಕಲ್ 371(J) ಜಾರಿಗೊಳಿಸಿದ್ದೇವೆ. ಈಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಇದು ನಾವು ಜನರಿಗೆ ನೀಡುವ ಅಚ್ಚೇದಿನ್ ಎಂದು ಹೇಳಿದರು.

ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದರೆ 25 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಆ ಮೂಲಕ ಮಹಿಳೆಯರ ಸಬಲೀಕರಣ, ಕೂಲಿ ಕಾರ್ಮಿಕರಿಗೆ ನೆರವು, ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವ ಸಂಕಲ್ಪ ಇದೆ. ನಿಮ್ಮ ಆಶೀರ್ವಾದ ರಾಧಾಕೃಷ್ಣ ಅವರ ಮೇಲೆ ಇರಲಿ ಎಂದರು‌.

ಜಿಪಂ ವಿರೋಧ ಪಕ್ಷದ ನಾಯಕರಾದ ಶಿವಾನಂದ್ ಪಾಟೀಲ ಮಾತನಾಡಿ ಬಿಜೆಪಿಯವರು ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಎಲ್ಲ ಸಮೂದಾಯಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತದೆ. ನಿಮ್ಮ ಮತಗಳ ಮೂಲಕ ರಾಧಾಕೃಷ್ಣ ಅವರಿಗೆ ನೀಡುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬಿ ಎಂದು ಮನವಿ ಮಾಡಿದರು.

ವೇದಿಕೆಯ ಮೇಲೆ ಮೆಹೆಮೂದ್ ಸಾಹೇಬ್, ಎಸ್ ಆರ್ ಕೊಲ್ಲೂರು, ಸೇರಿದಂತೆ ಹಲವರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

33 mins ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

11 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

11 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago