ಸೇಡಂಗೆ ನಾಳೆ ಪ್ರಿಯಾಂಕಾ ವಾಡ್ರಾ

0
39

ಕಲಬುರಗಿ: ಜಿಲ್ಲೆಯ ಸೇಡಂ ಪಟ್ಟಣಕ್ಕೆ ಕಾಂಗ್ರೆಸ್ ಪಕ್ಷದ ರಾಷ್ತ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಆಗಮಿಸುವರು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು.

ಸೋಮವಾರ ಮಧ್ಯಾಹ್ನ ೨_೩೦ ಗಂಟೆಗೆ ಸೇಡಂ ಪಟ್ಟಣದ ಕ್ರೀಡಾಂಗಣದಲ್ಲಿ ಪ್ರಿಯಾಂಕಾ ಗಾಂಧಿ ಅವರು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡುವರು. ಸುಮಾರು ಇಪ್ಪತೈದು ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದರು.

Contact Your\'s Advertisement; 9902492681

ಸೋಮವಾರ ಮಧ್ಯಾಹ್ನ ೧೨ ಗಂಟೆಗೆ ಗುರುಮಿಠಕಲ್ ಪಟ್ಟಣದಲ್ಲಿ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಸೇಡಂ ಬಹಿರಂಗ ಸಭೆಯಲ್ಲೂ ಪಾಲ್ಗೊಳ್ಳುವರು ಎಂದು ಅವರು ಹೇಳಿದರು.

ಕಲಬುರಗಿ ಲೋಕಸಭಾ ಚುನಾವಣೆ ಈಗ
ನಿರ್ಣಾಯಕ ಹಂತಕ್ಕೆ ಬಂದಿದೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಸೂಚನೆಗಳಿವೆ. ಗ್ಯಾರಂಟಿ ಯೋಜನೆಗಳು ಪರಿಣಾಮ ಬೀರಿವೆ. ಪಕ್ಷದ ಕಾರ್ಯಕರ್ತರು ನ್ಯಾಷನಲ್ ಗ್ಯಾರಂಟಿ ಕಾರ್ಡ್ ಹಂಚಲು ಹೋದಾಗ ಮಹಿಳೆಯರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ನಗರ ಪ್ರದೇಶದ ಸುಶಿಕ್ಷಿತರು ಹಾಗೂ ಪ್ರಜ್ಞಾವಂತ ಜನ ಡಾ. ಉಮೇಶ ಜಾಧವ ಅವರ ಕೊಡುಗೆ ಶೂನ್ಯ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ ಎಂದು ತಿಳಿಸಿದರು.

ಕಳೆದ ಬಾರಿ ಖರ್ಗೆ ಅವರ ಸೋಲಿನ ಕುರಿತು ಮತದಾರರಲ್ಲಿ ಪಶ್ಚಾತಾಪ ಇದೆ. ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ.
ಆದರೂ ಕೂಡ ಕಾರ್ಯಕರ್ತರು ಬಹಳ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಸಂಸದ ಪ್ರಜ್ವಲ ರೇವಣ್ಣ ಅವರ ಪೆನ್ ಡ್ರೈವ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಜನ ಪ್ರಬುದ್ದರಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವವರು ಒಳ್ಳೆಯ ನಡತೆಯನ್ನು ಹೊಂದಬೇಕು. ಈ ರೀತಿ ನಡುವಳಿಕೆ ಸರಿಯಲ್ಲ. ಮಹಿಳಾ ಆಯೋಗದವರು ಪತ್ರ ಬರೆದರೆ ಕ್ರಮ ಕೈಗೊಳ್ಳುತ್ತಾರೆ. ನಾವು ಅಧಿಕಾರದಲ್ಲಿ ಇರುವವರು ಕಾನೂನು ಪರಿಪಾಲನೆ ಮಾಡಬೇಕು ಎಂದು ಅವರು ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ೧೩೬ ಸ್ಥಾನಗಳು ಬಂದಿವೆ. ಇದು ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರೆಯಲುದೆ. ಎಲ್ಲ ಅಭಿಪ್ರಾಯ ಒಳ್ಳೆಯದಿದೆ ಎಂದರು.

ಬಿಜೆಪಿಯವರು ಯಾವಾಗಲೂ ಸತ್ಯ ಹೇಳಲ್ಲ. ನಾವು ೪ ಲಕ್ಷಕ್ಕೂ ಅಧಿಕ ಕೋಟಿ ರೂ. ತೆರಿಗೆ ನೀಡಿದ್ದೇವೆ. ಕೇಂದ್ರ ಸರ್ಕಾರ ಶೇ. ೧೩ರಷ್ಟು ಮಾತ್ರ ತೆರಿಗೆ ಹಣ ಕೇಂದ್ರದಿಂದ ಬರುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದರಿಂದ ಕೇಂದ್ರ ಸರ್ಕಾರ ರಾಜ್ಯದ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಆಪಾದಿಸಿದರು.

ನಾವು ಕೇಳಿದ್ದು ೧೮,೦೦೦ ಕೋಟಿ ರೂ. ಬರ ಪರಿಹಾರ ಕೇಳಿದ್ದೇವು. ಬಿಜೆಪಿಯವರು ದುರುದ್ದೇಶದಿಂದ ಕೊಡಲಿಲ್ಲ. ಈ ಕುರಿತು ಸುಪ್ರೀಂ ಕೋರ್ಟ್ ಕಪಾಳ ಮೋಕ್ಷ ಮಾಡಿದೆ. ಶೇಕಡಾ ೨೦ ರಷ್ಟು ಮಾತ್ರ ಕೊಟ್ಟಿದ್ದಾರೆ. ನಮಗೆ ಪಾಲು ಬರುವಲ್ಲಿ ಬಹಳ ಅನ್ಯಾಯವಾಗಿದೆ ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here