ಬಿಸಿ ಬಿಸಿ ಸುದ್ದಿ

ಸಂಸತ್ತಿಗೆ ಕಳಿಸಿ ಕಲಬುರಗಿಯ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

ಕಲಬುರಗಿ: ತಾವೆಲ್ಲರು ನನಗೆ ಮತ ನೀಡಿ ಸಂಸತ್ತಿಗೆ ಕಳಿಸಿಕೊಟ್ಟಲ್ಲಿ ಕಲಬುರಗಿಯ ಧ್ವನಿಯಾಗಿ ಕೆಲಸ ಮಾಡುವುದಾಗಿ ಕಲಬುರಗಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಹೇಳಿದರು.

ನಗರದ ಖುಭಾ ಪ್ಲಾಟ್ ನಲ್ಲಿರುವ ನಿಲಕಂಠರಾವ ಮೂಲಗೆ ಅವರ ನಿವಾಸದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಚುನಾವಣಾ

ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯವಷ್ಟೆ ಅಲ್ಲ ಇಡಿ. ರಾಷ್ಟ್ರದ ಗಮನ ಸೆಳೆದಿರುವ ಈ ಮತಕ್ಷೇತ್ರದಿಂದ ತಮ್ಮನ್ನು ಆಯ್ಕೆ ಮಾಡುವ ಮೂಲಕ ಈ ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶವನ್ನು ನೀಡುವಂತೆ ಮನವಿ ಮಾಡಿದರು.

ಕೇವಲ ರಾಜಕೀಯ ಭಾಷಣ ಕೇಳಿ ಮತ ಹಾಕುವ ಕಾಲ ಈಗಿಲ್ಲ. ಯಾವ ಪಕ್ಷಕ್ಕೆ ಮತ ನೀಡಿದರೆ ಕ್ಷೇತ್ರ ಹಾಗೂ ದೇಶದ ಭವಿಷ್ಯವಿದೆ ಎಂಬ ವಿಚಾರವನ್ನು ಮತದಾರರು ಪರಿಗಣಿಸುತ್ತಾರೆ, ಈ ಕ್ಷೇತ್ರದಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಮಾಡಿರುವ ಅಭಿವೃದ್ದಿ ಕೆಲಸಗನ್ನು ನೋಡಿ ಹಾಗೂ ಅವರ ಕನಸಿನ ಯೋಜನೆಗಳನ್ನು ಜಾರಿಗೆ ತರಲು ತಾವೇಲ್ಲರೂ ಬೆಂಬಲಿಸುವಂತೆ ಅವರು ಕರೆ ನೀಡಿದರು.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ನೀಲಕಂಠರಾವ ಮೂಲಗೆ ಅವರು, ಮಾತನಾಡಿ, ಈ ಕ್ಷೇತ್ರದ ಅಪ್ಪಟ ಚಿನ್ನಗಳಾದ ಡಾ.ಮಲ್ಲಿಕಾರ್ಜುನ ಖರ್ಗೆ ಮತ್ತು ರಾಧಾಕೃಷ್ಣ ಅವರನ್ನು ಬೆಂಬಲಿಸಲು ಪಕ್ಷದ ಕಾರ್ಯಕರ್ತರು, ಮನೆಮನೆಗೆ ತೆರಳಿ ಕಾಂಗ್ರೆಸ ಪಕ್ಷದ ಅಭ್ಯರ್ಥಿಗೆ ಮತವನ್ನು ಹಾಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದ ಅವರು, ಬಿಜೆಪಿಯ ಆಡಳಿತದಲ್ಲಿ ಆಗಿರುವ ಬೆಲೆ ಏರಿಕೆ ವಿಷಯವನ್ನು ಮತದಾರರ ಗಮನಕ್ಕೆ ತರಬೇಕು ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸಿಗುವ ಲಾಭಗಳ ಬಗ್ಗೆ ಮಾಹಿತಿಯನ್ನು ಅವರಿಗೆ ನೀಡಬೇಕು ಎಂದರು. ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಅಲ್ಲಮಪ್ರಭು ಪಾಟೀಲ, ಕೆ.ಕೆ.ಆರ್.ಡಿ.ಬಿ.ಅಧ್ಯಕ್ಷ ಡಾ.ಅಜಯಸಿಂಗ್,  ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮಹಾನಗರ ಪಾಲಿಕೆ ಸದಸ್ಯೆ ತೃಪ್ತಿ ಲಾಖೆ, ಪ್ರಮುಖರಾದ ರಾಘವೇಂದ್ರ ಮೈಲಾಪೂರೆ, ಬಸವರಾಜ ಭೀಮಳ್ಳಿ, ಮಲ್ಲಿನಾಥ ಪಾಟೀಲ ಸೋಂತ, ನಾರಾಯಣರಾವ ಕಾಳೆ. ರಾಜು ಭೀಮಳ್ಳಿ, ಡಾ.ವಿಕ್ರಮ ಸಿದ್ದಾರೆಡ್ಡಿ, ಡಾ.ಶರಣಬಸಪ್ಪ ಹರವಾಳ, ಡಾ.ಎಸ್.ಬಿ. ಕಾಮರೇಡ್ಡಿ, ಡಾ.ಕೀರಣ ದೇಶಮುಖ, ಪ್ರವೀಣ ಪಾಟೀಲ ಹರವಾಳ  ಸೇರಿದಂತೆ ಪಕ್ಷದ ಪ್ರಮುಖರು, ವಿವಿಧ ಕ್ಷೇತ್ರಗಳ ಗಣ್ಯರು, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

4 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

15 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago