ಮೇ 7 ರಂದು ತಪ್ಪದೇ ಎಲ್ಲರೂ ಮತಚಲಾಯಿಸಬೇಕು; ಬಿ.ಫೌಜಿಯಾ ತರನ್ನುಮ್

0
5

ಮತದಾನ ಜಾಗೃತಿಗಾಗಿ ಸೈಕಲ್ ರ್ಯಾಲಿ, ಸ್ವೀಪ್ ಧ್ವಜಾರೋಹಣ

ಕಲಬುರಗಿ: ಗುಲಬರ್ಗಾ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯುತ್ತಿದ್ದು, ತಪ್ಪದೇ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಕರೆ ನೀಡಿದರು.

ಭಾನುವಾರದಂದು ಗಂಜ್‍ನಲ್ಲಿರುವ ನಗರೇಶ್ವರ ಶಾಲೆಯ ಮೈದಾನದಲ್ಲಿ ಭಾರತ ಚುನಾವಣೆ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಮತ್ತು ಕಲಬುರಗಿ ಸೈಕ್ಲಿಂಗ್ ಕ್ಲಬ್ ಇವರುಗಳು ಸಂಯುಕ್ತಾಶ್ರಯದಲ್ಲಿ ಲೋಕಸಭಾ ಚುನಾವಣೆ-2024 ರ ಸೈಕಲ್ ಜಾಥಾ ” ನಮ್ಮ ನಡೆ ಮತಗಟ್ಟೆಯ ಕಡೆ” ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Contact Your\'s Advertisement; 9902492681

ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು ಮತ್ತು ಮೂಲಭೂತ ಕರ್ತವ್ಯವಾಗಿದೆ. ಆದ್ದರಿಂದ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಈ ಬಾರಿ ಮತದಾನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸ್ವೀಪ್ ಸಮಿತಿಯು ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಗರ ಪ್ರದೇಶ, ಗ್ರಾಮೀಣ ಪ್ರದೇಶ, ಗುಡ್ಡ-ಗಾಡು ಪ್ರದೇಶ, ಮನರೇಗಾ ಕಾಮಗಾರಿ ನಡೆಯುವ ಸ್ಥಳಗಳು ಮುಂತಾದೆಡೆ ಮತದಾರರ ಸೆಳೆಯಲು ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ದೇವಿದಾಸ ಪಾಟೀಲ ಅವರು ಮಾತನಾಡಿ, ಮೇ 7 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಅಂದು ರಜೆ ಇರುವುದರಿಂದ ತಪ್ಪದೇ ಮತದಾನ ಮಾಡಬೇಕೆಂದು ಮನವಿ ಮಾಡಿದರು.

ಚುನಾವಣಾಧಿಕಾರಿಗಳು ಮತದಾರರ ಸ್ಲೀಪ್ ಹಿಂಭಾಗದಲ್ಲಿ ಮತಗಟ್ಟೆಯ ವಿಳಾಸ ಇರುವ ಕ್ಯೂಆರ್ ಕೋಡ್‍ಗಳನ್ನು ಮುದ್ರಿಸುವ ವ್ಯವಸ್ಥೆ ಮಾಡಿದ್ದಾರೆ. ಕ್ಯೂಆರ್ ಕೋಡರ್ ಸ್ಕ್ಯಾನ್ ಮಾಡಿದ ಕೂಡಲೇ ಮತಗಟ್ಟೆಯ ವಿಳಾಸ ಕಾಣಿಸಿಕೊಳ್ಳುತ್ತದೆ. ಆಯಾ ಮತಗಟ್ಟೆಗೆ ಹೋಗಿ ಮತಚಲಾಯಿಸಬಹುದು ಎಂದರು.

ಪ್ರೊಬೇಷನರಿ ಐ.ಎ.ಎಸ್. ಗಜಾನನ ಬಾಳೆ ಅವರು ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನೋಡಿದರೆ ಬಹಳ ಕಡಿಮೆ ಮತದಾನ ಮಾಡಿದ್ದಾರೆ. ಮೇ 7 ರಂದು ನಡೆಯುವ ಮತದಾನದಲ್ಲಿ ನೂರಕ್ಕೆ ನೂರರಷ್ಟು ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಭಂವರ್ ಸಿಂಗ್ ಮೀನಾ ಅವರು, ಭಾರತದ ಚುನಾವಣೆ ಆಯೋಗದ ಸ್ವೀಪ್ ಧ್ವಜಾರೋಹಣವನ್ನು ನೇರವೇರಿಸಿ ಮತದಾನ ಕುರಿತ ಪ್ರತಿಜ್ಞೆ ವಿಧಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಚುನಾವಣೆ ಜಾಗೃತಿ ಮೂಡಿಸುವ “ನಾ ಭಾರತ” ಎಂಬ ದೃಶ್ಯ ಗೀತೆಯನ್ನು ವಿಡಿಯೋ ಮೂಲಕ ಪ್ರದರ್ಶಿಸಲಾಯಿತು.
ಮಹಾನಗರ ಪಾಲಿಕೆ ಉಪ ಆಯುಕ್ತ ಮಾಧವ ಗಿತ್ತೆ, ಸೈಕ್ಲಿಂಗ್ ಜಾಥದ ಅಧ್ಯಕ್ಷ ಶರಣಕುಮಾರ ಶೆಟ್ಟಗರ ಅವರು ಕೂಡ ಮಾತನಾಡಿದರು.

ನಗರ ಆಯುಕ್ತರಾದ ಚೇತನ ಆರ್. ಕಲಬುರಗಿ ಪೊಲೀಸ್ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ, ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡೆಕ್ಕಾ ಕಿಶೋರ್ ಬಾಬು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ನೋಡಲ್ ಅಧಿಕಾರಿ ಅಬ್ದುಲ್ ಅಜೀಮ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಕ್ರೇಪ್ಪ ಗೌಡ ಬಿರಾದರ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಸೈಯಲ್ ಪಟೇಲ್ ಸೇರಿದಂತೆ ನಗರೇಶ್ವರ ಕ್ರೀಡಾಪಟ್ಟುಗಳು ಶಾಲಾಶಿಕ್ಷಕರು ಬೇರೆ ಸ್ಕೂಲ್‍ಗಳಿಂದ ಮಕ್ಕಳು ಪೊಲೀಸ್ ಇಲಾಖೆ ಮುಂತಾದವರು ಭಾಗವಹಿಸಿದ್ದರು.

ಸೈಕ್ಲಿಂಗ್ ಜಾಥಾ: ಇದಕ್ಕೂ ಮೊದಲು, ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ ಹಾಗು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸಲು “ನಮ್ಮ ನಡೆ ಮತಗಟ್ಟೆ ಕಡೆ” ಅಭಿಯಾನ ಅಂಗವಾಗಿ ಭಾನುವಾರ ಬೆಳಿಗ್ಗೆ ಕಲಬುರಗಿ ನಗರದ ಜಗತ್ ವೃತ್ತದಿಂದ ಹಮ್ಮಿಕೊಂಡಿದ್ದ ಸೈಕಲ್ ರ್ಯಾಲಿಗೆ ನೆಹರೂ ಗಂಜ್‍ನಲ್ಲಿರುವ ನಗರೇಶ್ವರ ಸ್ಕೂಲ್ ಜಾಥಾ ಮುಕ್ತಾಯಗೊಂಡಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here