ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ: ಕೇಂದ್ರದಿಂದ ರೈತರಿಗೆ ಅನ್ಯಾಯ

0
7

ಕಲಬುರಗಿ: ಕೇಂದ್ರದ ಎನ್ ಡಿ ಆರ್ ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಕೇವಲ ರೂ.3498 ಕೋಟಿ ಮಾತ್ರ ಬಿಡುಗಡೆ ಮಾಡುವ ಮೂಲಕ ಮತ್ತೊಮ್ಮೆ ರಾಜ್ಯದ ರೈತರಿಗೆ ಅನ್ಯಾಯ ಎಸಗಿದೆ ಎಂದು ಯುವ ಕಾಂಗ್ರೇಸ್ ರಾಷ್ಟ್ರೀಯ ಮಾಧ್ಯಮ ಸಂಯೋಜಕ ಚೇತನಗೌಡ ಗೋನಾಯಕ ಆರೋಪಿಸಿದರು.

ಬರದ ಕಾರಣಕ್ಕೆ ರೈತರಿಗೆ ಕೆಲಸ ಸಿಗದೇ ಪರದಾಡುತ್ತಿದ್ದಾರೆ. ನರೇಗಾ ಕೆಲಸದ ಅವಧಿ ಹೆಚ್ಚಳ ಮಾಡಲಿಲ್ಲ.ಒಕ್ಕೂಟ ವ್ಯವಸ್ಥೆಯಲ್ಲಿ ನಾವಿದ್ದೇವೆ, ಈ ವ್ಯವಸ್ಥೆಯಲ್ಲಿ ಬರ ಬಂದಾಗ ಪರಿಹಾರ ನೀಡುವುದು ಕೇಂದ್ರದ ಕರ್ತವ್ಯ, ನಾವು ಭಿಕ್ಷೆ ಬೇಡುತ್ತಿಲ್ಲ, 223 ತಾಲೂಕುಗಳಲ್ಲಿ ಬರಗಳ ಇದೆ, 100ವರ್ಷಗಳಲ್ಲಿ ಇದು ಭೀಕರ ಬರಗಾಲವಾಗಿದೆ. ಅದಕ್ಕೆ ನಾವು ಅನಿವಾರ್ಯವಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದೇವೆ. 35,000ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ನಷ್ಟವಾಗಿದೆ. ಎನ್‍ಡಿಆರ್‍ಎಫ್ ಪ್ರಕಾರ, 18,172 ಕೋಟಿ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಲಾಗಿತ್ತು. ಈಗ 19%ಕ್ಕಿಂತ ಕಡಿಮೆ ಪರಿಹಾರ ನೀಡಿದ್ದಾರೆ, ಇದು ಬಹಳ ಕಡಿಮೆಯಾಗಿದೆ.

Contact Your\'s Advertisement; 9902492681

ಕರ್ನಾಟಕದ ರೈತರ 18,172 ಕೋಟಿ ರು. ಬರ ಪರಿಹಾರ ನಿರಾಕರಿಸಿ, ಸೇಡಿನ ರಾಜಕಾರಣಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕ ಮತ್ತು ಕನ್ನಡ ವಿರೋಧಿ ಎಂಬುದಂತೂ ಇದರಿಂದಲೇ ಸ್ಪಷ್ಟವಾಗಿದೆ.

ಕರ್ನಾಟಕಕ್ಕೆ ನ್ಯಾಯವಾಗಿ ಬರಬೇಕಾದ ಬರ ಪರಿಹಾರದ ಹಣ ಸಂಪೂರ್ಣವಾಗಿ ಬಿಡುಗಡೆ ಮಾಡುವವರೆಗೂ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕ್ಕೆ ಬರಬಾರದು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನರ ಬೆಂಬಲ ಕೇಳುವ ಯಾವುದೇ ನೈತಿಕ ಹಕ್ಕು ಹೊಂದಿಲ್ಲ ಎಂದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here