ಹಣಮಂತ ಎಂ.ಜಾಧವ್ ನೇಮಕ

0
10

ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಸಂಚಾಲಕರನ್ನಾಗಿ (ಕಾರ್ಯದರ್ಶಿ) ಹಣಮಂತ ಎಂ.ಜಾಧವ್ ಅವರನ್ನು ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಮಹಾಂತಪ್ಪ ಕೆ. ಸಂಗಾವಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್. ಧರ್ಮಸೇನ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ರಾಜಗೋಪಾಲ ರೆಡ್ಡಿ, ಶಿವಾನಂದ ಪಾಟೀಲ ಅವರ ಶಿಫಾರಸ್ಸಿನ ಮೇರೆಗೆ ಹಣಮಂತ ಎಂ.ಜಾಧವ್ ಅವರನ್ನು ನೇಮಕ ಮಾಡಲಾಗಿದ್ದು, ಅವರು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಹಯೋಗದೊಂದಿಗೆ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಅವರು ಸೂಚಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here