ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ, ಎಚ್.ಡಿ. ರೇವಣ್ಣ ಬಂಧನಕ್ಕೆ ಎಸ್ಎಫ್ಐ ಆಗ್ರಹ

0
24

ರಾಯಚೂರು: ಕಳದೆ ಕೆಲವು ದಿನಗಳಿಂದ ಹಾಸನದಲ್ಲಿ ಪೆನ್ ಡ್ರೈವ್ ಮುಖಾಂತರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಹಂಚಲಾಗುತ್ತಿದೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸ್ ಅಪ್ ಗಳಲ್ಲಿ ಹರಿದಾಡುತ್ತಿವೆ. ಪ್ರತೀದಿನ ಹೊಸಹೊಸ ಚಿತ್ರಗಳು ಮತ್ತು ದೃಷ್ಟಗಳನ್ನು ಬಿಡುಗಡೆ ಮಾಡಲಾಗುತ್ತಿದೆ.

ಈ ಚಿತ್ರಗಳು ಮತ್ತು ದೃಶ್ಯಗಳಲ್ಲಿರುವ ಮಹಿಳೆಯರ ಖಾಸಗಿ ಮತ್ತು ಕೌಟುಂಬಿಕ ಬದುಕು ಛಿದ್ರವಾಗಿದೆ. ಕೆಲವರು ಆತ್ಮಹತ್ಯೆಗೂ ಪ್ರಯತ್ನಿಸಿರುವ ವರದಿಗಳಿವೆ. ಯಾವ ಕ್ಷಣದಲ್ಲಿ ಯಾವಾಗ ಮತ್ತೊಂದು ಪೆನ್ ಡ್ರೈವ್ ಹೊರ ಬರುತ್ತದೆಯೋ, ಅದರಲ್ಲಿ ಯಾವ ಮಹಿಳೆಯ ಖಾಸಗಿ ಚಿತ್ರಗಳು ಮತ್ತು ದೃಶ್ಯಗಳು ಬಿತ್ತರಗೊಳ್ಳಲಿವೆಯೋ ಎಂಬ ಆತಂಕ ಮತ್ತು ಕುತೂಹಲ ಎಲ್ಲೆಡೆ ಹರಡಿದೆ.

Contact Your\'s Advertisement; 9902492681

ಈ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರದಲ್ಲಿ ಪ್ರಕರಣ ದಾಖಕಾಗಿದ್ದು, ಅದರಲ್ಲಿ ಮೊದರಲ್ಲಿ ಆರೋಪಿಯಾಗಿರುವ ಎಚ್.ಡಿ.ರೇವಣ್ಣ ಇವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಯಚೂರು ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಆಗ್ರಹಿಸಿದ್ದಾರೆ.

ಇಡೀ ಪ್ರಕರಣದ ತನಿಖೆಯಲ್ಲಿ ಹಾಗೂ ಆರೋಪಿಗಳನ್ನು ಬಂಧಿಸುವ ಯಾವುದೇ ರಾಜಕೀಯ ಪ್ರಭಾವ ಹಾಗೂ ಒತ್ತಡಕ್ಕೆ ಒಳಗಾಗದಂತೆ ಎಸ್ಐಟಿ ಕೆಲಸ ಮಾಡುವುದನ್ನು ರಾಜ್ಯ ಸರ್ಕಾರ ಖಾತ್ರಿಪಡಿಸಬೇಕು.

ಸಾರ್ವಜನಿಕವಾಗಿ ಇಷ್ಟೆಲ್ಲಾ ಅನಾಹುತ ನಡೆದು ಆತಂಕ ಹರಡಿರುವಾಗ ಈ ಕುರಿತು ತಡವಾಗಿಯಾದರೂ ಎಚ್ಚೆತ್ತುಕೊಂಡು ಇಡೀ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಎಸ್ಎಫ್ಐ ಸ್ವಾಗತಿಸುತ್ತದೆ. ಮತ್ತು ಯಾವುದೇ ಒತ್ತಡಗಳಿಗೆ ಮಣಿಯದೆ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆ ಮತ್ತು ನ್ಯಾಯವನ್ನು ಒದಗಿಸಿಕೊಡಬೇಕೆಂದು ಎಸ್ಎಫ್ಐ ಒತ್ತಾಯಿಸುತ್ತದೆ.

ಈ ಕೂಡಲೇ ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ವಿಚಾರಣೆಗೆ ಒಳಪಡಿಸಿ ಸಾಧ್ಯವಾದಷ್ಟೂ ಬೇಗ ನೂರಾರು ಮಹಿಳೆಯರ ಮೇಲೆ ಲೈಂಗಿಕ ಅಕ್ರಮ, ಅತ್ಯಾಚಾರ ನಡೆಸಿ ಅವುಗಳನ್ನು ಚಿತ್ರೀಕರಿಸಿಕೊಂಡಿರುವ ಪ್ರಜ್ವಲ್ ರೇವಣ್ಣನನ್ನೂ ಹಾಗೂ ಅವುಗಳನ್ನು ಸಾರ್ವಜನಿಕರಿಗೆ ಪೆನ್ಡೈವ್ ಮುಖಾಂತರ ಹಂಚುತ್ತಿರುವ ವ್ಯಕ್ತಿಗಳನ್ನೂ ಬಂಧಿಸಬೇಕೆಂದು ಮತ್ತು ಸಂತ್ರಸ್ತ ಮಹಿಳೆಯರು ಮತ್ತವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಎಸ್ಎಫ್ಐ ಒತ್ತಾಯಿಸುತ್ತದೆ.

ತಡವಾಗಿಯಾದರೂ ಕರ್ನಾಟಕ ಸರ್ಕಾರ ಹಾಸನದ ‘ಪೆನ್ಡೈವ್’ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ‘ವಿಶೇಷ ತನಿಕಾ ದಳ (SIT) ರಚಿಸಿರುವುದನ್ನು ನಾವು ಸ್ವಾಗತಿಸಿತ್ತೇವೆ. ಜೊತೆಗೆ ಪ್ರಕರಣದ ತನಿಖೆಗೆ ಹಾಗೂ ಆರೋಪಿಗಳ ಬಂಧನಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಅಧಿಕಾರ ಮತ್ತು ಸೂಕ್ತ ವ್ಯವಸ್ಥೆಯನ್ನು ಎಸ್ ಐಟಿಗೆ ಒದಗಿಸಬೇಕು. ಇಡೀ ಪ್ರಕರಣದ ತನಿಖೆಗೆ ಜನಸ್ನೇಹಿ ಹಾಗೂ ಮಹಿಳಾಪರ ಸಂವೇದನೆ ಹೊಂದಿರುವ ಪೋಲೀಸು ಅಧಿಕಾರಿಗಳನ್ನು ಬಳಸಿಕೊಳ್ಳಬೇಕು.

ಪೆನ್ಡೈವ್ ಲೈಂಗಿಕ ದೌರ್ಜನ್ಯದಲ್ಲಿ ಸಂತ್ರಸ್ತರಾಗಿರುವ ಮಹಿಳೆಯ ಗೌಪ್ಯತೆಯನ್ನು ಕಾಪಾಡಬೇಕು. ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಸಂತ್ರಸ್ತ ಮಹಿಳೆಯರಿಗಾಗಿ ಪ್ರತ್ಯೇಕ ಕೌನ್ಸೆಲಿಂಗ್ ಕೇಂದ್ರಗಳನ್ನು ತೆರೆಯಬೇಕು. ಹಾಗೂ ಸಂತ್ರಸ್ಥ ಮಹಿಳೆಯರಿಗೆ ದೂರು ದಾಖಲಿಸಲು ಸಾಧ್ಯವಾಗುವಂತೆ ಹಾಸನದಲ್ಲಿ ಹಾಗೂ ಬೆಂಗಳೂರಿನಲ್ಲಿ ಪ್ರತ್ಯೇಕವಾದು ದೂರು ಕೇಂದ್ರಗಳನ್ನು ಸ್ಥಾಪಿಸಬೇಕು. ಜೊತೆಗೆ ದೂರು ದಾಖಲಿಸಲು ಬರುವ ಸಂತ್ರಸ್ಥ ಮಹಿಳೆಯರಿಗೆ ಸೂಕ್ತ ಭದ್ರತೆ ಮತ್ತು ಪ್ರಯಾಣ ವ್ಯವಸ್ಥೆ ಒದಗಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾಧ್ಯಕ್ಷರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here