ಬಿಸಿ ಬಿಸಿ ಸುದ್ದಿ

ವಿಶ್ವೇಶ್ವರಯ್ಯನವರ ಮೌಲ್ಯಗಳನ್ನು ಪರಿಪಾಲಿಸಲು ಸಲಹೆ

ಕಲಬುರಗಿ: ವಿದ್ಯಾರ್ಥಿಗಳು ಸರ್. ಎಂ. ವಿಶ್ವೇಶ್ವರಯ್ಯನವರ ಮೌಲ್ಯಗಳನ್ನು ಅಳವಡಿಸಿಕೊಂಡು  ಉತ್ತಮ ಇಂಜಿನಿಯರುಗಳಾಗಬೇಕು ಈ ನಿಟ್ಟಿನಲ್ಲಿ ನಮ್ಮ ತಾಂತ್ರಿಕ ಮಹಾವಿದ್ಯಾಲಯವು ಸತತ ಪ್ರಯತ್ನ ನಡೆಸುತ್ತಿದೆ.  ಪಿ.ಡಿ.ಎ. ಕಾಲೇಜು ಸಾಕಷ್ಟು ಅಭಿವೃದ್ಧಿಹೊಂದಿದೆ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯನವರ ಆದರ್ಶಗಳನ್ನು ಪಾಲಿಸಿಕೊಂಡು ಮುಂದುವರೆಯಬೇಕೆಂದು ಮಹಾವಿದ್ಯಾಲಯದ ಮಾಜಿ ಪ್ರಾಚಾರ್ಯರಾದ ಪ್ರೊ. ಎಸ್.ವಿ.ಮಲ್ಲಾಪೂರ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಅವರು ಇಂದು ಇಲ್ಲಿನ ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ಥಾಪಿಸಲಾದ ಸರ್.ಎಂ.ವಿಶ್ವೇಶ್ವರಯ್ಯನವರ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡುತ್ತಿದ್ದರು.

ಹೈದ್ರಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಸಿ ಬಿಲಗುಂದಿ ಅವರ ಬಹಳ ದಿನಗಳ ಆಸೆ ಇಂದು ನೇರವೇರಿತು ಅವರ ನೇತೃತ್ವದಲ್ಲಿ ಮಹಾವಿದ್ಯಾಲಯದ ಐದು ವಿಭಾಗಗಳು ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಮಾನ್ಯತೆಯನ್ನು ಪಡೆದುಕೊಂಡಿದೆ ಮುಂಬರುವ ದಿನಗಳಲ್ಲಿಯೂ ಕೂಡ ಉಳಿದ ಐದು ವಿಭಾಗಗಳು ಮಾನ್ಯತೆ ಪಡೆಯುತ್ತವೆ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಹೈದ್ರಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಸಿ ಬಿಲಗುಂದಿಯವರು ಮಾತನಾಡಿ ತಾವು ಕೈಗೊಂಡ ಅಭಿವೃದ್ಧಿಯ ಕಾರ್ಯಕ್ರಮಗಳನ್ನು ವಿವರಿಸಿದರು. ಪ್ರಧಾನ ಉಪನ್ಯಾಸಕರಾಗಿ ಸಿರಾಮಿಕ ಮತ್ತು ಸಿಮೆಂಟ್ ವಿಭಾಗದ ಡಾ. ಶ್ರೀಧರ ಪಾಂಡೆಯುವರ ಮಾತನಾಡಿ ವಿದ್ಯಾರ್ಥಿಗಳು ಸರ್. ಎಂ. ವಿಶ್ವೇಶ್ವರಯ್ಯನವರ ಮ್ಯಾಲ್ಯಗಳಾದ ಶಿಸ್ತು, ದೂರದೃಷ್ಠಿ, ಕಾಯಕನಿಷ್ಠೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಹೇಳಿದರು.

ಕಾಲೇಜಿನ ಪ್ರಾಚಾರ್ಯರಾದ ಡಾ.ಎಸ್. ಎಸ್. ಹೆಬ್ಬಾಳ ಅವರು ಪ್ರಾಸ್ತವಿಕ ಭಾಷಣ ಮಾಡಿ ಸರ್ವರಿಗೂ ಸ್ವಾಗತಿಸಿದರು. ಡಾ. ಸಿದ್ಧರಾಮ ಆರ್. ಪಾಟೀಲ ಅವರು ವಂದಿಸಿದರು. ಪ್ರೊ. ವ್ಯಾಸರಾಜ ಸಂತೆಕೆಲ್ಲೂರ ಕಾರ್ಯಕ್ರಮವನ್ನು ನಿರೂಪಿಸಿದರು. ಸಮಾರಂಭದಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ನಾಗೇಂದ್ರ ಮಂಠಾಳೆ, ಜಂಟಿ ಕಾರ್ಯದರ್ಶಿಗಳಾದ ಗಂಗಾಧರ ಡಿ. ಎಲಿ, ಆಡಳಿತ ಮಂಡಳಿಯ ಸದಸ್ಯರುಗಳಾದ ಡಾ. ಸಂಪತಕುಮಾರ ಡಿ. ಲೋಯಾ, ವಿಜಯಕುಮಾರ ಜೆ. ದೇಶಮುಖ, ನಿತಿನ ಬಿ. ಜವಳಿ, ಉದಯಕುಮಾರ ಚಿಂಚೋಳಿ, ಸತೀಶ್ಚಂದ್ರ ಸಿ. ಹಡಗಲಿಮಠ ಹಾಗೂ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಇನಸ್ಟಿಟ್ಯೂಟ ಆಫ್ ಇಂಜಿನಿಯರ‍್ಸನ ಚೇರಮನ್‌ರಾದ ಇಂಜಿನಿಯರ ಬಿ.ಎಸ್. ಮೋರೆ ಕಾರ್ಯದರ್ಶಿಗಳಾದ ಡಾ. ಬಾಬುರಾವ ಸೇರಿಕಾರ  ಉಪಸ್ಥತಿರಿದ್ದರು. ಮಹಾವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago