ಬಿಸಿ ಬಿಸಿ ಸುದ್ದಿ

ಮಕ್ಕಳನ್ನು ಹಡೆಯುವುದಕ್ಕಿಂತ ಸಂಸ್ಕಾರ ಕೊಡುವುದು ಮುಖ್ಯ

ಚಿತ್ತಾಪುರ: ಸಮಾಜದಲ್ಲಿ ಅತ್ಯಂತ ಸುಶಿಕ್ಷಿತ ಎನಿಸಿಕೊಂಡವರೇ ತಮ್ಮ ಹೆತ್ತವರನ್ನು ಸಾಕಲಾಗದೆ ಅನಾಥಾಶ್ರಮಕ್ಕೆ ಮತ್ತು ನಿರ್ಗತಿಕರಾನ್ನಾಗಿ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಕೂಡು ಕುಟುಂಬದಲ್ಲಿ ಇವತ್ತಿಗೂ ಸಂಬಂಧಗಳು ಗಟ್ಟಿಯಾಗಿವೆ ಎಂದು ಮುಗುಳುನಾಗಾವಿಯ ಅಭಿನವ ಸಿದ್ದಲಿಂಗ ಶಿವಾಚಾರ್ಯರು ಹೇಳಿದರು.

ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಗುಡ್ಡಪುರ ದಾನಮ್ಮದೇವಿಯ ಪುರಾಣದಲ್ಲಿ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಲಕರಾದವರು ನಾವು ಮಕ್ಕಳನ್ನು ಹಡೆದರೆ ಮಾತ್ರ ಸಾಲದು ಅವರಿಗೆ ವಯಸ್ಸಿಗೆ ತಕ್ಕಂತೆ ಸಂಸ್ಕಾರವನ್ನು ಕಲಿಸಿ ಕೊಡಬೇಕು ಎಂದರು.

ಇದೇ ವೆಳೆ ರಾವೂರ ಹಾಗೂ ಸುತ್ತಲಿನ ಗ್ರಾಮಗಳಿಂದ ಆಗಮಿಸಿದ ಎರಡು ಸಾವಿರ ಮುತೈದೆಯರಿಗೆ ಉಡಿ ತುಂಬಿ ಹಾರೈಸಲಾಯಿತು. ಶಹಾಬಾದ ಉದ್ಯಮಿ ನರೇಂದ್ರ ವರ್ಮಾ ಅವರನ್ನು ಮಹಾದಾಸೋಹಿ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ರಾವೂರನ ಶ್ರೀ ಸಿದ್ದಲಿಗೇoಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ದಿಗ್ಗಾoವನ ಪೂಜ್ಯ ಸಿದ್ದವೀರ ಶಿವಾಚಾರ್ಯರು, ಡಾ. ಗುಂಡಣ್ಣ ಬಾಳಿ, ಚೆನ್ನಣ್ಣ ಬಾಳಿ, ಶರಣಗೌಡ ಗೋಳಾ,ಚನ್ನಪ್ಪ ಆಳ್ಳೊಳ್ಳಿ, ಅಣ್ಣಾರಾವ ಬಾಳಿ, ಈಶ್ವರ ಬಾಳಿ, ಚಂದ್ರು ಪೊಲೀಸ್ ಪಾಟೀಲ್, ಶರಣು ಜ್ಯೋತಿ, ಸಿದ್ದಲಿಂಗ ಬಾಳಿ, ಭೀಮಾಶಂಕರ್ ಇಂದೂರ್ ಸೇರಿದಂತೆ ನೂರಾರು ಜನರು ಇದ್ದರು.

ಎಂ.ಡಿ ಮಶಾಖ ಚಿತ್ತಾಪುರ

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago