ಕಲಬುರಗಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾನ ಹೆಚ್ಚಳದ ನಿಟ್ಟಿನಲ್ಲಿ ಮತದಾರರ ಮನವೋಲಿಸಲು ಇನ್ನಷ್ಟು ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನೂತನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಸ್ವೀಪ್ ಚಟುವಟಿಕೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.
ಮತದಾರರ ಮಾರ್ಗದರ್ಶಿ ಪುಸ್ತಕದ ಬಗ್ಗೆ ವಿವರವಾಗಿ ಮಾಹಿತಿ ನೀಡಿದ ಅವರು, ಮತದಾರರ ಮನೆಗಳಿಗೆ ಭೇಟಿ ನೀಡಿ 1950 ಸಹಾಯವಾಣಿ ಬಗ್ಗೆ ಮಾಹಿತಿ ನೀಡಬೇಕು.
ಮತದಾನ ಚೀಟಿಯನ್ನು ಮನೆ-ಮನೆಗೆ ತಲುಪಿಸುವುದಲ್ಲದೆ, ಮದುವೆ ಕಾರ್ಯಕ್ರಮಗಳಿಗೆ ಆಹ್ವಾನಿಸುವ ರೀತಿ ಮತದಾರರನ್ನು ಮತದಾನಕ್ಕೆ ಕರೆಯಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ “ನಾ ಭಾರತ್” ಚುನಾವಣಾ ದೃಶ್ಯ ಸಾಂಗ್ ಪ್ರದರ್ಶನದ ಬಳಿಕ, ಪಿ.ಎಸ್.ವಸ್ತ್ರದ್ ಅವರು ಅಧಿಕಾರಿಗಳಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಭಂವರ್ ಸಿಂಗ್ ಮೀನಾ ಅವರು, ಜಿಲ್ಲೆಯಲ್ಲಿ ಮತದಾನ ಹೆಚ್ಚಳಕ್ಕೆ ಕೈಗೊಂಡಿರುವ ವಿಭಿನ್ನ ರೀತಿಯ ಸ್ವೀಪ್ ಕಾರ್ಯಕ್ರಮಗಳ ಬಗ್ಗೆ ವಿಸ್ತ್ರತವಾಗಿ ವಿವರ ನೀಡಿದರು.
ಈ ಸಂದರ್ಭದಲ್ಲಿ ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿದ್ದ ಸೆಲ್ಫಿ ಸ್ಟ್ಯಾಂಡ್, ಸೈನೇಜ್ ಬೋರ್ಡ್ ಹಾಗೂ ಸ್ವೀಪ್ ವಾಹಿನಿಗಳನ್ನು ವೀಕ್ಷಣೆ ಮಾಡಲಾಯಿತು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ನೋಡಲ್ ಅಧಿಕಾರಿಗಳಾದ ಅಬ್ದುಲ್ ಅಜೀಮ್ ಅವರು ಸ್ವಾಗತಿಸಿ, ಪಿಪಿಟಿ ಮೂಲಕ ಸ್ವೀಪ್ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಯೋಜನಾ ಉಪನಿರ್ದೇಶಕರಾದ ಮಧುಮತಿ ಅವರು ವಂದಿಸಿದರು.
ವೇದಿಕೆಯಲ್ಲಿ ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯೂ ಆದ ಕಲಬುರಗಿ ಮಹಾನಗರಪಾಲಿಕೆ ಉಪ ಆಯುಕ್ತ (ಆಡಳಿತ) ಮಾಧವರಾವ ಗಿತ್ತೆ ಇದ್ದರು.
ಈ ಸಂದರ್ಭದಲ್ಲಿ ಎಲ್ಲಾ ವಿಧಾನಸಭಾ ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಸ್ವೀಪ್ ಸಮಿತಿ ಸದಸ್ಯರು, ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪರಸಭೆ ಮುಖ್ಯಾಧಿಕಾರಿಗಳು, ಕಡಿಮೆ ಮತದಾನದ ನೋಡಲ್ ಅಧಿಕಾರಿಗಳು. ಬಿಎಲ್‍ಓಗಳು ಮುಂತಾದವರು ಹಾಜರಿದ್ದರು.
ವಾಡಿಗೆ ಭೇಟಿ: ಇದಕ್ಕೂ ಮುನ್ನ ಕಡಿಮೆ ಮತದಾನವಾಗಿರುವ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವಾಡಿಯ ಕೆಲ ಪ್ರದೇಶಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ಭೇಟಿ ನೀಡಿ ಮಾಹಿತಿ ಪಡೆದರು. ಮತದಾನ ಹೆಚ್ಚಳ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…