ಬಿಸಿ ಬಿಸಿ ಸುದ್ದಿ

12 ಗಂಟೆ ಕೆಲಸ ಜಾರಿ: ಬಿಜೆಪಿಯನ್ನು ಸೋಲಿಸಿ ರಮೇಶ ವೀರಾಪೂರು

ಹಟ್ಟಿ: ಮೇ ದಿನ ಆರಂಭವಾಗಿರುವುದೇ ಬಂಡವಾಳಗಾರರು ಕಾರ್ಮಿಕರನ್ನು ಪ್ರಾಣಿಗಳಂತೆ ದುಡಿಸಿಕೊಳ್ಳುತ್ತಿರುವುದರ ವಿರುದ್ಧ ನಡೆದ ದೀರ್ಘ ಹೋರಾಟದ ಪ್ರತಿಫಲದಿಂದ. ಆದರೆ ಇಂದು ನಮ್ಮನ್ನಾಳುತ್ತಿರುವ ಬಂಡವಾಳಗಾರರ ಪಕ್ಷ ಮತ್ತೆ ಕಾರ್ಮಿಕ ವರ್ಗವನ್ನು ಗುಲಾಮರಾಗಿಸುವ 8 ಗಂಟೆ ಕೆಲಸದಿಂದ 12 ಗಂಟೆಗೆ ಹೆಚ್ಚಳದ ಕಾನೂನು ಮೇ ದಿನದ ಸಂದರ್ಭದಲ್ಲಿ ಜಾರಿ ಮಾಡಿಸುತ್ತಿರುವುದು ಕಾರ್ಮಿಕ ವರ್ಗ ಸಹಿಸಲು ಸಾಧ್ಯವಿಲ್ಲ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಆಕ್ರೋಶ ವ್ಯಕ್ತಪಡಿಸಿದರು.

ವೀರಾಪೂರು ಗ್ರಾಮದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗೋಕಟ್ಟೆ ಕಾಮಗಾರಿ ಸ್ಥಳದಲ್ಲಿ ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘ ದ ನೇತೃತ್ವದಲ್ಲಿ ನಡೆದ 138ನೇ ವಿಶ್ವ ಕಾರ್ಮಿಕ ದಿನಾಚರಣೆ ಉದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರವು ಕಾರ್ಮಿಕ ಸಂಘಟನೆಗಳ ಆಗ್ರಹಗಳಿಗೆ ಬೆಲೆ ನೀಡುತ್ತಿಲ್ಲ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ ಪ್ಯಾಸಿಸ್ಟ್‌ ದಾರಿಯಲ್ಲಿ ಸಾಗುತ್ತಿದೆ. ಬಂಡವಾಳಗಾರರ ಮನವಿಗಳಿಗೆ ಸ್ಪಂದಿಸುತ್ತ ಶ್ರಮಿಕರ, ಜನಸಾಮಾನ್ಯರ ಸಾವಿರಾರು ಕೋಟಿ ಹಣಗಳನ್ನು ಧಾರೆ ಎರೆಯುತ್ತಿದೆ. ಲಾಕ್ ಡೌನ್ ಅವಧಿಯಲ್ಲಿ ಕಾರ್ಮಿಕರನ್ನು ಜನಸಾಮಾನ್ಯರನ್ನು ರಕ್ಷಿಸಲು ಯಾವುದೇ ಹೊಸ ಪ್ಯಾಕೇಜ್ ಗಳನ್ನು ಘೋಷಿಸದೇ ಅನ್ಯಾಯ ಮಾಡಿದೆ. ಆದರೆ ಇಂತಹ ಕಷ್ಟದ ಸಂದರ್ಭದಲ್ಲಿಯೂ ದೇಶದ ಕೆಲವು ಅವರ ಹಿಂಬಾಲಕ ಬಂಡವಾಳಗಾರರಿಗೆ ಸಾವಿರಾರು ಕೋಟಿ ಸಾಲ ಮನ್ನಾ ಮಾಡಿರುವುದು ಜನರಿಗೆ ಮಾಡಿದ ಮೋಸವಾಗಿದೆ. ಇಂತಹ ಬಂಡವಾಳ ಶಾಹಿ ಸರ್ಕಾರವನ್ನು ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕ ವರ್ಗ ಸೋಲಿಸಿ ಸಮಾಜವಾದಕ್ಕಾಗಿ ಹೋರಾಟ ತೀವ್ರಗೊಳಿಸಬೇಕು ಎಂದು ಹೇಳಿದರು.

ಸಿಐಟಿಯು ತಾಲೂಕು ಸಂಚಾಲಕ ಮಹ್ಮದ್ ಹನೀಫ್ ಮಾತನಾಡಿ, ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿದರು. ಕಟ್ಟಡ ಕಾರ್ಮಿಕ ಸಂಘಟನೆಯ ತಾಲೂಕ ಕಾರ್ಯದರ್ಶಿ ನಿಂಗಪ್ಪ ಎಂ ಮಾತನಾಡಿದರು.

ಈ ಸಂದರ್ಭದಲ್ಲಿ ಸಿಐಟಿಯು ಮುಖಂಡರಾದ ಅಮರೇಶ್ ಗುರಿಕಾರ್, ಫಕ್ರುದ್ದೀನ್, ವೆಂಕಟೇಶ್ ಗೋರ್ಕಲ್, ಅಲ್ಲಾಭಕ್ಷ, ಲಿಂಗರಾಜ್ ದೇಸಾಯಿ, ನಾಗಮ್ಮ ಕಾಟಿಗಲ್, ನಿಂಗಮ್ಮ, ಬೆಟ್ಟಪ್ಪ, ಹಸೇನ್ ಸಾಬ್ ಸೇರಿದಂತೆ ಅನೇಕ ಕೂಲಿಕಾರರ ಕಾರ್ಮಿಕರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago