ಕಲಬುರಗಿ: ನಗರದ ಕೊಟನೂರ (ಡಿ) ಬಡಾವಣೆಯಲ್ಲಿ ಡಾ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆ ಆಗಿರುವ ಆರೋಪಿಗಳ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೈಕ್ ಕಾರು ಜಖಂಗೊಳಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಡಾ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಸಂಗಮೇಶ ಮಾಲಿಪಾಟೀಲ್ ಮನೆ ಮೇಲೆ ಈ ಹಲ್ಲೆ ನಡೆದೆ. ಇತ್ತೀಚೆಗಷ್ಟೇ ಕೋರ್ಟ್ನಿಂದ ಜಾಮೀನು ಮಂಜೂರು ಹೊರಬಂದಿದ್ದು, ಆರೋಪಿ ಕುಟುಂಬಸ್ಥರಿಗೆ ಅವ್ಯಾಚ್ಚ ಶಬ್ದಗಳಿಂದ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಬೈಕ್ ಕಾರು ಜಖಂಗೊಳಿಸಿದ ಕಿಡಿಗೇಡಿಗಳು ಬೈಯ್ದು ರಾತ್ರಿ ವೇಳೆ ದಾಂಧಲೆ ಮಾಡಿದ್ದಾರೆ.
ಘಟನೆಯಲ್ಲಿ ಹಲವರಾರು ದ್ವೀಚಕ್ರ ವಾಹನ, ಕಾರುಗಳ ಗಾಜು ಪುಡಿಪುಡಿಯಾಗಿದ್ದು, ಕುಟುಂಬಸ್ಥರಿಗೆ ಸಣ್ಣಪುಟ್ಟ ಗಾಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಕಿಡಿಗೇಡಿಗಳ ದಾಳಿಗೆ ವೀರಶೈವ-ಲಿಂಗಾಯತ ಸಮಾಜದಿಂದ ತೀವ್ರ ಆಕ್ರೋಶ ವ್ಯಕ್ತಪವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕಲಬುರಗಿ ಬಂದ್ಗೆ ಕರೆ ಕೊಡಲಾಗುವುದು ಎಂದು ಜಿಲ್ಲಾಡಳಿತಕ್ಕೆ ಪೊಲೀಸ್ ಇಲಾಖೆಗೆ ವೀರಶೈವ/ಲಿಂಗಾಯತ ಸಮಾಜ ಎಚ್ಚರಿಕೆ ನೀಡಿ ನಗರದ ರಾಮ ಮಂದಿರ ವೃತದಲ್ಲಿ ಕಲಬುರಗಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಆಗ್ರಹಿಸಿದ್ದಾರೆ. ಗುಲ್ಬರ್ಗಾ ವಿವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…