ಬಿಸಿ ಬಿಸಿ ಸುದ್ದಿ

ಈ ಚುನಾವಣೆಯಲ್ಲಿ ಬಿಜೆಪಿ ಅರಳಿದರೆ ವಿಧಾನಸಭೆಗೆ ನಿತಿನ್ ಗೆಲುವು ಕೂಡ ಖಚಿತ: ಬಿ. ವೈ ವಿಜಯೇಂದ್ರ

ಅಫಜಲ್ಪುರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಫಜಲ್ಪುರ ಮತಕ್ಷೇತ್ರದಲ್ಲಿ ಕಮಲ ಅರಳಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿತಿನ್ ಗುತ್ತೇದಾರ್ ಗೆಲುವು ಕೂಡ ಖಚಿತವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಅಫಜಲ್ಪುರದ ಮಹಾಂತೇಶ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬುಧವಾರ ನಡೆದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ ದೇಶದ ರಕ್ಷಣೆ, ಸುರಕ್ಷತೆ ಮತ್ತು ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಫ್ಜಲ್ಪುರ ಮತಕ್ಷೇತ್ರದಿಂದ 40 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರೆ ಮುಂದಿನ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಕಮಲ ಅರಳುವುದು ನಿಶ್ಚಿತ. ನಿತಿನ್ ಗುತ್ತೇದಾರ್ ಶಾಸಕರಾಗುವುದು ಶತಸಿದ್ಧ ಎಂದು ವಿಜಯೇಂದ್ರ ಭರವಸೆ ನೀಡಿದರು.

ಭಾರಿ ಸಂಖ್ಯೆಯಲ್ಲಿ ನೆರೆದ ಜನಸ್ತೋಮವನ್ನು ಕಂಡು ಸಂತಸ ಹೊಂದಿ ನಿತಿನ್ ಗುತ್ತೇದಾರ್ ಅವರು ಕ್ಷೇತ್ರದ ತಾಯಂದಿರ ಹಿರಿಯರ ಮತ್ತು ಯುವಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಆ ಪ್ರೀತಿಯನ್ನು ಉಳಿಸಿ ಬೆಳೆಸುವ ದೊಡ್ಡ ಜವಾಬ್ದಾರಿ ಹೆಗಲ ಮೇಲಿದೆ. ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವನ್ನು ಕಾಣುವ ಸೂಚನೆ ಇದಾಗಿದೆ ಎಂದರು.

ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ಕಲ್ಬುರ್ಗಿಯಲ್ಲಿ ಕ್ರಿಯಾಶೀಲ ಸಂಸದರಾದ ಡಾ. ಉಮೇಶ್ ಜಾಧವ್ ಅವರಿಗೆ ಎರಡನೇ ಬಾರಿಗೆ ಲೋಕಸಭೆಗೆ ಆಯ್ಕೆ ಮಾಡಲು ಮೇ ಏಳರಂದು ಬೆಳಿಗ್ಗೆನೇ ಮತದಾನ ಮಾಡಿ ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕಾಗಿದೆ. ಆ ದಿನ ಮುಂಜಾನೆಯಿಂದ ಮೋದಿ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಿ ಮತ ಹಾಕಿಸುವ ದೊಡ್ಡ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ದೇಶದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಜನತಾದಳದ ಹಿರಿಯರಾದ ದೇವೇಗೌಡರು ಮೋದಿ ಅವರಿಗೆ ಬೆಂಬಲಿಸಿದ್ದಾರೆಯೇ ವಿನಹ ಈ ಮೈತ್ರಿಯಲ್ಲಿ ಬೇರೆ ಯಾವುದೇ ಸ್ವಾರ್ಥ ಇಲ್ಲ ಎಂದು ಸ್ಪಷ್ಟಪಡಿಸಿದರು.

ಭ್ರಷ್ಟ ಕಾಂಗ್ರೆಸ್ ಜಾತಿ ಜಾತಿಗಳ ನಡುವೆ ವಿಷಯ ಬಿಜೆಪಿ ಹಣ ಹೆಂಡ ಅಧಿಕಾರ ದ ಪಕ್ಕದಲ್ಲಿ ಈ ಚುನಾವಣೆಯನ್ನು ಗೆಲ್ಲಲು ಹೊರಟಿದೆ. ಕಾಂಗ್ರೆಸ್ಸಿನ ತಾತ್ಕಾಲಿಕ ಯೋಜನೆಗಳಿಗೆ ಮರುಳಾಗದೆ ದೇಶದ ಉತ್ತಮ ಭವಿಷ್ಯಕ್ಕಾಗಿ ಮೋದಿಯವರ ಕೈ ಬಲಪಡಿಸಬೇಕಾಗಿದೆ. ದರಿದ್ರ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ.ರಾಜ್ಯದಲ್ಲಿ 900 ರೈತರು ಆತ್ಮಹತ್ಯೆ ಆಗಿದ್ದು ಜಾನ್ ಜನ ಜಾನುವಾರುಗಳು ಕಂಗಾಲು ಪರಿಸ್ಥಿತಿಯಲ್ಲಿದೆ. ರೈತರಿಗೆ ಪರಿಹಾರ ನೀಡಲು ಹಣವಿಲ್ಲದೆ ಕೇಂದ್ರ ಸರಕಾರದ ಮೇಲೆ ಆರೋಪ ಹೊರಿಸಿ ಕಾಂಗ್ರೆಸ್ ಕೈ ಚೆಲ್ಲಿದೆ. ಯಡಿಯೂರಪ್ಪ ಸರಕಾರವಿದ್ದಾಗ ತೀವ್ರ ನೆರೆಹಾವಳಿಯಿಂದ ತುತ್ತಾದಾಗ ಕೇಂದ್ರದ ನೆರವು ಪಡೆಯದೆ ಪರಿಹಾರವನ್ನು ನೀಡಲು ಸಾಧ್ಯವಾಗಿದೆ ಕಾಂಗ್ರೆಸಿನವರಿಗೆ ಯಾಕೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ಮತಯಾಚಿಸಲು ಬಂದಾಗ ಕೇಳಿ ಎಂದು ಹೇಳಿದರು.

ಹುಬ್ಬಳ್ಳಿಯ ನೇಹಾ ಘಟನೆ ಬೆಳಗಾವಿಯ ವಿವಸ್ತ್ರ ಘಟನೆಗಳಿಂದ ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿ ಕೆಟ್ಟ ಪರಿಸ್ಥಿತಿ ಇದೆ. ರಾಜ್ಯ ಸರಕಾರದ ದುರಾಡಳಿತ ವಿರುದ್ಧ ಮತ್ತು ವಿಶ್ವ ಮೆಚ್ಚುವ ರೀತಿಯಲ್ಲಿ ಆಡಳಿತ ನೀಡಿ ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಿದ ಮೋದಿಯವರಿಗೆ ಈ ಬಾರಿ ಮತ ಚಲಾಯಿಸುವ ಸಂಕಲ್ಪ ಮಾಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ನಿತಿನ್ ಗುತ್ತೇದಾರ್, ಚಂದು ಪಾಟೀಲ್ ಅವಣ್ಣ ಮ್ಯಾಕೇರಿ, ಸೋಲಾಪುರದ ಸಂಸದರಾದ ಡಾ. ಜೈಸಿದ್ದೇಶ್ವರ ಸ್ವಾಮಿ, ಜೆಡಿಎಸ್ ಮುಖಂಡರಾದ ಶಿವಕುಮಾರ್ ನಾಟಿಕಾರ್ ರಮೇಶ್ ನೀಲಗಾರ್ ತುಕಾರಾಂ ಗೌಡ ಪಾಟೀಲ್ ಶಂಕರ ಮ್ಯಾಕೇರಿ ಪ್ರಭಾವತಿ ಮುಂತಾದವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಶರಣು ತಳ್ಳಿ ಕೇರಿ, ಸಿದ್ದಾಜಿ ಪಾಟೀಲ್ ತಮ್ಮೇಶ್ ಗೌಡ ಮಾಜಿ ಸಚಿವ ಬಾಬುರಾವ್ ವೀರಣ್ಣ ಕಲ್ಲೂರ್,ಮಳೆಂದ್ರ ಡಾಂಗೆ, ಶೈಲೇಶ್ ಗುಣಾರಿ, ಅಶೋಕ್ ಬಗಲಿ ಗೋವಿಂದ ಭಟ್ ಪೂಜಾರಿ ದಿಲೀಪ್ ಪಾಟೀಲ್ ಮಲ್ಲಿಕಾರ್ಜುನ ನಿಂಗದಹಳ್ಳಿ ಮತ್ತಿತರರು ಉಪಸ್ಥಿತರಿದ್ದರು ಮಂಡಲ ಅಧ್ಯಕ್ಷ ವಿದ್ಯಾಧರ ಮಂಗಳೂರು ಸ್ವಾಗತ ಕೋರಿದರು.

ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಅಫ್ಜಲ್ ಪುರ ತಾಲೂಕಿನ ಅಳಿಯನಾಗಿದ್ದು ಪ್ರಪ್ರಥಮ ಬಾರಿಗೆ ಭೇಟಿ ಕೊಡುತ್ತಿರುವ ಸಂದರ್ಭದಲ್ಲಿ ಕ್ರೇನ್ ಮೂಲಕ ಹಾರಿ ಗಾತ್ರದ ಹಾರ ಸಮರ್ಪಣೆ ಮಾಡುವುದರೊಂದಿಗೆ ಬಸವೇಶ್ವರ ವೃತ್ತದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ದಾರಿಯುವುದಕ್ಕೂ ಪುಷ್ಪವೃಷ್ಠಿಯೊಂದಿಗೆ ಮೆರವಣಿಗೆಯಲ್ಲಿ ವೇದಿಕೆಗೆ ಕರೆತರಲಾಯಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago