ಕಲಬುರಗಿ: ಕೋಟನೂರು ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕಾನೂನು ಕೈಗೆತ್ತಿಕೊಂಡವರನ್ನು ಈಗಾಗಲೇ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಹಾಗಾಗಿ, ಸಾರ್ವಜನಿಕರು ಯಾವುದೆ ಕಾರಣಕ್ಕೂ ಭಾವೋಗ್ವೇಗಕ್ಕೆ ಒಳಗಾಗದಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಸಚಿವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಹಾಗೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕೋಟನೂರು ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂದಪಟ್ಟವರನ್ನು ಈಗಾಗಲೇ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಹಾಗಾಗಿ, ಯಾರೊಬ್ಬರು ಆತಂಕಕ್ಕೊಳಗಾಗಬಾರದು. ಕಾನೂನು ವ್ಯಾಪ್ತಿ ಮೀರಿ ನಡೆದುಕೊಳ್ಳುವವರು ಯಾರೇ ಆಗಿರಲಿ ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…