ಹಟ್ಟಿ: ಚಿನ್ನದ ಗಣಿ ಕಾರ್ಮಿಕರ ಮತ್ತು ಅಧಿಕಾರಿಗಳ ಮನೆ ಕೆಲಸ ಮಾಡುವ ಕಾರ್ಮಿಕರ ಸಭೆ ನಡೆಸಿ ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಇಂಡಿಯಾ ಕೂಟದ ಪ್ರಬಲ ಅಭ್ಯರ್ಥಿಗೆ ಮತ ಚಲಾಯಸಬೇಕು ಎಂದು ಸಿಪಿಐ (ಎಂ) ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು ಕರೆ ನೀಡಿದರು.
ಮನೆಗೆಲಸ ಮಾಡಿ ಜೀವನ ನಡೆಸಲು ಸಾಧ್ಯವಾಗದಂತಹ ಸಂಬಳ ಪಡೆಯುತ್ತಿದ್ದಾರೆ. ಅವಧಿ ಮೀರಿ ಕೆಲಸ ಮಾಡಿದರೂ ನಗರಗಳಲ್ಲಿ ಒಪ್ಪತ್ತಿನ ಊಟಕ್ಕೂ ಪರಿತಪಿಸುವಂತಾಗಿದೆ. ತಿಂಗಳಿಗೆ ಬಿಡಿಗಾಸು ಪಡೆದು ಜೀವನ ನಡೆಸುವುದು ದುಸ್ತರವಾಗಿದೆ. ಕಾರ್ಮಿಕರ ಬದುಕು ಬೆಳಗಿಸುತ್ತೇವೆ ಎಂದು ಹೇಳುವ ಕೇಂದ್ರ ಸರಕಾರ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಕಾರ್ಮಿಕರ ಬದುಕನ್ನು ಮೂರಾಬಟ್ಟೆ ಮಾಡಿದೆ. ಇಂತಹ ಜನ ವಿರೋಧಿ ಕಾರ್ಮಿಕ ವಿರೋಧಿ ಸರ್ಕಾರ ಅಧಿಕಾರಕ್ಕೆ ಬರಲು ಬಿಡಬಾರದು. ಅಮರೇಶ್ವರ ನಾಯಕ ಎಂಪಿ ಆಗಿ ಒಂದು ದಿನವೂ ಕಾರ್ಮಿಕರ ಕಷ್ಟ ಕೇಳಿಲ್ಲ. ಇಂತಹ ಕಾರ್ಮಿಕ ವಿರೋಧಿ ಬಿಜೆಪಿ ಅಭ್ಯರ್ಥಿ ಅಮರೇಶ್ವರ ನಾಯಕ್ ವಿರುದ್ಧವಾಗಿ ಮತ ಚಲಾಯಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ನಿಂಗಪ್ಪ ಎಂ, ದಾವೂದ್ ಸೇರಿದಂತೆ ಮನೆಗೆಲಸ ಕಾರ್ಮಿಕ ಸಂಘದ ಮುಖಂಡರು, ನೂರಾರು ಮನೆಗೆಲಸ ಮಾಡುವ ಕಾರ್ಮಿಕರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…