ಕಲಬುರಗಿ: ಕಸಾಪ ಸಂಸ್ಥಾಪನಾ ದಿನಾಚರಣೆ 5 ರಂದು

0
96

ಕಲಬುರಗಿ: ಕನ್ನಡದ ಅಸ್ಮಿತೆಯ ಪ್ರತೀಕವಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ 110 ನೇ ಸಂಸ್ಥಾಪನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹತ್ವದ ಸಾಧನೆ ಮಾಡಿದೆ. ಪರಿಷತ್ತು ಕನ್ನಡ ಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡಿದೆ. ಕಸಾಪ ದ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಹೊಸದೊಂದು ಸ್ಪರ್ಶ ನೀಡಿದ್ದಾರೆ ಎಂದು ಅವರು ವಿವರಿಸಿದ್ದಾರೆ.

Contact Your\'s Advertisement; 9902492681

ಜಿಲ್ಲೆಯ 110 ಜನ ಲೇಖಕರ ಪುಸ್ತಕಗಳ ಪ್ರದರ್ಶನ ಹಾಗೂ 110 ಜನ ಪರಿಷತ್ತಿನ ಹಿರಿಯ ಸದಸ್ಯರಿಗೆ ಗೌರವ ಪುರಸ್ಕಾರದ ಸಮಾರಂಭವನ್ನು ಮೇ 5 ರಂದು ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದ ಪ್ರಾಂಗಣದಲ್ಲಿ ಏರ್ಪಡಿಸಲಾಗಿದೆ.

ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಟಿ.ವಿ. ಶಿವಾನಂದನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಕ

ಲಬುರಗಿ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ನಿರ್ವಾಹಕ ಡಾ. ಸದಾನಂದ ಪೆರ್ಲ, ಎಸ್ ಎಸ್ ಎಲ್. ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಸವಿತಾ ಗಿರಿ, ಗುಲಬರ್ಗ ವಿಶ್ವವಿದ್ಯಾಲಯದ ಉಪನ್ಯಾಸಕಿ ಡಾ. ಶೀಲಾದೇವಿ ಎಸ್ ಬಿರಾದಾರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಧರ್ಮಣ್ಣಾ ಹೆಚ್ ಧನ್ನಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here