ಕಲಬುರಗಿ: ನಗರದ ಕೊಟನೂರ (ಡಿ) ಬಡಾವಣೆಯಲ್ಲಿ ಡಾ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆ ಆಗಿರುವ ಆರೋಪಿಗಳ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಹಲ್ಲೆ ನಡೆಸಿರುವ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದರು.
ಗುರುವಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು ಮೂರು ತಿಂಗಳಹಿಂದೆ ಅಂಬೇಡ್ಕರ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದ ಆರೋಪಿ ಜಾಮೀನು ಮೇಲೆ ಬಿಡುಗಡೆಯಾಗಿ ಬಂದಿದ್ದಾ ಅವನ ಮೇಲೆ ಹಲ್ಲೆ ಮಾಡಿದ್ದಾರೆ ನನಗೂ ನಿನ್ನೆ ಗೊತ್ತಾಗಿದೆ. ಹಲ್ಲೆಗೊಳಗಾದ ಸಂಗಮೇಶ್ ಮೇಲೆ ಹಲ್ಲೆ ಮಾಡಿದ್ದು ತಪ್ಪು. ಪ್ರಕರಣವನ್ನು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಚಿಂತನೆ ಇದ್ದು, ಈ ಪ್ರಕರಣ ಸಿಐಡಿಗೆ ವಹಿಸುತ್ತೆವೆ ಎಂದು ತಿಳಿಸಿದರು.