ಕಲಬುರಗಿ: ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಇದೇ 4 ರಂದು ಸಂಜೆ 5 ಗಂಟೆಗೆ ರಾಜ್ಯ ಮಟ್ಟದ ಕೋಲಿ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಮಾಜದರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಮಾಜದ ಮುಖಂಡರು ಮನವಿ ಮಾಡಿದರು.
ನಗರದ ಮಾಣಿಕೇಶ್ವರ ಕಾಲನಿಯಲ್ಲಿ ಕೋಲಿ ಸಮಾಜದ ಮುಖಂಡರು ಗುರುವಾರ ಪೂರ್ವ ಸಿದ್ಧತಾ ಸಭೆ ನಡೆಸಿ, ಕೋಲಿ ಕಬ್ಬಲಿಗ ಜನಾಂಗವನ್ನು ಎಸ್.ಟಿ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಈ ರಾಜ್ಯ ಮಟ್ಟದ ಸಭೆ ಹಮ್ಮಿಕೋಳಲಾಗಿದೆ ಎಂದು ಸಮಾಜದ ಮುಖಂಡ ಅರ್ಜುನ ಜಮಾದಾರ ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ. ಕೆಕೆಆರ್ ಟಿಸಿ ಮಾಜಿ ಅಧ್ಯಕ್ಷರಾದ ಭೀಮಣ್ಣ ಸಾಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ್ ರೆಡ್ಡಿ, ಲಚ್ಚಪ್ಪ ಜಮಾದಾರ ಅವರ ನೇತೃತ್ವದಲ್ಲಿ ಈ ಸಮಾವೇಶ ಏರ್ಪಡಿಸಲಾಗಿದೆ ಎಂದರು.
ಮೇ 4ರಂದು ಬೃಹತ್ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಕೋಲಿ ಸಮಾಜದ ಬಹುದಿನದ ಬೇಡಿಕೆಯಾದ ಎಸ್ ಟಿ ಸೇರ್ಪಡೆ ಕುರಿತು ಈ ಸಮಾವೇಶಕ್ಕೆ ಲಕ್ಷಾಂತರ ಜನರು ಬರುವ ಸಾಧ್ಯತೆ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದವರು ಪಾಲ್ಗೊಂಡು ಈ ಸಮಾವೇಶ ಯಶಸ್ಸಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಭೆಯಲ್ಲಿ ಜಯಪ್ರಕಾಶ್ ಕಮಕನೂರ, ರಮೇಶ ಕಮಕನೂರ, ಜಗನ್ನಾಥ ಭೀಮನಳ್ಳಿಕರ್, ಶಿವರಾಜ ಕಿರಸಾವಳಗಿ, ರಾಜು ಸೋನ್ನ, ಮಾಣಿಕ ಸೂರಪೂರ, ನಿಂಗಣ್ಣಾ ಸೋಮನೂರ, ಸುಖದೇವ ಕೋಗನೂರ, ದಿಲೀಪ ಕಿರಸಾವಳಗಿ, ವಿಜಯಕುಮಾರ ಹದಗಲ್, ವಿಜಯಕುಮಾರ ಹವೇಲಿ, ಸುರೇಶ ಬೆನಕನಳ್ಳಿ, ಸಂಗನಾಥ ಕಣ್ಣಿ, ಉದಯಕುಮಾರ ಚಿಣಮಗೇರಿ,ನೀಲಕಂಠ ಸೋಮನೂರ, ಸಂತೋಷ ಕಲಬೇನ್ನರ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…