ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

0
18

ಕಲಬುರಗಿ: ಸಾರ್ವತ್ರಿಕ ಲೋಕಸಭಾ ಚುನಾವಾಣೆಗೆ ಇದೇ ಮೇ 7 ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ ಮೇ 5ರ ಸಾಯಂಕಾಲ 6 ಗಂಟೆಯಿಂದ ಮೇ 7ರ ಸಾಯಂಕಾಲ 6.30 ಗಂಟೆ ವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ದೂರದರ್ಶನದಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 126(1)(ಬಿ) ರಂತೆ ನಿರ್ಬಂಧಿಸಲಾಗಿದೆ ಎಂದು ಗುಲಬರ್ಗಾ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Contact Your\'s Advertisement; 9902492681

ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ ಎಂದಿದ್ದಾರೆ.

*ಮುದ್ರಣ ಜಾಹೀರಾತಿಗೆ ಅನುಮತಿ ಕಡ್ಡಾಯ:*

ಮೇ 7 ರಂದು ಮತದಾನ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 6 ಮತ್ತು ಮೇ 7 ರಂದು) ಯಾವುದೇ ಅಭ್ಯರ್ಥಿ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್ಲಿ ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸಬೇಕಾದಲ್ಲಿ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯವುದು ಕಡ್ಡಾಯವಾಗಿದೆ.

ಇದಲ್ಲದೆ ಪ್ರಜಾ ಪ್ರತಿನಿಧಿ ಕಾಯ್ದೆ-1951ರ ನಿಯಮ 127ಎ ಪ್ರಕಾರ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದ ಪ್ರತಿ ಕರಪತ್ರ, ಪಾಂಪ್ಲೆಟ್ಸ್, ಹ್ಯಾಂಡ್ ಬಿಲ್, ಬಂಟಿಂಗ್, ಬ್ಯಾನರ್, ಫ್ಲೆಕ್ಸ್, ಹೆದ್ದಾರಿ ಫಲಕಗಳ ಮೇಲೆ ಅಂಟಿಸುವ ಯಾವುದೇ ಬ್ಯಾನರ್ ಮುದ್ರಿಸಿದಲ್ಲಿ ಮುದ್ರಕರು ಜಿಲ್ಲಾ ಚನಾವಣಾಧಿಕಾರಿಗಳು/ ಚುನಾಣಾಧಿಕಾರಿಗಳಿಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here