ಕೋಟನೂರ ಘಟನೆಗೆ ಖಂಡನೆ

0
228

ಜೇವರ್ಗಿ: ಜಿಲ್ಲೆಯ ಕೋಟನೂರು ಗ್ರಾಮದಲ್ಲಿ ಲಿಂಗಾಯತ ಸಮಾಜದ ಕುಟುಂಬದ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠರಾಯ ಅವಂಟಿ ಖಂಡಿಸಿದ್ದಾರೆ.

ಈ ಪ್ರಕರಣವನ್ನು ರಾಜ್ಯ ಸರ್ಕಾರ ಈಗಾಗಲೇ ಸಿಒಡಿ ತನಿಖೆಗೆ ವಹಿಸಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ. ಆದರೆ ಇದನ್ನು ಬಿಜೆಪಿಯವರು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ತಪ್ಪು ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು.‌ ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡಿಕೊಂಡು ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here