ನಾಳೆ ಮತದಾನ: ಮತಗಟ್ಟೆಯ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧ

ಕಲಬುರಗಿ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಮೇ 7 ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ನಡೆಯಲಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

200 ಮೀಟರ್ ವ್ಯಾಪ್ತಿಯಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.

ಮತದಾನ ಶಾಂತಿಯುತ ಮತ್ತು ಸುಸೂತ್ರವಾಗಿ ನಡೆಯುವಂತೆ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. 144 ಜಾರಿಗೊಳಿಸಿದ್ದು, ಚುನಾವಣಾ ಸಿಬ್ಬಂದಿ ಹೊರತುಪಡಿಸಿ 5 ಜನಕ್ಕಿಂತ ಹೆಚ್ಚು ಜನ ಗುಂಪಾಗಿ ಸೇರುವಂತಿಲ್ಲ. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮ 36 ರನ್ವಯ ಮತದಾನ ದಿನದಂದು ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಉತ್ಸವ ಹಾಗೂ ಉರುಸ್‍ಗಳನ್ನು ನಿಷೇಧಿಸಲಾಗಿದೆ.
ಮದ್ಯ ಮಾರಾಟ ಸಹ ನಿಷೇಧಿಸಿ‌ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

ಮತದಾನ ದಿನದಂದು ರಾಜಕೀಯ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತದಾರರನ್ನು ವಾಹನದಲ್ಲಿ ಕೂರಿಸಿಕೊಂಡು ಮತಗಟ್ಟೆಗೆ ತರುವುದಾಗಲಿ ಅಥವಾ ಮತಗಟ್ಟೆಯಿಂದ ಮನೆಗೆ ಬಿಡುವಂತ ಯಾವುದೇ ಸೇವೆ ನೀಡುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಎಚ್ಚರಿಕೆ ನೀಡಿದ್ದಾರೆ.

*ಮೊಬೈಲ್ ಫೋನ್ ನಿಷೇಧ:*

ಮತದಾನಕ್ಕಾಗಿ ಆಗಮಿಸುವ ಮತದಾರರಿಗೆ ಮತಗಟ್ಟೆ ಕೇಂದ್ರಗಳ ಒಳಗಡೆ ಮೊಬೈಲ್ ಫೋನ್‍ನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದಲ್ಲದೇ ಮತಗಟ್ಟೆ ಕೇಂದ್ರಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಪೇಜರ್, ಕ್ಯಾಲ್ಕುಲೇಟರ್ ಸೇರಿದಂತೆ ಮತ್ತಿತರ ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ.

*ಪರ್ಯಾಯ ದಾಖಲೆ ತೋರಿಸಿ ಮತ ಚಲಾಯಿಸಿ:*

ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹೊಂದಿಲ್ಲದಿದ್ದರೂ ಆಧಾರ್ ಕಾರ್ಡ್, ಎಮ್.ಎನ್.ಆರ್.ಇ.ಜಿ.ಎ. (ಒಓಖಇಉಂ) ಜಾಬ್ ಕಾರ್ಡ್, ಬ್ಯಾಂಕ್ ಮತು ಅಂಚೆ ಕಚೇರಿಗಳು ನೀಡುವ ಭಾವಚಿತ್ರವುಳ್ಳ ಪಾಸ್‍ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಎನ್‍ಪಿಆರ್ ಅಡಿ ಆರ್‍ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ರಾಜ್ಯ/ ಕೇಂದ್ರ ಸರ್ಕಾರ/ ಸಾರ್ವಜನಿಕ ಉದ್ಯಮಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡುವ ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿ ಹಾಗೂ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ (ಯುಡಿಐಡಿ) ಕಾರ್ಡ್ ತೋರಿಸಿ ಮತ ಚಲಾಯಿಸಬಹುದಾಗಿದೆ.

*ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ:*

ಚುನಾವಣೆಯಲ್ಲಿ ಮತದಾನ ಮಾಡಲು ಆಗಮಿಸುವ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯ ಗುರುತು ಹಾಕಲಾಗುತ್ತದೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420